ಸಿಗದ ಸಹಾಯಧನ: ತಪ್ಪದ ಅಲೆದಾಟ
ಅಧಿಕಾರಿಗಳ ಕಾರ್ಯವೈಖರಿಗೆ ಬೇಸತ್ತ ಫಲಾನುಭವಿಗಳು •ನೆಪವೊಡ್ಡಿ ನುಣುಚಿಕೊಳ್ಳುತ್ತಿರುವ ಅಧಿಕಾರಿಗಳು
Team Udayavani, Jul 26, 2019, 1:02 PM IST
ಹುಮನಾಬಾದ: ಕಾರ್ಮಿಕ ನಿರೀಕ್ಷಕ ಕಚೇರಿಯಲ್ಲಿ ಕುಳಿತ ಅರ್ಜಿದಾರರು.
ಶಶಿಕಾಂತ ಕೆ.ಭಗೋಜಿ
ಹುಮನಾಬಾದ: ಕಾರ್ಮಿಕ ಇಲಾಖೆಯಿಂದ ಲಭಿಸುವ ವಿವಿಧ ಸಹಾಯಧನ ಸಕಾಲಕ್ಕೆ ಫಲಾನುಭವಿಗಳ ಖಾತೆಗೆ ಬರದಿರುವುದರಿಂದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ನಿತ್ಯ ತಾಲೂಕು ಕಚೇರಿಗೆ ಅಲೆದು ಸುಸ್ತಾಗಿದ್ದಾರೆ.
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಂಡಳಿಯಿಂದ ದೊರೆಯುವ ವಿವಿಧ ಸೌಲಭ್ಯ ಬರಲಿ, ಬಾರದಿರಲಿ ಯೋಜನೆಗಳ ಕುರಿತು ಸಾರ್ವಜನಿಕ ಸ್ಥಳಗಳಲ್ಲಿ ದೊಡ್ಡದಾಗಿ ನಾಮಫಲಕ ಅಳವಡಿಸುವುದು ಮಾತ್ರ ತಪ್ಪುವುದಿಲ್ಲ. ಹಾಗೆ ಅಳವಡಿಸಿದ ನಾಮಫಲಕ ಗಮನಿಸಿ, ಬಡ ಕೂಲಿ ಕಾರ್ಮಿಕರು ಸರ್ಕಾರದಿಂದ ತಮಗೆ ಏನೆಲ್ಲ ಸೌಲಭ್ಯ ಸಿಗಬಹುದೆಂಬ ನಿರೀಕ್ಷೆಯಿಂದ ಇಲಾಖೆ ಕೇಳುವ ನಮೂನೆಯಲ್ಲಿ ಕಾರ್ಮಿಕರ ಗುರುತಿನ ಚೀಟಿ, ಮಕ್ಕಳ ವಿದ್ಯಾರ್ಥಿ ವೇತನ, ವಿವಾಹ ಸಹಾಯಧನ, ಮೃತಪಟ್ಟ ಹಾಗೂ ಅವರ ಅಂತ್ಯಕ್ರಿಯೆ ಸಂಬಂಧ ಸಿಗುವ ಸಹಾಯಧನಕ್ಕಾಗಿ ತಿಂಗಳುಗಟ್ಟಲೇ ಅಲೆಯುತ್ತಿದ್ದಾರೆ.
ಅಧಿಕಾರಿಗಳಿಗೆ ಶಾಪ: ಹೀಗೆ ಅಲೆದಾಡುವ ಕಾರ್ಮಿಕರಿಗೆ ಸಹಾಯಧನ ಖಾತೆಗೆ ಜಮಾ ಆಗುವ ಖಚಿತ ದಿನಾಂಕದ ಮಾಹಿತಿ ನೀಡದಿರುವ ಕಾರಣ ಇಂದು ಹೇಳಬಹುದು, ನಾಳೆ ಹೇಳಬಹುದೆಂಬ ನಿರೀಕ್ಷೆಯಿಂದ ಅಧಿಕಾರಿಗಳು ನೀಡುವ ಭರವಸೆಗಳಿಗೆ ಬೇಸತ್ತು ಹಿಡಿಶಾಪ ಹಾಕುತ್ತಿದ್ದಾರೆ.
ಗೂಬೆ ಕೂರಿಸುವ ಕೆಲಸ: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದರೂ ತಮ್ಮ ಖಾತೆಗೆ ಹಣ ಜಮಾ ಆಗದಿರುವ ಕುರಿತು ಬ್ಯಾಂಕ್ ಅಧಿಕಾರಿಗಳನ್ನು ವಿಚಾರಿಸಿದರೆ ಇದರಲ್ಲಿ ನಮ್ಮದೇನೂ ಇಲ್ಲ, ಸಂಬಂಧಪಟ್ಟವರು ಹಣ ಜಮಾ ಮಾಡಿದರೆ ತಕ್ಷಣ ಕೊಡುತ್ತೇವೆ ಎನ್ನುತ್ತಿದ್ದಾರೆ.
ತಾಲೂಕು ಅಧಿಕಾರಿಗಳನ್ನು ವಿಚಾರಿಸಿದರೆ ನಾವು ಕಳಿಸಿದ್ದೇವೆ. ನಮ್ಮ ಮೇಲೆ ವಿಶ್ವಾಸ ಇಲ್ಲದಿದ್ದರೆ ಕಾರ್ಮಿಕ ಇಲಾಖೆ ಜಿಲ್ಲಾ ಅಧಿಕಾರಿಗಳಿಗೆ ಕೇಳಿ ಎನ್ನುತ್ತಿದ್ದಾರೆ. ಈ ಕುರಿತು ಕಾರ್ಮಿಕ ಇಲಾಖೆ ಜಿಲ್ಲಾ ಅಧಿಕಾರಿಗಳನ್ನು ವಿಚಾರಿಸಿದರೆ ನಿಮ್ಮ ತಾಲೂಕು ಅಧಿಕಾರಿಗಳು ಅರ್ಜಿಗಳನ್ನು ವಿಳಂಬವಾಗಿ ಕಳಿಸಿದ್ದಾರೆ. ಹಾಗಾಗಿ ವಿಳಂಬವಾಗುತ್ತಿದೆ ಎಂದು ಹಾರಿಕೆ ಉತ್ತರ ನೀಡುತ್ತಿದ್ದಾರೆ.
