ಹೆಸರಿಗೆ ತಕ್ಕಂತೆ ಕಲ್ಯಾಣ ಕರ್ನಾಟಕ ಅಭಿವೃದ್ಧಿಯಾಗಲಿ: ಪಾಟೀಲ

ಹುಮನಾಬಾದ ತಾಲೂಕು ಆಡಳಿತದಿಂದ ಕಲ್ಯಾಣ ಕರ್ನಾಟಕ ಉತ್ಸವ

Team Udayavani, Sep 18, 2019, 5:35 PM IST

18-Sepctember-18

ಹುಮನಾಬಾದ: ಮಿನಿವಿಧಾನ ಸೌಧದಲ್ಲಿ ತಾಲೂಕು ಆಡಳಿತದಿಂದ ನಡೆದ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಶಾಸಕ ರಾಜಶೇಖರ ಪಾಟೀಲ ಮಾತನಾಡಿದರು.

ಹುಮನಾಬಾದ: ಈ ಭಾಗದ ಜನರ ಬಹುದಿನಗಳ ಬೇಡಿಕೆಯಂತೆ ಹೈದ್ರಾಬಾದ ಕರ್ನಾಟಕ ಪ್ರದೇಶಕ್ಕೆ ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿದ್ದು ಸ್ವಾಗತಾರ್ಹ. ಆದರೆ ಇದು ಕೇವಲ ಹೆಸರು ಬದಲಾವಣೆಗೆ ಮಾತ್ರ ಸೀಮಿತಗೊಳ್ಳದೇ ಈ ಭಾಗದ ಸಮಗ್ರ ಕಲ್ಯಾಣವಾದಾಗ ಮಾತ್ರ ಅದು ಸಾರ್ಥಕಗೊಳ್ಳಲು ಸಾಧ್ಯ ಎಂದು ಶಾಸಕ ರಾಜಶೇಖರ ಪಾಟೀಲ ಹೇಳಿದರು.

ಪಟ್ಟಣದ ಮಿನಿ ವಿಧಾನಸೌಧ ಪ್ರಾಂಗಣದಲ್ಲಿ ಮಂಗಳವಾರ ತಾಲೂಕು ಆಡಳಿತ ಹಮ್ಮಿಕೊಂಡಿದ್ದ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಚ್ಕೆಆರ್‌ಡಿಬಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ನನ್ನ ನೇತೃತ್ವದಲ್ಲಿ ಈ ಭಾಗದ 6 ಜಿಲ್ಲೆಗಳ 40 ಶಾಸಕರಿಂದ ಕೂಡಿದ ನಿಯೋಗ ಈ ಹಿಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿಪತ್ರ ಸಲ್ಲಿಸಿದಾಗ ಅವರು ಅದಕ್ಕೆ ಒಪ್ಪಿಗೆ ಸೂಚಿಸಿದ್ದರು. ಆದರೆ ಕಾರಣಾಂತರದಿಂದ ಬಿ.ಎಸ್‌.ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಧಿಕೃತ ಘೋಷಣೆಯಾಗಿದೆ. ಅದಕ್ಕೆ ಅಭಿನಂದಿಸುತ್ತೇವೆ ಎಂದರು.

ಕಲ್ಯಾಣ ಕರ್ನಾಟಕ ಹೈದ್ರಾಬಾದ್‌ ನಿಜಾಮನಿಂದ ಮುಕ್ತಿಗೊಳ್ಳಲು ಪ್ರಾಣತೆತ್ತ ಈ ಭಾಗದ ಅದೆಷ್ಟೋ ಮಂದಿ ರಾಷ್ಟ್ರ ಪ್ರೇಮಿಗಳ ಬದುಕು-ಹೋರಾಟ ಮುಂದಿನ ಪೀಳಿಗೆಗೆ ಪರಿಚಯಿಸುವುದು ಅತ್ಯಂತ ಅವಶ್ಯಕ. ಈ ನಿಟ್ಟಿನಲ್ಲಿ ಹೋರಾಟಗಾರರ ಜೀವನ-ಹೋರಾಟವನ್ನು ಪಠ್ಯಕ್ಕೆ ಅಳವಡಿಸುವಂತೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮತ್ತು ಶಿಕ್ಷಣ ಸಚಿವರನ್ನು ಒತ್ತಾಯಿಸುವುದಾಗಿ ತಿಳಿಸಿದರು. ಪಟ್ಟಣದ ಕೋಳಿವಾಡ ಕ್ರಾಸ್‌ನ ಸರ್ದಾರ ವಲ್ಲಭಭಾಯಿ ಪಟೇಲ ವೃತ್ತದಲ್ಲಿ ನಿರ್ಮಿಸಲಾದ ಕಟ್ಟೆ ಮೇಲೆ 2020ರ ಕಲ್ಯಾಣ ಕರ್ನಾಟಕ ಉತ್ಸವದಂದು ವಲ್ಲಭಭಾಯಿ ಪಟೇಲರ ಪುತ್ಥಳಿ ಅನಾವರಣಗೊಳಿಸುವುದಾಗಿ ಹೇಳಿದರು.

