ಅಲೆಮಾರಿಗಳಿಗೆ ಶೀಘ್ರ ಸೂರು ವ್ಯವಸ್ಥೆ
ಹಲವಾರು ವರ್ಷಗಳಿಂದ ಟೆಂಟ್‌ನಲ್ಲಿವಾಸಮಕ್ಕಳಿಗೆ ವೈದ್ಯಕೀಯ ಸೇವೆ ಭರವಸೆ
Team Udayavani, Sep 28, 2019, 11:24 AM IST
ಜಗಳೂರು: ಸಮಾಜದ ಕಟ್ಟಕಡೆಯ ಹಾಗೂ ಅತಿ ಹಿಂದುಳಿದ ಸಮುದಾಯಗಳನ್ನು ಗುರುತಿಸಿ ಅವರಿಗೆ ಸರ್ಕಾರದ ವತಿಯಿಂದ ಸೂರಿನ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಹಶೀಲ್ದಾರ್ ಹುಲ್ಲಮನಿ ತಿಮ್ಮಣ್ಣ ನುಡಿದರು.
ಪಟ್ಟಣದ ಅಶ್ವಥ್ ರೆಡ್ಡಿ ನಗರದ ಸಮಿಪ ಖಾಸಗಿ ಜಮೀನೊಂದರಲ್ಲಿ ಸುಮಾರು ವರ್ಷಗಳಿಂದ ಟೆಂಟ್ ಹಾಕಿಕೊಂಡು ಜೀವನ ನಡೆಸುತ್ತಿರುವ ಅಲೆಮಾರಿ ಸಮುದಾಯದ (ಸಿಂಧೊಳ , ಸುಡಾಗಾಡು ಸಿದ್ದ, ದುರುಮುರುಗಿ ) ಸ್ಥಳಕ್ಕೆ ಭೇಟಿ ನೀಡಿ, ಅವರ ಸಮಸ್ಯೆ ವಿಚಾರಿಸಿ ಅವರು ಮಾತನಾಡಿದರು.
ಸಮಾಜದಲ್ಲಿ ಅತಿ ಹಿಂದುಳಿದ ಸಮುದಾಯಗಳಾದ ಇವರು ಕಸೂತಿ, ಕುರಿ ಸಾಕಣೆ, ಮೀನು ವ್ಯಾಪಾರ ಸೇರಿದಂತೆ ಇತರೆ ಕಸುಬಗಳನ್ನು ಕೈಗೊಂಡು ಜೀವನ ಸಾಗಿಸುತ್ತಿದ್ದಾರೆ. ಸ್ವಂತ ನಿವೇಶನ ಇಲ್ಲದೇ ಖಾಲಿ ಸ್ಥಳಗಳಲ್ಲಿ ಗುಡಿಸಲು ಹಾಕಿಕೊಂಡು ಮಳೆ-ಗಾಳಿ ಎನ್ನದೇ ವಾಸಿಸುತ್ತಿದ್ದಾರೆ.
ಇವರ ಬದುಕು ತುಂಬ ನಿಕೃಷ್ಟವಾಗಿದೆ. ಇಂಥವರಿಗೆ ಸೂರು ನೀಡುವ ವಿಷಯವನ್ನು ಜಿಲ್ಲಾಧಿಕಾರಿಗಳ ಮುಂದೆ ಪ್ರಸ್ತಾಪಿಸಿದಾಗ ತಕ್ಷಣ ಅನುಮೋದನೆ ನೀಡಿದರು ಎಂದರು.
ಪಟ್ಟಣದ ಲತೀಫ್ ಸಾಬ್ ಬಡಾವಣೆ ಹಿಂಭಾಗದಲ್ಲಿರುವ 1 ಎಕರೆ ಪ್ರದೇಶದಲ್ಲಿ ನಿವೇಶನ ನೀಡಲಾಗುವುದು ಎಂದು ತಿಳಿಸಿದರು.
ಗುಡಿಸಲಲ್ಲಿ ಕುಳಿತೇ ಯೋಗಕ್ಷೇಮ ವಿಚಾರ: ತಹಶೀಲ್ದಾರ್ ಹುಲ್ಲುಮನಿ ತಿಮ್ಮಣ್ಣ ಅಲೆಮಾರಿಗಳ ಟೆಂಟ್‌ನಲ್ಲಿಯೇ ಕುಳಿತು ಸಮಸ್ಯೆಗಳನ್ನು ಆಲಿಸಿದ್ದು ವಿಶೇಷವಾಗಿತ್ತು. ಮಕ್ಕಳಿಗೆ ಚಿಕಿತ್ಸೆ ಭರವಸೆ: ಕಾಲಿನ ಅಂಗವೈಕ್ಯದಿಂದ ಬಳಲುತ್ತಿರುವ ಮಕ್ಕಳನ್ನು ಕಂಡು, ಶಸ್ತ್ರ ಚಿಕಿತ್ಸೆ ಮಾಡಿದರೆ ಮಕ್ಕಳು ಗುಣಮುಖರಾಗುತ್ತಾರೆ ಎಂದು ಚಿಕಿತ್ಸೆ ವ್ಯವಸ್ಥೆ ಮಾಡುವಂತೆ ತಾಲೂಕು ಆರೋಗ್ಯಾಧಿಕಾರಿಗೆ ದೂರವಾಣಿ ಮೂಲಕ ಸೂಚನೆ ನೀಡಿದರು.
ನಮ್ಮ ಪಾಲಿನ ದೇವರು: ಅಲೆಮಾರಿ ಸಮುದಾಯದ ತಾಲೂಕು ಅಧ್ಯಕ್ಷ ಶಿವಣ್ಣ ಮಾತನಾಡಿ, ನಿವೇಶನ ನೀಡುವಂತೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿರಲಿಲ್ಲ. ಆದರೆ ತಹಶೀಲ್ದಾರ್ ತಿಮ್ಮಣ್ಣ ಮತ್ತು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಅಶೋಕ್ ಮತ್ತು ಮಹೇಶ್ ಸಮುದಾಯಕ್ಕೆ ನಿವೇಶನ ದೊರೆಯುವಂತೆ ಮಾಡಿದ್ದಾರೆ.
ಇವರೇ ನಮ್ಮ ಪಾಲಿನ ದೇವರು ಎಂದು ಹೇಳಿದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಅಶೋಕ್ ಮತ್ತು ಮಹೇಶ್ ಸೇರಿದಂತೆ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಗಾಂಜಾ ಸೇವನೆ; ಯುವಕನ ಬಂಧನ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.