ಹೀಗೆ ಅಧಿಕಾರಿಗಳು ಒಬ್ಬರ ಮೇಲೊಬ್ಬರು ಗೂಬೆ ಕೂರಿಸುವ ಮೂಲಕ ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತ ವಿನಾಕಾರಣ ನಮ್ಮನ್ನು ಅಲೆದಾಡಿಸುತ್ತಿದ್ದಾರೆ ಎಂದು ಕಚೇರಿಗೆ ಕೆಲಸಕ್ಕೆ ಬಂದ ಐಶ್ವರ್ಯ, ಅಂಬೋಜಿ, ದೇವಾನಂದ, ದಿವ್ಯಾ ಮೊದಲಾದವರು ಆರೋಪಿಸಿದ್ದಾರೆ.
ವಿವಾಹ ಆಗುವವರಿಗೆ ನೀಡಲಾಗುವ 50 ಸಾವಿರ ಸಹಾಯಧನದ 50 ಅರ್ಜಿಗಳು, ವಿದ್ಯಾರ್ಥಿ ವೇತನ ಹಿನ್ನೆಲೆಯಲ್ಲಿ 2017-18 ಮತ್ತು 19ನೇ ಸಾಲಿನ ಅರ್ಜಿ ಸೇರಿ ಒಟ್ಟು 1527 ಅರ್ಜಿ ಬಂದಿವೆ. ಮರಣ ಹೊಂದಿರುವ ಕಾರ್ಮಿಕರ ಅವಲಂಬಿತರಿಗೆ ನೀಡಲಾಗುವ 50 ಸಾವಿರ ಮತ್ತು ಅಂತ್ಯಕ್ರಿಯೆ ಸಹಾಯಧನ 4 ಸಾವಿರ ಸೇರಿ ಒಟ್ಟು 54 ಸಾವಿರ ರೂ. ಸಹಾಯಧನಕ್ಕಾಗಿ 10ಕ್ಕೂ ಅಧಿಕ ಅರ್ಜಿ, ಗರ್ಭಿಣಿಯರ ಸಹಾಯಧನ ಕೋರಿ 5 ಅರ್ಜಿ ಬಂದಿವೆ. ಈ ವರೆಗೆ ಮಂಜೂರಿ ಸಿಕ್ಕಿದ್ದು ಮಾತ್ರ ಬೆರಳೆಣಿಕೆ ಕಾರ್ಮಿಕರಿಗೆ.
ಜಿಲ್ಲೆಯ ಬೀದರ, ಭಾಲ್ಕಿ, ಬಸವಕಲ್ಯಾಣ ಮತ್ತು ಔರಾದ ತಾಲೂಕುಗಳಿಂದ ಬಂದ ಶೇ.90 ಅರ್ಜಿಗಳು ಮಂಜೂರಾಗಿ ಈಗಾಗಲೇ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಿದೆ. ಈ ವಿಷಯದಲ್ಲಿ ಜಿಲ್ಲಾ ಅಧಿಕಾರಿಗಳು ಹುಮನಾಬಾದ್ ತಾಲೂಕನ್ನು ಸಂಪೂರ್ಣ ನಿರ್ಲಕ್ಷಿಸುತ್ತಿದ್ದಾರೆ ಎಂದು ಕಾರ್ಮಿಕರು ಆರೋಪಿಸುತ್ತಿದ್ದಾರೆ.
ಫಲಾನುಭವಿಗಳಿಗೆ ಸೌಲಭ್ಯಗಳ ಬಗ್ಗೆ ಗೊಂದಲ ಇರದಂತೆ ಸ್ಪಷ್ಟ ಮಾಹಿತಿ ನೀಡುವುದು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಕರ್ತವ್ಯ. ಅರ್ಜಿ ಸಲ್ಲಿಕೆ ಸಂದರ್ಭದಲ್ಲೇ ಸಲ್ಲಿಸಬೇಕಾದ ವಿಧಾನ, ಅರ್ಜಿ ಸಲ್ಲಿಕೆಗೆ ಇರುವ ಕಾಲಮಿತಿ, ಇತ್ಯಾದಿಗಳ ಬಗ್ಗೆ ಸ್ಪಷ್ಟ ಮಾರ್ಗದರ್ಶನ ನೀಡಿ, ಸಕಾಲಕ್ಕೆ ಮೇಲಧಿಕಾರಿಗಳಿಗೆ ಪಟ್ಟಿ ಕಳುಹಿಸಿ ಅಲೆದಾಡುವುದನ್ನು ತಪ್ಪಿಸಬೇಕು. ಫಲಾನುಭವಿಗಳಿಗೆ ಸೌಲಭ್ಯ ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕೆನ್ನುವುದು ಸಹಾಯಧನ ವಂಚಿತ ಕಾರ್ಮಿಕರ ಒತ್ತಾಸೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ
Kundapura: ಬಸ್ ತಂಗುದಾಣಗಳೇ ಮಾಯ; ಜನರು ಅಯೋಮಯ!
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
Kundapura: ಬಸ್ ತಂಗುದಾಣಗಳೇ ಮಾಯ; ಜನರು ಅಯೋಮಯ!
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.