ಕ್ರೀಡೆಯಿಂದ ಕ್ರಿಯಾಶೀಲತೆ ವೃದ್ಧಿ: ಪಾಟೀಲ
ಗಡವಂತಿ ವಲಯ ಮಟ್ಟದ ಕ್ರೀಡಾ ಸ್ಪರ್ಧೆ ಉದ್ಘಾಟನೆ
Team Udayavani, Jul 31, 2019, 3:31 PM IST
ಹುಮನಾಬಾದ: ಗಡವಂತಿ ಸರ್ಕಾರಿ ಪ್ರೌಢಶಾಲೆ ಪ್ರಾಂಗಣದಲ್ಲಿ ನಡೆದ ಗಡವಂತಿ ವಲಯ ಮಟ್ಟದ ಕ್ರೀಡಾಕೂಟವನ್ನು ಮಾಣಿಕನಗರ ಗ್ರಾಪಂ ಅಧ್ಯಕ್ಷ ಬಸವರಾಜ ಪೊಲೀಸ್ ಪಾಟೀಲ ಉದ್ಘಾಟಿಸಿದರು.
ಹುಮನಾಬಾದ: ಕ್ರೀಡೆಯಿಂದ ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯಾಗಿ ಕ್ರೀಯಾಶೀಲತೆ ವೃದ್ಧಿಯಾಗುತ್ತದೆ. ಈ ನಿಟ್ಟಿನಲ್ಲಿ ಪಾಲಕರು ಹಾಗೂ ಶಿಕ್ಷಕರು ಮಕ್ಕಳಿಗೆ ಪಠ್ಯ ಶಿಕ್ಷಣ ಜೊತೆಗೆ ಪಠ್ಯೇತರ ಚಟುವಟಿಕೆಗೂ ಸಮಾನ ಆದ್ಯತೆ ನೀಡಬೇಕು ಎಂದು ಮಾಣಿಕನಗರ ಪಂಚಾಯಿತಿ ಅಧ್ಯಕ್ಷ ಬಸವರಾಜ ಪೊಲೀಸ್ ಪಾಟೀಲ ಹೇಳಿದರು.
ಗಡವಂತಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಪ್ರಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಮಂಗಳವಾರ ನಡೆದ ಗಡವಂತಿ ವಲಯ ಮಟ್ಟದ ಕ್ರೀಡಾಸ್ಪರ್ಧೆ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದೈಹಿಕ ಸದೃಢತೆ ಇದ್ದಾಗ ಮಾತ್ರ ಮಕ್ಕಳ ಮಾನಸಿಕ ಬೆಳವಣಿಗೆ ಸಾಧ್ಯ. ಈ ಭಾಗದ ಮಕ್ಕಳು ಕ್ರೀಡಾ ಸ್ಪರ್ಧೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಭಾಗವಹಿಸದೇ ಇರುವುದಕ್ಕೆ ಪೂರಕ ತರಬೇತಿ ಇಲ್ಲದಿರುವುದು ಮತ್ತು ಕ್ರೀಡೆಯ ಬಗ್ಗೆ ಈ ಭಾಗದ ವಿದ್ಯಾರ್ಥಿಗಳು, ಪಾಲಕರ ನಿರುತ್ಸಾಹವೂ ಪ್ರಮುಖ ಕಾರಣ. ವಿದ್ಯಾರ್ಥಿಗಳಲ್ಲಿ ಕ್ರೀಡಾ ಆಸಕ್ತಿ ಹೆಚ್ಚಿಸಲು ಸಂಬಂಧಿತರು ಶ್ರಮಿಸಬೇಕು ಎಂದರು.
ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕೋಶಾಧ್ಯಕ್ಷ ಶಿವರಾಜ ಮೇತ್ರೆ ಮಾತನಾಡಿ, ತಾಲೂಕಿನ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಕ್ರೀಡಾ ಸಾಮಗ್ರಿ ಇದ್ದರೂ ಕೂಡ ಸ್ಥಳದ ಅಭಾವ ಮತ್ತು ದೈಹಿಕ ಶಿಕ್ಷಣ ಶಿಕ್ಷಕರ ನಿಯೋಜನೆ ಆಗದಿರುವುದು ಈ ಭಾಗದ ಮಕ್ಕಳು ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸದಿರುವುದಕ್ಕೆ ಪ್ರಮುಖ ಕಾರಣ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿ ಹಾಗೂ ಚುನಾಯಿತ ಪ್ರತಿನಿಧಿಗಳು ಕ್ರೀಡಾ ಮೈದಾನದ ಸೌಲಭ್ಯ ಕಲ್ಪಿಸುವ ಮೂಲಕ ಮಕ್ಕಳ ಸರ್ವಾಂಗೀಣ ಪ್ರಗತಿಗೆ ನೆರವಾಗಬೇಕು ಎಂದು ಮನವಿ ಮಾಡಿದರು.
ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಶ್ರವಣಕುಮಾರ ಮಾತನಾಡಿ, ಶಾಲೆಯ ಶಿಸ್ತುಪಾಲನೆ ದೈಹಿಕ ಶಿಕ್ಷಣ ಶಿಕ್ಷಕರ ಮೇಲೆ ಅವಲಂಬನೆಯಾಗಿದೆ. ವಾರಕ್ಕೊಮ್ಮೆ ಯೋಗಾಭ್ಯಾಸ, ದೈನಿಕ ಕ್ರೀಡಾ ತರಬೇತಿ ತಪ್ಪದೆ ಕಲಿಸಿಕೊಟ್ಟಲ್ಲಿ ಮಕ್ಕಳಲ್ಲಿ ಕ್ರೀಡಾ ಆಸಕ್ತಿ ಹೆಚ್ಚುತ್ತದೆ. ಈ ನಿಟ್ಟಿನಲ್ಲಿ ಎಲ್ಲ ಶಿಕ್ಷಕರ ಸಹಕಾರ ಪಡೆದು ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗಾಗಿ ಶ್ರಮಿಸಬೇಕು ಎಂದರು.
ಪ್ರೌಢಶಾಲೆ ಮುಖ್ಯಶಿಕ್ಷಕ ಡಿ.ಬಿ.ಜಾಧವ್, ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕ ಝರೆಪ್ಪ ದಂಡಿನ್, ಮಾರುತಿ ಪೂಜಾರಿ, ಸೂರ್ಯಕಾಂತ ಪಾಟೀಲ, ಹುಸೇನ್‌ಸಾಬ್, ಸಹ ಶಿಕ್ಷಕಿಯರಾದ ವಿಜಯಲಕ್ಷ್ಮಿ, ಅಂಬಿಕಾ ಮೊದಲಾದವರು ಇದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.