ಸಮಬಾಳು-ಸಮಪಾಲು ಕನಕಪೀಠದ ಉದ್ದೇಶ
ಶೋಷಿತರು ಸಮಾಜದ ಮುಖ್ಯ ವಾಹಿನಿಗೆ ಬರಲಿ
Team Udayavani, May 8, 2019, 5:27 PM IST
ಹೂವಿನಹಡಗಲಿ: ಸುಕ್ಷೇತ್ರ ಮೈಲಾರ ಗ್ರಾಮದಲ್ಲಿ ಕಾಗಿನೆಲೆ ಕನಕ ಗುರು ಪೀಠದ ಉದ್ಘಾಟನೆ ಹಿನ್ನೆಲೆಯಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.
ಹೂವಿನಹಡಗಲಿ: ಸಮಾಜದಲ್ಲಿನ ಎಲ್ಲ ವರ್ಗದವರಿಗೂ ಸಮಬಾಳು- ಸಮಪಾಲು ದೊರಕಬೇಕು ಎನ್ನುವುದು ಶ್ರೀ ಮಠದ ಪ್ರಮುಖ ಉದ್ದೇಶವಾಗಿದೆ ಎಂದು ಕಾಗಿನಲೆ ಕನಕ ಗುರುಪೀಠದ ಶ್ರೀಗಳಾದ ನಿರಂಜನಾನಂದ ಪುರಿ ಸ್ವಾಮಿಗಳು ತಿಳಿಸಿದರು.
ತಾಲೂಕಿನ ಸುಕ್ಷೇತ್ರ ಮೈಲಾರದಲ್ಲಿ ಕಾಗಿನೆಲೆ ಕನಕ ಗುರು ಪೀಠ ಶಾಖಾ ಮಠದ ಸ್ಥಾಪನೆ ಹಿನ್ನೆಲೆಯಲ್ಲಿ ಮಂಗಳವಾರ ಧ್ವಜಾರೋಹಣ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.
ಬೆಂಗಳೂರು ಶ್ರೀ ರಾಮಾನುಜ ಮಠದ ಶ್ರೀಗಳಾದ ತ್ರಿದಂಡಿ ವೆಂಕಟರಾಮಾನುಜ ಜಿಯರ್ ಕಾರ್ಯಕ್ರಮ ಕುರಿತು ಮಾತನಾಡಿ, ಕಳೆದ 25 ವರ್ಷಗಳ ಹಿಂದೆ ಶೋಷಿತರ ಪರವಾಗಿ ನಿಲ್ಲುವಂತಹ ಮಠಗಳ ನಿರ್ಮಾಣದ ಬಗ್ಗೆ ಕನಸು ಕಾಣುತ್ತಿದ್ದೇವು. ಈಗ ಆ ಕನಸು ನನಸಾಗಿದೆ. ಹಾಲುಮತ ಸಮಾಜ ಒಳಗೊಂಡಂತೆ ಎಲ್ಲ ಶೋಷಿತ ಸಮುದಾಯದವರು ಸಮಾಜದ ಮುಖ್ಯವಾಹಿನಿಗೆ ಬರಬೇಕಾಗಿದೆ. ಆ ನಿಟ್ಟಿನಲ್ಲಿ ಶ್ರೀಮಠ ಹೆಚ್ಚು ಹೆಚ್ಚು ಕೆಲಸ ಮಾಡುತ್ತಿದೆ ಎಂದರು. ಶಿವಮೊಗ್ಗಾದ ಕುರುಬರ ಜಡೇದೇವರ ಮಠದ ಶ್ರೀಗಳಾದ ಅಮೋಘ ಸಿದ್ದೇಶ್ವರಾನಂದರು. ಸಮಾಜದ ಮುಖಂಡರಾದ ಎಲ್. ಸಿದ್ದನಗೌಡ, ಎಂ. ಪರಮೇಶ್ವರಪ್ಪ ಕುರಿ ಮತ್ತು ಉಣ್ಣೆ ನಿಗಮದ ಮಾಜಿ ಆಧ್ಯಕ್ಷ ಜಿ. ಕೃಷ್ಣ, ಕನಕ ಗುರು ಪೀಠದ ಧರ್ಮದರ್ಶಿ ಗಾಜಿ ಗೌಡ್ರು, ಎಂ. ಪರಮೇಶ್ವರಪ್ಪ, ಹೊಳಲು ಜಿಪಂ ಸದಸ್ಯ ಕೊಟ್ರೇಶ್, ಹಿರೇಹಡಗಲಿ ಜಿಪಂ ಸದಸ್ಯೆ ವೀಣಾ ಪರಮೇಶ್ವರಪ್ಪ, ಜಿಲ್ಲಾ ಕುರುಬ ಸಂಘದ ಅಧ್ಯಕ್ಷ ಎರೆಗೌಡ ಇತರರು ಮಾತನಾಡಿದರು. ಮೈಲಾರಲಿಂಗೇಶ್ವರ ಕಾರ್ಣಿಕ ನುಡಿಯುವ ಗೊರವಯ್ಯ ರಾಮಣ್ಣ ಧ್ವಜಾರೋಹಣ ನೆರವೇರಿಸಿದರು. ಕರ್ನಾಟಕ ಪ್ರದೇಶ ಕುರುಬ ಸಮಾಜದ ನಿರ್ದೇಶಕ ಬಿ. ಹನುಮಂತಪ್ಪ ಮಾತನಾಡಿದರು. ತಾಲೂಕು ಕುರುಬ ಸಮಾಜದ ಆಧ್ಯಕ್ಷ ಎಚ್. ಬೀರಪ್ಪ, ಅಧ್ಯಕ್ಷತೆ ವಹಿಸಿದ್ದರು. ಸಮಾಜದ ಗುರುಗಳಾದ ಗುರುವಿನ ಕೊಟ್ರಯ್ಯ, ತಾಪಂ ಸದಸ್ಯ ಈಟಿ ಲಿಂಗರಾಜು, ಫಕ್ಕೀರಮ್ಮ, ಗ್ರಾಪಂ ಅಧ್ಯಕ್ಷೆ ಸರೋಜಮ್ಮ, ಎಪಿಎಂಸಿ ಅಧ್ಯಕ್ಷ ಹನುಮಂತಪ್ಪ, ಅರ್‌ಎಸ್‌ಎಸ್‌ಎನ್ ಅಧ್ಯಕ್ಷ ಪಕ್ಕೀರಪ್ಪ, ಕನಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಶಿವಮೂರ್ತೆಪ್ಪ, ಜಿಲ್ಲಾ ಕುರುಬ ಸಮಾಜದ ಉಪಾಧ್ಯಕ್ಷ ಈಟಿ ಹನುಮೇಶ ಮುಂತಾದವರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Whale: ಅಂಬರ್ ಗ್ರೀಸ್ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.