ಸಂಶೋಧನಾ ಪ್ರವೃತ್ತಿ ರೂಢಿಸಿಕೊಳ್ಳಿ

ಜೀವನದಲ್ಲಿ ಸಾಧನೆಗೆ ಅಸಾಧ್ಯವಾದದ್ದು ಯಾವುದೂ ಇಲ್ಲ: ವಿಜ್ಞಾನಿ ಭಟ್

Team Udayavani, Aug 26, 2019, 3:56 PM IST

26-Agust-32

ಹುಮನಾಬಾದ: ರಾಜ್ಯ ವಿಜ್ಞಾನ ಪರಿಷತ್‌ ಆಶ್ರಯದಲ್ಲಿ ಏರ್ಪಡಿಸಿದ್ದ ರಾಜ್ಯಮಟ್ಟದ ಕನ್ನಡ ವಿಜ್ಞಾನ ಉಪನ್ಯಾಸ ಸ್ಪರ್ಧೆಯನ್ನು ಇಸ್ರೋ ವಿಜ್ಞಾನಿ ಪಿ.ಜೆ.ಭಟ್ ಉದ್ಘಾಟಿಸಿದರು

ಹುಮನಾಬಾದ: ಸ‌ಂಶೋಧನಾ ಪ್ರವೃತ್ತಿ ಹೆಚ್ಚಿಸುವುದರಿಂದ ವಿದ್ಯಾರ್ಥಿಗಳು ಸೇರಿದಂತೆ ಜನಸಾಮಾನ್ಯರಲ್ಲಿ ವೈಜ್ಞಾನಿಕ ಮನೋಭಾವನೆ ವೃದ್ಧಿಯಾಗಲು ಸಾಧ್ಯ. ಈ ನಿಟ್ಟಿನಲ್ಲಿ ವರ್ಗ ಕೋಣೆಯಲ್ಲಿ ಪ್ರಶ್ನೆ ಕೇಳುವ ವಿದ್ಯಾರ್ಥಿಗಳನ್ನು ಶಿಕ್ಷಕರು ನಿರ್ಲಕ್ಷಿಸದೇ ಪ್ರೋತ್ಸಾಹಿಸುವುದನ್ನು ರೂಢಿಸಿಕೊಳ್ಳಬೇಕು ಎಂದು ಇಸ್ರೋ ನಿವೃತ್ತ ಖ್ಯಾತ ವಿಜ್ಞಾನಿ ಪಿ.ಜೆ.ಭಟ್ ಸಲಹೆ ನೀಡಿದರು.

ರಾಜ್ಯ ವಿಜ್ಞಾನ ಪರಿಷತ್‌, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ, ಕರಾವಿಪ ಜಿಲ್ಲಾ ಘಟಕದ ಹಾಗೂ ಶ್ರೀವೀರಭದ್ರೇಶ್ವರ ಶಿಕ್ಷಣ ದತ್ತಿಯ ಔಷಧ ವಿಜ್ಞಾನ ಮಹಾವಿದ್ಯಾಲಯಗಳ ಸಂಯುಕ್ತ ಆಶ್ರಯದಲ್ಲಿ ವಿಜ್ಞಾನ ಪದವಿ ಕಾಲೇಜು ಹಾಗೂ ಬಿ.ಇಡಿ ಪ್ರಶಿಕ್ಷಣಾರ್ಥಿಗಳಿಗಾಗಿ ಏರ್ಪಡಿಸಿದ್ದ ರಾಜ್ಯ ಮಟ್ಟದ ಕನ್ನಡ ವಿಜ್ಞಾನ ಉಪನ್ಯಾಸ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಸಮಸ್ಯೆ ಎದುರಾಗುವ ಮುನ್ನವೇ ತಮ್ಮನ್ನು ತಾವು ಅಸಮರ್ಥರೆಂದು ನಿರ್ಧರಿಸಿಕೊಂಡಿದ್ದಾರೆ. ಜೀವನದಲ್ಲಿ ಸಾಧನೆಗೆ ಅಸಾಧ್ಯವಾದದ್ದು, ಯಾವುದು ಇಲ್ಲ. ನಿರ್ದಿಷ್ಟ ಗುರಿ, ಉತ್ತಮ ಗುರುವಿನ ಜತೆಗೆ ಸತತ ಪರಿಶ್ರಮ ಪಡುವವರಿಗೆ ಸಮಸ್ಯೆ ಎಷ್ಟೇ ಕಠಿಣವಿದ್ದರೂ ಅತ್ಯಂತ ಸರಳವಾಗಿ ಬಗೆಹರಿಸಲು ಸಾಧ್ಯ ಎಂದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಸುರೇಶ ಚೆನಶೆಟ್ಟಿ ಮಾತನಾಡಿ, ಮನುಷ್ಯನ ರಕ್ತದೊಂದಿಗೆ ಬರುವ ಮಾತೃಭಾಷೆ ಅತ್ಯಂತ ಶ್ರೇಷ್ಠ. ಕನಸು ಕೊಡಲು ಸಾಧ್ಯವಾಗದ ಭಾಷೆಯಿಂದ ಜೀವನದಲ್ಲಿ ಏನನ್ನೂ ಸಾಧಿಸಲಾಗದು. ವಿದ್ಯಾರ್ಥಿಗಳ ಬುದ್ಧಿ ಶಕ್ತಿ ತಿಳಿಯಲು ಅಂಕಗಳು ಮಾನದಂಡವಾಗದೇ ನೈಜ ಜ್ಞಾನ ಅಳತೆ ಗೋಲಾಗಿಸಬೇಕು. ವೈಜ್ಞಾನಿಕ ಮನೋಭಾವ ವೃದ್ಧಿಗೊಳಿಸುವುದರ ಭರದಲ್ಲಿ ಜೀವನ ಮೌಲ್ಯ ಕಲಿಸಿಕೊಡುವುದರಿಂದ ವಿದ್ಯಾರ್ಥಿಗಳನ್ನು ಯಾವುದೇ ಕಾರಣಕ್ಕೂ ವಂಚಿತರನ್ನಾಗಿಸಬಾರದು ಎಂದರು.

