ಮೊರಾರ್ಜಿ ವಸತಿ ಶಾಲೆಗಿಲ್ಲ ಉತ್ತಮ ರಸ್ತೆ

8.5 ಎಕರೆ ಪ್ರದೇಶದಲ್ಲಿ ನೂತನ ಕಟ್ಟಡ ನಿರ್ಮಾಣ ಮೂಲ ಸೌಕರ್ಯ ಕೊರತೆ

Team Udayavani, Nov 22, 2019, 2:48 PM IST

21-November-16

„ಗೋಪಾಲರಾವ ಕುಲಕರ್ಣಿ
ಹುಣಸಗಿ:
ಪಟ್ಟಣದಲ್ಲಿ ಆರಂಭಿಸಲಾದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸಂಚರಿಸಲು ಸಂಚಕಾರ ಬಂದಿದೆ. ಗ್ರಾಮೀಣ ಭಾಗದ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು. ಶೈಕ್ಷಣಿಕ ಪ್ರಗತಿ ಸಾಧಿಸಬೇಕು ಎಂದು ಸರ್ಕಾರ ಹೇಳುತ್ತಲೇ ಬಂದಿದೆ. ಆದರೆ ಅಗತ್ಯ ಮೂಲಭೂತ ಸೌಲಭ್ಯಗಳ ಕೊರತೆ ಎದುರಾಗಿ ಸಾಕಷ್ಟು ಶಾಲೆಗಳು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಲು ಸಾಧ್ಯವಾಗಿಲ್ಲ ಎಂಬುದಕ್ಕೆ ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಉದಾಹರಣೆಯಾಗಿದೆ.

ಕಳೆದ 2007-08ನೇ ಸಾಲಿನಲ್ಲಿ ಪಟ್ಟಣದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆರಂಭಿಸಲಾಗಿದೆ. ಆರಂಭದಲ್ಲಿ ಖಾಸಗಿ ಕಟ್ಟಡದಲ್ಲಿ ನಡೆಸಲಾಯಿತು. ಅಲ್ಲಿಯೂ ವಿದ್ಯಾರ್ಥಿಗಳು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದರು. ಇನ್ನೇನು ಹೊಸ ಕಟ್ಟಡವಾಯಿತು. ಸಂಚಾರದ ಸಮಸ್ಯೆ ಹಾಗೆ ಉಳಿದುಕೊಂಡಿದೆ. ಪಟ್ಟಣದ ಹೊರವಲಯದಲ್ಲಿ ಸುಮಾರು 16 ಕೋಟಿ ರೂ. ವೆಚ್ಚದಲ್ಲಿ 8.5 ಎಕರೆ ಜಮೀನಿನಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ನೂತನ ಕಟ್ಟಡ ನಿರ್ಮಿಸಲಾಗಿದೆ. ಆದರೆ ಶಾಲೆಗೆ ತೆರಳುವ ರಸ್ತೆ ಹದೆಗಟ್ಟಿದ್ದರಿಂದಾಗಿ ನಿತ್ಯವೂ ಇಲ್ಲಿನ ಮಕ್ಕಳು, ಶಿಕ್ಷಕರು ತೊಂದರೆ ಪಡುವಂತಾಗಿದೆ.

ಶಾಲೆಗೆ ಹೋಗಲು ಕೃಷ್ಣಾ ಭಾಗ್ಯಜಲ ನಿಗಮದ ವಿತರಣಾ ಕಾಲುವೆ ರಸ್ತೆಯನ್ನೇ ಆಶ್ರಯಿಸುವಂತಾಗಿದೆ. ಆದರೆ ಮಳೆ ಬಂದಾಗ ಹಲವಾರು ಜನ ಪಾಲಕರು ಬಿದ್ದ ಉದಾಹಣೆಗಳಿವೆ. ಅಲ್ಲದೇ ಮುಖ್ಯ ರಸ್ತೆ ಬಳಿ ದ್ವಿ ಚಕ್ರ ವಾಹನ ನಿಲ್ಲಿಸಿ ನಡೆದುಕೊಂಡು ಹೋಗುವ ಅನಿವಾರ್ಯತೆ ಇದೆ ಎಂದು ಮಾದಿಗ ದಂಡೋರ ಸಮಿತಿ ಜಿಲ್ಲಾಧ್ಯಕ್ಷ ಬಸವರಾಜ ಹಗರಟಗಿ ಆರೋಪಿಸಿದ್ದಾರೆ.

