ಇಂಡಿ ಪುರಸಭೆಗೆ ತ್ರಿಕೋನ ಸ್ಪರ್ಧೆ ಖಚಿತ
23 ವಾರ್ಡ್‌ಗಳಲ್ಲೂ ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಗಳು ಕಣಕ್ಕಿಳಿಯುವ ನಿರೀಕ್ಷೆ
Team Udayavani, May 6, 2019, 11:14 AM IST
ಇಂಡಿ ಪುರಸಭೆ ಹೊರ ನೋಟ
ಇಂಡಿ: ಲೋಕಸಭಾ ಚುನಾವಣೆ ಮುಗಿದು ಮತದಾರರು ಮತ ಚಲಾಯಿಸಿ ಈ ದೇಶದ ರಾಜ್ಯ ಭಾರ ಯಾರು ಮಾಡುತ್ತಾರೋ ಎನ್ನುವ ನಿರೀಕ್ಷೆಯಲ್ಲಿರುವಾಗಲೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನ ನಿಗದಿಯಾಗಿದೆ.
ಇಂಡಿ ಪಟ್ಟಣದಲ್ಲಿ ಒಟ್ಟು 23 ಸದಸ್ಯರ ಬಲದ ಪುರಸಭೆಗೆ ಚುನಾವಣೆ ನಿಗದಿಯಾಗಿದ್ದು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳ ಕಾರ್ಯಕರ್ತರು ಟಿಕೆಟ್ ಗಿಟ್ಟಿಸಿಕೊಳ್ಳಲು ಪ್ರಯತ್ನ ಪಡುತ್ತಿದ್ದಾರೆ. ಇನ್ನು ಕೆಲವರಂತೂ ಪಕ್ಷ ಟಿಕೆಟ್ ಕೊಡದಿದ್ದರೇನಂತೆ ಪಕ್ಷೇತರವಾಗಿ ಸ್ಪರ್ಧಿಸಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ.
2014ರಲ್ಲಿ ನಡೆದ ಪುರಸಭೆ ಚುನಾವಣೆಯಲ್ಲಿ ಬಿಜೆಪಿ 8, ಕೆಜೆಪಿ 3, ಜೆಡಿಎಸ್ 3, ಕಾಂಗ್ರೆಸ್ 7, ಇಬ್ಬರು ಪಕ್ಷೇತರ ಸದಸ್ಯರು ಆಯ್ಕೆಯಾಗಿದ್ದರು. ಬಿಜೆಪಿ 23 ವಾರ್ಡ್‌ಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರಿಂದ ಈ ಮೈತ್ರಿ ಈ ಚುನಾವಣೆಯಲ್ಲೂ ಮುಂದುವರಿಯುತ್ತದೋ ಇಲ್ಲವೋ ಇನ್ನೂ ಸ್ಪಷ್ಟವಾಗಿಲ್ಲ.
ದೋಸ್ತಿ ಮುಂದುವರಿದರೂ ಸ್ಥಳೀಯ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ದೊಸ್ತಿಗೆ ಬೆಂಬಲಿಸುವ ಲಕ್ಷಣಗಳು ಕಾಣುತ್ತಿಲ್ಲ. ಹೀಗಾಗಿ ಈ ಬಾರಿ ಮೈತ್ರಿ ಮಾಡಿಕೊಳ್ಳದೆ ಪ್ರತ್ಯೇಕವಾಗಿಯೇ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದು ಸೂಕ್ತ ಎಂಬ ಮಾತು ಎರಡೂ ಪಕ್ಷದ ಕಾರ್ಯಕರ್ತರಿಂದ ಕೇಳಿ ಬರುತ್ತಿದೆ.