ಪ್ರಾಸ್ತಾವಿಕ ಮಾತನಾಡಿದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌ ಗೌರವ ಕಾರ್ಯದರ್ಶಿ ಗಿರೀಶ ಕಡ್ಲೆವಾಡ್‌, ನಾಡೋಜ ಡಾ.ಎಚ್.ನರಸಿಂಹಯ್ಯ ಅವರ ಸಾರಥ್ಯದಲ್ಲಿ 1980ರಲ್ಲಿ ಸ್ಥಾಪಿಸಲ್ಪಟ್ಟ ಕರಾವಿಪ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರದ ನೆರವಿನ ರಾಜ್ಯ ಮಟ್ಟದ ಸ್ವಾಯತ್ತ ಸಂಸ್ಥೆಯಾಗಿ ಬೆಳೆದಿದೆ. ವಿಜ್ಞಾನ, ವೈಜ್ಞಾನಿಕ ಮನೋಭಾವ, ಔಪಚಾರಿ ಹಾಗೂ ಅನೌಪಚಾರಿಕ ಶಿಕ್ಷಣ ಮೂಲಕ ಗ್ರಾಮೀಣ ಪ್ರದೇಶದ ಜನರಲ್ಲಿ ವಿಜ್ಞಾನದ ಅರಿವು ಮೂಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಪ್ರಸ್ತುತ ರಾಜ್ಯ ಮಟ್ಟದ ಕನ್ನಡ ವಿಜ್ಞಾನ ಉಪನ್ಯಾಸ ಸ್ಪರ್ಧೆಯಲ್ಲಿ 11ರಾಜ್ಯಗಳ, 11ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಪ್ರದರ್ಶಿಸಲಿದ್ದಾರೆ ಎಂದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌ ರಾಜ್ಯ ಘಟಕದ ಅಧ್ಯಕ್ಷರೂ ಆದ ವಿಧಾನ ಪರಿಷತ್‌ ಸದಸ್ಯ ಎಸ್‌.ವಿ.ಸಂಕನೂರ ಸಂವಿಧಾನದ ಕಲಂ 51-ಸಿಎದಲ್ಲಿ ಹೇಳಿರುವಂತೆ ಪ್ರತಿಯೊಬ್ಬರಲ್ಲಿ ವೈಜ್ಞಾನಿಕ ಮನೋಭಾವನೆ ಮೂಡಿಸುವುದು. ನಮ್ಮವರಿಗೆ ಮಾತ್ರ ಗೊತ್ತು ಎಂದರು.

ಕರಾವಿಪ ಕಾರ್ಯಕಾರಿ ಸಮಿತಿ ಸದಸ್ಯ ಕುಂಟೆಪ್ಪ ಗೌರಿಪೂರ, ಕರಾವಿಪ ಜಿಲ್ಲಾ ಘಟಕದ ಅಧ್ಯಕ್ಷ ಶಾಂತವೀರ ಎನ್‌.ಯಲಾಲ್, ಕರಾವಿಪ ಜಿಲ್ಲಾ ಮಾಜಿ ಅಧ್ಯಕ್ಷ ಪ್ರಕಾಶ ಲಕಶೆಟ್ಟಿ, ಪಂಡಿತ್‌.ಕೆ ಬಾಳೂರೆ, ಇ.ಬಸವರಾಜ, ವೀರಭದ್ರೇಶ್ವರ ಔಷಧ ವಿಜ್ಞಾನ ಕಾಲೇಜು ಪ್ರಾಚಾರ್ಯ ಡಾ.ನಾಗೇಂದ್ರಪ್ಪ ಧುಮ್ಮನಸೂರ, ತಾಲೂಕು ಕಸಾಪ ಅಧ್ಯಕ್ಷ ಸಚ್ಚಿದಾನಂದ ಮಠಪತಿ ಇದ್ದರು.

ರಾಜ್ಯ ವಿಜ್ಞಾನ ಪರಿಷತ್‌ ರಾಜ್ಯ ಸಂಯೋಜಕ ಜಗನ್ನಾಥ ಹಲಮಡ್ಗಿ ಸ್ವಾಗತಿಸಿದರು. ರಾಜಶೇಖರ ಬಿ.ಪಾಟೀಲ ನಿರೂಪಿಸಿದರು. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಚಿಟಗುಪ್ಪ ಶಿಕ್ಷಕ ಮಹಾರುದ್ರಪ್ಪ ಆಣದೂರ ವಂದಿಸಿದರು.

ಟಾಪ್ ನ್ಯೂಸ್

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Shabarimala

Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.