ಸುಸಜ್ಜಿತ ಶಾಲಾ ಸಮುಚ್ಚಯವಿದ್ದರೂ ಇಲ್ಲಿನ ಮಕ್ಕಳಿಗೆ ಆಟದ ಮೈದಾನ ಇಲ್ಲ. ಇರುವ ವ್ಯವಸ್ಥೆಯನ್ನೇ ಬಳಸಿಕೊಂಡು ಕಬಡ್ಡಿಯಲ್ಲಿ ಜಿಲ್ಲಾ ಮಟ್ಟಕ್ಕೆ ಮತ್ತು ಕ್ರಿಕೆಟ್‌ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದೇವೆ ಎಂದು ವಿದ್ಯಾರ್ಥಿಗಳಾದ ವೆಂಕಟೇಶ ರಾಠೊಡ ಮತ್ತು ರಾಜು ರಾಠೊಡ ಹೇಳಿದರು.

ಶಾಲೆಯಲ್ಲಿ 127 ಗಂಡು ಮತ್ತು 114 ಹೆಣ್ಣು ಮಕ್ಕಳು ಒಟ್ಟು 241 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಎಲ್ಲ ವಿಷಯಗಳ ಬೋಧಕರು ಇದ್ದಾರೆ. ಒರ್ವ ಕಂಪ್ಯೂಟರ್‌ ಶಿಕ್ಷಕರು ಇದ್ದಾರೆ ಎಂದು ಪ್ರಾಂಶುಪಾಲ ಅಶೋಕ ರಾಜನಕೋಳುರ ತಿಳಿಸಿದರು.

ಕಂಪ್ಯೂಟರ್‌ ಶಿಕ್ಷಕರಿದ್ದಾರೆ. ಆದರೆ ಕಲಿಯಲು ಮಾತ್ರ ಕಂಪ್ಯೂಟರ್‌ ಇಲ್ಲ ಎಂದು ಪಾಲಕರಾದ ದೇವೀಂದ್ರಪ್ಪ ಹಂಗರಗಿ, ಚಂದ್ರಶೇಖರ ಹಾದಿಮನಿ ಆರೋಪಿಸಿದ್ದಾರೆ. ವಿದ್ಯಾರ್ಥಿಗಳ ಅಗತ್ಯಕ್ಕೆ ತಕ್ಕಂತೆ ಟ್ರಂಕ್‌ ವ್ಯವಸ್ಥೆ ಇಲ್ಲ. ಸುಮಾರು 50 ಟ್ರಂಕ್‌ ನೀಡಲಾಗಿದ್ದು, 200 ಟ್ರಂಕ್‌ ಅವಶ್ಯಕತೆ ಇದೆ. ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಶಾಲಾ ಕೋಣೆಗಳಲ್ಲಿ ಡೆಸ್ಕ್-ಬೆಂಚ್‌ ವ್ಯವಸ್ಥೆ ಇಲ್ಲದ ಕಾರಣ ಎಲ್ಲ ಮಕ್ಕಳು ನೆಲದ ಮೇಲೆ ಕುಳಿತು ಅಭ್ಯಾಸ ಮಾಡುವಂತಾಗಿದೆ ಎಂದು ಪೋಷಕರಾದ ಶಿವಣ್ಣ ಚಿತಗುಂಟಿ, ಚಂದ್ರಶೇಖರ ಹಡಪದ ದೂರಿದ್ದಾರೆ.

ಶಾಲೆಯಲ್ಲಿ ಒಳಾಂಗಣ ರಸ್ತೆ, ಚರಂಡಿ, ಉದ್ಯಾನವನ ನಿರ್ಮಿಸಿದಲ್ಲಿ ಶಾಲೆ ರಾಜ್ಯಮಟ್ಟದಲ್ಲಿಯೇ ಹೆಸರು ಮಾಡುವದರಲ್ಲಿ ಎರಡು ಮಾತಿಲ್ಲ ಎಂದು ಇಲ್ಲಿನ ವಿದ್ಯಾರ್ಥಿಗಳೇ ಹೇಳುತ್ತಾರೆ. ಆದ್ದರಿಂದ ಮಕ್ಕಳ ಹಿತದೃಷ್ಟಿಯಿಂದ ಹುಣಸಗಿ-ಕೆಂಭಾವಿ ಮುಖ್ಯ ರಸ್ತೆಯಿಂದ ಶಾಲೆ ವರೆಗೆ ಸುಮಾರು 3 ಕಿಮೀ ಸೇವಾ ರಸ್ತೆ ಮೇಲ್ದರ್ಜೆಗೇರಿಸಿ ಸಂಪೂರ್ಣ ಡಾಂಬರೀಕರಣಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಳದ ತಾಲೂಕು ಅಧ್ಯಕ್ಷ ಕಾಶಿನಾಥ ಹಾದಿಮನಿ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Love Reddy movie released today

Love Reddy: ತೆರೆಗೆ ಬಂತು ʼಲವ್‌ ರೆಡ್ಡಿʼ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.