ಮುಲಾಜಿಲ್ಲದೇ ಕ್ರಮ: ಬಹುತೇಕ ಇಲಾಖೆಗಳ ಅಧಿಕಾರಿಗಳು ಇಂದಿನ ಕಾರ್ಯಕ್ರಮಕ್ಕೆ ಬಾರದೇ ಇರುವುದು ಸರಿಯಲ್ಲ. ನಮ್ಮ ನೆಮ್ಮದಿ ಬದುಕಿಗೆ ಕಾರಣರಾದ ಮಹನೀಯರಿಗೆ ಗೌರವಿಸುವ ಕನಿಷ್ಟ ಸೌಜನ್ಯ ತೋರದವರನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ತಹಶೀಲ್ದಾರ್‌ ಹಾಗೂ ತಾಲೂಕು ಪಂಚಾಯಿತಿ ಇಒ ಅವರು, ಗೈರಾದ ಅಧಿಕಾರಿಗಳಿಗೆ ಕಾರಣ ಕೇಳಿ ಮುಲಾಜಿಲ್ಲದೇ ನೊಟೀಸ್‌ ನೀಡುವಂತೆ ಆದೇಶಿಸಿದರು.

ತಹಶೀಲ್ದಾರ್‌ ಕಚೇರಿಯಲ್ಲಿ ಉಪತಹಶೀಲ್ದಾರ್‌ ಮತ್ತು ಕಚೇರಿ ಸಿಬ್ಬಂದಿ ವ್ಯಾಪಕ ಭ್ರಷ್ಟಾಚಾರ ಎಸಗುತ್ತಿರುವ ಕುರಿತು ಸಾರ್ವಜನಿಕರಿಂದ ದೂರು ಬರುತ್ತಿವೆ. ಪರಿಸ್ಥಿತಿ ಬದಲಾಗಿದ್ದರೆ ಎತ್ತಂಗಡಿ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಹಿರಿಯ ಸಾಹಿತಿ ಎಚ್.ಕಾಶೀನಾಥರೆಡ್ಡಿ ವಿಶೇಷ ಉಪನ್ಯಾಸ ನೀಡಿ, ಹೈದ್ರಾಬಾದ್‌ ಕರ್ನಾಟಕ ಹೆಸರಿನ ಬದಲಿಗೆ ಕಲ್ಯಾಣ ಕರ್ನಾಟಕ ಎಂದು ಪರಿವರ್ತನೆ ಆಗಿರುವುದು ಉತ್ತಮ ಬೆಳವಣಿಗೆ ಎಂದು ವಿವರಿಸಿದರು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಲಕ್ಷ್ಮಣರಾವ್‌ ಬುಳ್ಳಾ, ಸದಸ್ಯೆ ಭಾರತೀಬಾಯಿ ಶೇರಿಕಾರ, ತಾಲೂಕು ಪಂಚಾಯಿತಿ ಅಧ್ಯಕ್ಷ ರಮೇಶ ಎಂ.ಡಾಕುಳಗಿ, ಉಪಾಧ್ಯಕ್ಷೆ ಸುಗಂಧಾ ಅಣ್ಯಪ್ಪ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಕಂಟೆಪ್ಪ ದಾನಾ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿ ಡಾ|ಗೋವಿಂದ, ಸದಸ್ಯರಾದ ಶ್ರೀಮಂತ ಪಾಟೀಲ, ಪರಮೇಶ್ವರ ಕಳಮದರಗಿ, ಸಿಪಿಐ ಜೆ.ಎಸ್‌.ನ್ಯಾಮಗೌಡರ್‌, ಪಟ್ಟಣದ ಪುರಸಭೆ ಸದಸ್ಯ ಅಪ್ಸರಮಿಯ್ಯ ಇನ್ನೂ ಮೊದಲಾದವರು ಇದ್ದರು. ವಿವಿಧ ಶಾಲಾ ವಿದ್ಯಾರ್ಥಿಗಳ ಸಾಂಸ್ಕೃತಿಕ ಚಟುವಟಿಕೆಗಳ ಪ್ರದರ್ಶನ, ಚಿಣ್ಣರ ಭಾಷಣ ನೆರೆದ ಪ್ರೇಕ್ಷಕರ ಕಣ್ಮನ ಸೆಳೆದವು. ತಹಶೀಲ್ದಾರ್‌ ನಾಗಯ್ಯಸ್ವಾಮಿ ಹಿರೇಮಠ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಸ್ವಾಗತಿಸಿದರು. ಸಹಾಯಕ ಕೃಷಿ ನಿರ್ದೇಶಕ ಡಾ| ಪಿ.ಎಂ.ಮಲ್ಲಿಕಾರ್ಜುನ ನಿರೂಪಿಸಿದರು.

ಟಾಪ್ ನ್ಯೂಸ್

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

accident

Udupi: ಬೈಕ್‌ ಢಿಕ್ಕಿ; ವ್ಯಕ್ತಿಗೆ ಗಾಯ; ಪ್ರಕರಣ ದಾಖಲು

2

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.