ಜಗಳೂರಿಗೆ 2.40 ಟಿಎಂಸಿ ನೀರು
•ಸಮಿತಿ ಬೇಡಿಕೆಗಳಿಗೆ ಸಿಎಂ ಅಸ್ತು •ಬೆಳಘಟ್ಟ ಮಾರ್ಗವಾಗಿ ಕಾಲುವೆ
Team Udayavani, Sep 14, 2019, 11:15 AM IST
ಜಗಳೂರು: ಬೆಂಗಳೂರಿನಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಎಸ್.ವಿ. ರಾಮಚಂದ್ರ ನೇತೃತ್ವದಲ್ಲಿ ಹೋರಾಟ ಸಮಿತಿ ಸದಸ್ಯರು ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಭದ್ರಾ ಮೇಲ್ದಂಡೆ ನೀರಾವರಿ ಯೋಜನೆ ಕುರಿತು ಚರ್ಚಿಸಿದರು.
ಜಗಳೂರು: ಜಗಳೂರಿಗೆ ಭದ್ರಾ ಮೇಲ್ದಂಡೆ ಯೋಜನೆ ವಿಸ್ತರಣೆ ಮತ್ತು ಮಾರ್ಗ ಬದಲಾವಣೆ ಮಾಡುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ ನೀಡಿದ್ದಾರೆ ಎಂದು ಶಾಸಕ ಎಸ್.ವಿ. ರಾಮಚಂದ್ರ ತಿಳಿಸಿದ್ದಾರೆ.
ಶುಕ್ರವಾರ ಸಂಸದ ಜಿ.ಎಂ. ಸಿದ್ದೇಶ್ವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ, ಶಾಸಕರಾದ ಎಸ್.ವಿ. ರಾಮಚಂದ್ರ, ಮಾಡಾಳು ವಿರೂಪಾಕ್ಷಪ್ಪ, ಭದ್ರಾ ಮೇಲ್ದಂಡೆ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ತಿಪ್ಪೇಸ್ವಾಮಿ ಸೇರಿದಂತೆ ಮತ್ತಿತರರು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಯೋಜನೆ ಅನುಷ್ಠಾನ ಕುರಿತು ಚರ್ಚಿಸಿದರು.
ಈ ವೇಳೆ ಜಗಳೂರು ತಾಲೂಕಿಗೆ 1.86 ಟಿಎಂಸಿ ಬದಲಾಗಿ 2.40 ಟಿಎಂಸಿ ನೀರು ಮತ್ತು ಕಾತ್ರಾಳ್ ಮಾರ್ಗದ ಬದಲಾಗಿ ಬೆಳಘಟ್ಟ ಮಾರ್ಗದಿಂದಲೇ ಸಂಗೇನಹಳ್ಳಿಗೆ ಶಾಖಾ ಕಾಲುವೆ ನಿರ್ಮಿಸಿ ನೀರು ಹರಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚಿಸಿದರು.
2800 ಕೋಟಿ ರೂ ವೆಚ್ಚದಲ್ಲಿ ತುಂಗಭದ್ರಾ ಹಿನ್ನೀರಿನಿಂದ ಪಾವಗಡಕ್ಕೆ ಕುಡಿಯುವ ನೀರಿನ ಯೋಜನೆ ತಾಲೂಕಿನಲ್ಲಿ ಹಾದು ಹೋಗಲಿದ್ದು, ಜಗಳೂರು ತಾಲೂಕಿನ ಒಂದು ಹೋಬಳಿಗಾದರೂ ಯೋಜನೆಯಲ್ಲಿ ಕುಡಿಯುವ ನೀರು ಒದಗಿಸುವಂತೆ ಮಾಡಿಕೊಂಡ ತಮ್ಮ ಮನವಿಗೆ ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದಾರೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಮಾಹಿತಿ ನೀಡಿದ್ದಾರೆ. ಜಗಳೂರು ಹಾಗೂ ಹರಿಹರದ ಕೆಲವು ಭಾಗಗಳಲ್ಲಿ ಬರಗಾಲ ಇದ್ದು ಮೇವು ಬ್ಯಾಂಕ್ ಹಾಗೂ ಗೋ ಶಾಲೆ ತೆರೆಯುವಂತೆ ಮಾಡಿದ ಮನವಿ ಕುರಿತು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಂದಿರಾ ಗಾಂಧಿ ಸಂವಿಧಾನ ತಿದ್ದುಪಡಿ ಮಾಡಿದ್ದರಿಂದ ದೇಶಕ್ಕೆ ಭಾರೀ ಹಿನ್ನಡೆ: ಕೆ.ಅಣ್ಣಾಮಲೈ
ಕೆಮ್ತೂರು ತುಳು ನಾಟಕ ಸ್ಪರ್ಧೆ: “ಈದಿ’ ಪ್ರಥಮ, “ದಿ ಫೈಯರ್’ ದ್ವಿತೀಯ
Dharmasthala: ಜನಜಾಗೃತಿ ವೇದಿಕೆ ನೂರಾರು ಕವಲಿರುವ ವೃಕ್ಷ: ಡಾ.ಹೇಮಾವತಿ ಹೆಗ್ಗಡೆ
ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ; ನರಿಂಗಾನ ಕಂಬಳೋತ್ಸವದಲ್ಲಿ ಸಿಎಂ ಭರವಸೆ
ದೇಶಾಭಿವೃದ್ಧಿಗೆ ಪ್ರತಿಯೊಬ್ಬರ ಕೊಡುಗೆ ಅಗತ್ಯ : ನ್ಯಾ| ವಿಶ್ವನಾಥ ಶೆಟ್ಟಿ ಕರೆ
MUST WATCH
ಹೊಸ ಸೇರ್ಪಡೆ
ಇಂದಿರಾ ಗಾಂಧಿ ಸಂವಿಧಾನ ತಿದ್ದುಪಡಿ ಮಾಡಿದ್ದರಿಂದ ದೇಶಕ್ಕೆ ಭಾರೀ ಹಿನ್ನಡೆ: ಕೆ.ಅಣ್ಣಾಮಲೈ
ಕೆಮ್ತೂರು ತುಳು ನಾಟಕ ಸ್ಪರ್ಧೆ: “ಈದಿ’ ಪ್ರಥಮ, “ದಿ ಫೈಯರ್’ ದ್ವಿತೀಯ
Dharmasthala: ಜನಜಾಗೃತಿ ವೇದಿಕೆ ನೂರಾರು ಕವಲಿರುವ ವೃಕ್ಷ: ಡಾ.ಹೇಮಾವತಿ ಹೆಗ್ಗಡೆ
ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ; ನರಿಂಗಾನ ಕಂಬಳೋತ್ಸವದಲ್ಲಿ ಸಿಎಂ ಭರವಸೆ
ದೇಶಾಭಿವೃದ್ಧಿಗೆ ಪ್ರತಿಯೊಬ್ಬರ ಕೊಡುಗೆ ಅಗತ್ಯ : ನ್ಯಾ| ವಿಶ್ವನಾಥ ಶೆಟ್ಟಿ ಕರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.