ವಾರ್ಡ್ ನಂ. 1 ಹಿಂದುಳಿದ ವರ್ಗ ಬ, 2. ಸಾಮಾನ್ಯ ಮಹಿಳೆ, 3. ಪರಿಶಿಷ್ಟ ಜಾತಿ ಮಹಿಳೆ, 4. ಸಾಮಾನ್ಯ ಮಹಿಳೆ, 5. ಹಿಂದುಳಿದ ವರ್ಗ ಅ ಮಹಿಳೆ, 6. ಹಿಂದುಳಿದ ವರ್ಗ ಅ ಮಹಿಳೆ, 7. ಪರಿಶಿಷ್ಟ ಪಂಗಡ, 8. ಸಾಮಾನ್ಯ ಮಹಿಳೆ, 9. ಸಾಮಾನ್ಯ, 10. ಸಾಮಾನ್ಯ ಮಹಿಳೆ, 11. ಸಾಮಾನ್ಯ, 12. ಸಾಮಾನ್ಯ ಮಹಿಳೆ, 13. ಸಾಮಾನ್ಯ, 14. ಸಾಮಾನ್ಯ, 15. ಹಿಂದುಳಿದ ವರ್ಗ ಅ, 16. ಸಾಮಾನ್ಯ, 17. ಸಾಮಾನ್ಯ, 18. ಪರಿಶಿಷ್ಟ ಜಾತಿ, 19. ಪರಿಶಿಷ್ಟ ಜಾತಿ, 20. ಪರಿಶಿಷ್ಟ ಜಾತಿ, 21. ಪರಿಶಿಷ್ಟ ಜಾತಿ ಮಹಿಳೆ, 22. ಸಾಮಾನ್ಯ ಮಹಿಳೆ, 23. ಹಿಂದುಳಿದ ವರ್ಗ ಅ ವರ್ಗ.
ಪುರಸಭೆಯ 23 ವಾರ್ಡ್‌ಗಳಿಗೂ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ. ಪ್ರತಿ ವಾರ್ಡ್‌ನಲ್ಲೂ ಕನಿಷ್ಠ 5 ಜನ ಟಿಕೆಟ್ ಕೇಳುತ್ತಿದ್ದಾರೆ. ಆ ವಾರ್ಡ್‌ನಲ್ಲಿ ಹಿರಿಯರ ಮಾರ್ಗದರ್ಶನದ ಮೇಲೆ ಓರ್ವರಿಗೆ ಟಿಕೆಟ್ ನೀಡುತ್ತೇವೆ.
•ಕಾಸುಗೌಡ ಬಿರಾದಾರ, ಬಿಜೆಪಿ ಮಂಡಲ ಅಧ್ಯಕ್ಷ
ಈ ಚುನಾವಣೆಯಲ್ಲಿ ಮೈತ್ರಿ ಬಗ್ಗೆ ಇನ್ನು ಏನೂ ಗೊತ್ತಾಗಿಲ್ಲ. ಹೈ ಕಮಾಂಡ್ ಹೇಳಿದಂತೆ ಕಾರ್ಯ ಮಾಡುತ್ತೇವೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜನ ಕಾಂಗ್ರೆಸ್ ಬೆಂಬಲಿಸುತ್ತಾರೆ ಎಂಬ ನಂಬಿಕೆ ಇದೆ.
•ಇಲಿಯಾಸ್ ಬೋರಾಮಣಿ,
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ
ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಇಲ್ಲ. ಎಲ್ಲ 23 ವಾರ್ಡ್‌ಗಳಲ್ಲಿಯೂ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ. ಬಹುತೇಕ ಸ್ಥಾನಗಳಲ್ಲಿ ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ.
•ಬಿ.ಡಿ. ಪಾಟೀಲ, ಜೆಡಿಎಸ್ ತಾಲೂಕಾಧ್ಯಕ್ಷ
•ಉಮೇಶ ಬಳಬಟ್ಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಎಸ್‌ಎಸ್‌ಎಲ್‌ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ
Bantwala: ಕೆದಿಲ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್ ಕಾರ್ಡ್ ಸ್ಪರ್ಧಿಗಳು
Bengaluru: ಎಸ್‌ಎಸ್‌ಎಲ್‌ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.