ಕ್ರೀಡೆಯಿಂದ ವಿದ್ಯಾರ್ಥಿಗಳ ಕ್ರಿಯಾಶೀಲತೆ ವೃದ್ಧಿ
Team Udayavani, Aug 9, 2019, 4:24 PM IST
ಹುಮನಾಬಾದ: ಮಾಣಿಕ ನಗರದ ಮಾಣಿಕಪ್ರಭು ಕ್ರೀಡಾಂಗಣದಲ್ಲಿ ಹುಮನಾಬಾದ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಹುಮನಾಬಾದ: ಕ್ರೀಡೆಯಿಂದ ವಿದ್ಯಾರ್ಥಿಗಳಲ್ಲಿ ಕ್ರಿಯಾಶೀಲತೆ ವೃದ್ಧಿಯಾಗಿ ಓದಿನ ಬಗ್ಗೆ ಆಸಕ್ತಿ ಹೆಚ್ಚುತ್ತದೆ ಎಂದು ಪುರಸಭೆ ಸದಸ್ಯ ಕಾಳಪ್ಪ ಗೌಡ್ರು ಹೇಳಿದರು.
ಮಾಣಿಕನಗರದ ಮಾಣಿಕಪ್ರಭು ಕ್ರೀಡಾಂಗಣದಲ್ಲಿ ಕ್ಷೇತ್ರಶಿಕ್ಷಣಾಧಿಕಾರಿ ಕಾರ್ಯಾಲಯ ಮತ್ತು ಮಂಜುನಾಥ ಶಿಕ್ಷಣ ಸಂಸ್ಥೆಯ ಮಿಲಿಂದ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಹುಮನಾಬಾದ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಪಾಲಕ ಹಾಗೂ ಶಿಕ್ಷಕರು ಮಕ್ಕಳನ್ನು ಕೇವಲ ಪಠ್ಯಪುಸ್ತಕದ ಹುಳವನ್ನಾಗಿಸದೇ ಎಲ್ಲ ಕ್ಷೇತ್ರಗಳಲ್ಲೂ ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡಬೇಕು ಎಂದರು.
ಮುಖ್ಯ ಅತಿಥಿಯಾಗಿದ್ದ ನೀತು ಶರ್ಮಾ ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್ ದಾಸರಾಗದೇ ದೇಸಿ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ವಿದ್ಯಾರ್ಥಿಗಳು ಮೊಬೈಲ್ ಬಳಸುವುದು ತಪ್ಪಲ್ಲ, ಆದರೆ ಅದನ್ನು ದುರುದ್ದೇಶಕ್ಕಾಗಿ ಬಳಸಿಕೊಳ್ಳುವುದು ತಪ್ಪು ಎಂದು ಸಲಹೆ ನೀಡಿದರು.
ಮಂಜುನಾಥ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಮಲ್ಲಿಕಾರ್ಜುನ ಶಮಾ ಮಾತನಾಡಿ, ವಿನಯವಿಲ್ಲದ ವಿದ್ಯೆಗೆ ಸಮಾಜದಲ್ಲಿ ಬೆಲೆ ಇಲ್ಲ. ಪಾಲಕರು ತಮ್ಮ ಮಕ್ಕಳಿಗೆ ಬೇಡಿದ್ದೆಲ್ಲವನ್ನು ಕೊಡಿಸಿ, ಸೋಮಾರಿಗಳನ್ನಾಗಿಸದೇ ಹಣದ ಬೆಲೆ ಏನು ಎಂಬುದರ ಮಹತ್ವ ತಿಳಿಸಿಕೊಡಬೇಕು.
ಡಾ|ಅಂಬೇಡ್ಕರ್ ಅವರು ಬಾಲ್ಯದಲ್ಲಿ ಅನುಭವಿಸಿದ್ದ ಅಸಾಮಾನ್ಯ ಸಂಕಷ್ಟಗಳಿಂದಲೇ ಇಷ್ಟೊಂದು ಎತ್ತರಕ್ಕೆ ಬೆಳೆಯಲು ಸಾಧ್ಯವಾಯಿ. ಈ ನಿಟ್ಟಿನಲ್ಲಿ ಪಾಲಕರು ಹಾಗೂ ವಿಸದ್ಯಾರ್ಥಿಗಳು ಸಮಸ್ಯೆಗಳಿಗೆ ಸೋಲೆಂದು ಭಾವಿಸದೇ ಸವಾಲಾಗಿ ಸ್ವೀಕರಿಸಿದಾಗಲೇ ಸಮಾಜದಲ್ಲಿ ತಲೆ ಎತ್ತಿ ಬದುಕಲು ಸಾಧ್ಯವಾಗುತ್ತದೆ ಎಂದರು.
ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಶ್ರವಣಕುಮಾರ ಭುತಾಳೆ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಗೌರವಾಧ್ಯಕ್ಷ ಅನಂತರೆಡ್ಡಿ ಶಿವರಾಯ್, ಮುಖ್ಯಶಿಕ್ಷಕ ಚಂದ್ರಕಾಂತ ಮಂಗಾ, ವೀರೇಂದ್ರ ಮುರಡಾ, ಸಂದೀಪ ಕ್ಷೀರಸಾಗರೆ, ಶಶಿಧರ ಗಾವಾಲ್ಕರ್ ಮಾತನಾಡಿದರು. ಸಾಗರ ಬಿರಾದಾರ, ಶರಣಪ್ಪ ಮಾಲೆ, ಸಿದ್ದಪ್ಪ ಹೆಗಣ್ಣಿ, ಅಂಬಾದಾಸ, ಪರನಮೇಶ್ವರ, ಶ್ರೀಮಂತ ಧಬಾಲೆ, ಗಣಪತಿ, ಭೀಮಶಾ ಮೇತ್ರೆ, ಮೆರೆಮ್ಮ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ವಕ್ಫ್ ಬೋರ್ಡ್ ಭೂ ಕಬಳಿಕೆ ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
County Championship: ಶಕಿಬ್ ಹಸನ್ ಬೌಲಿಂಗ್ ಶೈಲಿ ಬಗ್ಗೆ ಅಂಪೈರ್ ಗಳ ಆಕ್ಷೇಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.