ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು
Team Udayavani, Jul 1, 2019, 3:05 PM IST
ಹೂವಿನಹಡಗಲಿ: ಹ್ಯಾರಡ ಗ್ರಾಮದ ಕೆರೆಗೆ ತುಂಗಭದ್ರಾ ನದಿಯಿಂದ ಪೈಪ್ ಲೈನ್ ಮೂಲಕ ನೀರು ಹರಿಯುವುದನ್ನು ಸಚಿವ ಪಿ.ಟಿ. ಪರಮೇಶ್ವರನಾಯ್ಕ ವೀಕ್ಷಿಸಿದರು.
ಹೂವಿನಹಡಗಲಿ: ತಾಲೂಕಿನ ಹ್ಯಾರಡ, ದಾಸನಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಜನತೆಗೆ ಕುಡಿಯುವ ನೀರಿನ ಸಮಸ್ಯೆ ಇದ್ದು, ಕುಡಿಯುವ ನೀರಿಗಾಗಿ ಸುಮಾರು 30ಕ್ಕೂ ಹೆಚ್ಚು ಕೊಳವೆ ಬಾವಿ ಕೊರೆಸಿದರೂ ಸಹ ನೀರು ದೊರಕದಂತಾಗಿದೆ ಎಂದು ಸಚಿವ ಪಿ.ಟಿ. ಪರಮೇಶ್ವರನಾಯ್ಕ ಆತಂಕ ವ್ಯಕ್ತಪಡಿಸದರು.
ತಾಲೂಕಿನ ಹ್ಯಾರಡ ಹಾಗೂ ದಾಸನಹಳ್ಳಿ ಗ್ರಾಮದ ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರುಣಿಸುವ ಕಾರ್ಯಕ್ಕೆ ಸಚಿವರು ಚಾಲನೆ ನೀಡಿ ಮಾತನಾಡಿದ ಅವರು, ಈಗಾಗಲೇ ಕುಡಿಯುವ ನೀರಿಗಾಗಿ ಭದ್ರಾ ಜಲಾಶಯದಿಂದ ನದಿಗೆ ನೀರು ಹರಿಸಲಾಗಿದ್ದು, ಹರಿಸಲಾಗಿರುವ ನೀರನ್ನು ತಡೆಯಲು ಶಾಕಾರ ಬಳಿ ಮರಳು ಚೀಲ ಹಾಕಿ ನಿಲ್ಲಿಸಲಾಗಿದೆ. ನೀರನ್ನು ಮೂರು ಕೆರೆಗಳಿಗೆ ಹರಿಸಲಾಗಿದೆ ಎಂದರು.
ಮಳೆಗಾಲ ಸಂದರ್ಭದಲ್ಲಿ ಈ ಕೆರೆಗಳಿಗೆ ನೀರು ತುಂಬಿಸಬೆಕಾಗಿದ್ದು, ಕಾರಣಾಂತರಗಳಿಂದ ಕಳೆದ ವರ್ಷದ ಮಳೆಗಾಲದಲ್ಲಿ ನೀರು ತುಂಬಿಸಲು ಆಗಲಿಲ್ಲ. ಈ ಬಾರಿ ಸಾಕಷ್ಟು ಮುಂಜಾಗ್ರತ ಕ್ರಮ ಕೈಗೊಂಡು ಕೆರೆ ತುಂಬಿಸಲು ಮುಂದಾಗಿದ್ದೇವೆ ಎಂದರು. ತುಂಗಭದ್ರಾ ನದಿಗೆ ಒಳ ಹರಿವು ಹೆಚ್ಚಾಗುತ್ತಿದ್ದಂತೆ ಮಾಗಳ ಜಾಕೋಲ್ ಮೂಲಕವಾಗಿ ತಾಲೂಕಿನ ಕೆರೆಗಳಿಗೆ ನೀರುಣಿಸಲಾಗುತ್ತದೆ. ಇದರಿಂದಾಗಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯುವುದಲ್ಲದೆ. ನೀರಿನ ಆಂತರ್ಜಲ ಮಟ್ಟ ಹೆಚ್ಚಾಗುತ್ತದೆ. ಇದರಿಂದಾಗಿ ರೈತರಿಗೆ ತಮ್ಮ ಕೃಷಿ ಚಟುವಟಿಕೆಗೆ ಅನುಕೂಲವಾಗಿ ಉತ್ತಮ ಬೆಳೆ ಬೆಳೆಯಲು ಅನುಕೂಲವಾಗುತ್ತದೆ ಎಂದರು.
ತಾಪಂ ಅಧ್ಯಕ್ಷೆ ಕೆ. ಶಾರದಮ್ಮ, ತಹಶೀಲ್ದಾರ್ ಕೆ. ರಾಘವೇಂದ್ರರಾವ್, ತಾಪಂ ಇಒ ಯು.ಎಚ್. ಸೋಮಶೇಖರ್, ಸಿಪಿಐ ಮಾಲತೇಶ್ ಕೋನಬೇವು, ಮುಖಂಡರಾದ ಕೊಟ್ರೇಶ್, ಜ್ಯೋತಿ ಮಲ್ಲಣ್ಣ ಎಲ್. ಚಂದ್ರನಾಯ್ಕ, ಜಿ. ವಸಂತ ಮುಂತಾದವರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.