ಐಪಿಎಲ್‌ ಟಿ-20 ಪಂದ್ಯ; ಮೆಟ್ರೋ ಹೆಚ್ಚುವರಿ ಸೇವೆ


Team Udayavani, Mar 24, 2019, 12:37 PM IST

ipl-metro

ಬೆಂಗಳೂರು: ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾ.28 ರಿಂದ ಮೇ 04 ರವರೆಗೂ ನಡುಲಿರುವ ವಿವಿಧ ಐಪಿಎಲ್‌ ಟಿ-20 ಕ್ರಿಕೆಟ್‌ ಪಂದ್ಯ ಹಿನ್ನೆಲೆ, ಪಂದ್ಯ ವೀಕ್ಷಣೆಗೆ ಬರುವವರ ಅನುಕೂಲಕ್ಕಾಗಿ “ನಮ್ಮ ಮೆಟ್ರೋ’ ಸೇವೆಯನ್ನು ಮಧ್ಯರಾತ್ರಿ 12.30ರ ವರೆಗೆ ವಿಸ್ತರಿಸಲಾಗಿದೆ.

ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾ.28, ಏಪ್ರಿಲ್‌ 5, 21,24, 30 ಹಾಗೂ ಮೇ 4 ರಂದು ಐಪಿಎಲ್‌ ಪಂದ್ಯಾವಳಿಗಳು ನಿಗದಿಗೊಂಡಿವೆ. ಈ ಹಿನ್ನೆಲೆಯಲ್ಲಿ ಮೆಟ್ರೋ ತನ್ನ ವಾಣಿಜ್ಯ ಸಂಚಾರ ಸೇವೆಯನ್ನು ವಿಸ್ತರಿಸಿದ್ದು, ಆ ದಿನಗಳಲ್ಲಿ ರಾತ್ರಿ 12.30ಕ್ಕೆ ಬೈಯಪ್ಪನಹಳ್ಳಿ, ಮೈಸೂರು ರಸ್ತೆ, ಯಲಚೇನಹಳ್ಳಿ ಮತ್ತು ನಾಗಸಂದ್ರದಿಂದ ಮೆಜೆಸ್ಟಿಕ್‌ ಕಡೆ ರೈಲು ಹೊರಡಲಿದೆ.

ಕೊನೆದಿನ ಸೇವೆಯು ಕೆಂಪೇಗೌಡ ನಿಲ್ದಾಣದಿಂದ ಎಲ್ಲ ನಾಲ್ಕೂ ದಿಕ್ಕುಗಳಿಗೂ ಮಧ್ಯರಾತ್ರಿ 1 ಗಂಟೆ ವರೆಗೆ ಸಿಗಲಿದೆ. ಪಂದ್ಯ ಮುಗಿದ ನಂತರ ಪ್ರಯಾಣಿಕರು ಟೋಕನ್‌ಗಾಗಿ ಕಾಯದಿರಲು “ರಿಟರ್ನ್ಜರ್ನಿ ಪೇಪರ್‌’ ಟಿಕೆಟ್‌ ಪರಿಚಯಿಸಲಾಗಿದೆ. ಈ ಟಿಕೆಟ್‌ಗಳನ್ನು ಪ್ರಯಾಣಿಕರು ಮಧ್ಯಾಹ್ನ 3 ಗಂಟೆಯಿಂದ ಸಂಜೆ 7ರವರೆಗೆ ಯಾವುದೇ ಮೆಟ್ರೋ ನಿಲ್ದಾಣಗಳಿಂದ ಖರೀದಿಸಬಹುದು.

ಈ ಪೇಪರ್‌ ಟಿಕೆಟ್‌ಗಳು ಪಂದ್ಯಾವಳಿ ದಿನದ ಕೊನೆಯ ಮೆಟ್ರೋ ರೈಲು ಸೇವೆವರೆಗೆ ಮಾತ್ರ ಅನ್ವಯ ಆಗಲಿದೆ. ಪಂದ್ಯದ ದಿನದಂದು ಕಬ್ಬನ್‌ ಪಾರ್ಕ್‌ ಮೆಟ್ರೋ ರೈಲು ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಗಳಿಗೆ ರಾತ್ರಿ 10 ಗಂಟೆ ನಂತರ ಪ್ರಯಾಣ ದರ 50 ರೂ. ಇರಲಿದೆ.

ಈ ದಿನಗಳಲ್ಲಿ ರಾತ್ರಿ 10ರ ನಂತರ ಕಬ್ಬನ್‌ ಪಾರ್ಕ್‌ ನಿಲ್ದಾಣದಲ್ಲಿ ಸಾಮಾನ್ಯ ಟೋಕನ್‌ ಮಾರಾಟವಿರುವುದಿಲ್ಲ. ಇಲ್ಲಿನಿಂದ ಪ್ರಯಾಣಿಸುವಾಗ ಪೇಪರ್‌ ಟಿಕೆಟ್‌ ಮಾತ್ರ ಉಪಯೋಗಿಸಬೇಕು. ಇನ್ನು ಏ.7ರಂದು ಸಂಜೆ 4 ಗಂಟೆಗೆ ಪಂದ್ಯವಿರುವುದರಿಂದ ಅಂದು ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಬೆಳಗ್ಗೆ 11 ಮಧ್ಯಾಹ್ನ 3 ಗಂಟೆವರೆಗೆ ಪೇಪರ್‌ ಟಿಕೆಟ್‌ ಲಭ್ಯವಿರುತ್ತವೆ. ಉಳಿದಂತೆ ಟೋಕನ್‌, ಸ್ಪಾರ್ಟ್‌ಕಾರ್ಡ್‌ ಉಪಯೋಗ ಎಂದಿನಂತೆ ಇರಲಿದೆ.

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.