ಪಠ್ಯೇತರ ಚಟುವಟಿಕೆಗಳೂ ಅವಶ್ಯಕ
ಪ್ರತಿಭಾ ಕಾರಂಜಿ-ಕಲೋತ್ಸವಮಕ್ಕಳ ಆಸಕ್ತಿಯನ್ನು ಶಿಕ್ಷಕರು-ಪೋಷಕರು ಪ್ರೋತ್ಸಾಹಿಸಲಿ
Team Udayavani, Nov 22, 2019, 11:41 AM IST
ಜಗಳೂರು: ವಿದ್ಯಾರ್ಥಿಗಳು ಓದು, ಬರಹದ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆ ಪ್ರದರ್ಶಿಸಬೇಕು ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು.
ಪಟ್ಟಣದ ಇಮಾಮ್ ಶಾಲಾ ಆವರಣದಲ್ಲಿ ತಾಲೂಕು ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲಾ ಉತ್ಸವವನ್ನು ಉದ್ಘಾಟಿಸಿ, ಅವರು ಮಾತನಾಡಿದರು, ಕಲಿಕೆ ಸಮಯದಲ್ಲಿ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಕೊಳ್ಳಬೇಕು. ಮಕ್ಕಳಿಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ತೊಡಗಿಕೊಳ್ಳಲು ಮನೆಯಲ್ಲಿ ಪೋಷಕರು, ಶಾಲೆಯಲ್ಲಿ ಶಿಕ್ಷಕರು ಸಹಕಾರ ನೀಡಬೇಕು. ಆಗ ಮಾತ್ರ ವಿದ್ಯಾರ್ಥಿಗಳು ಸಾಧನೆಗೈಯಲು ಸಾಧ್ಯವಾಗಲಿದೆ ಎಂದರು.
ನನಗೆ ಕ್ರೀಡೆ ಮತ್ತು ಸಾಂಸ್ಕೃತಿಕ ವಿಭಾಗದಲ್ಲಿ ಆಸಕ್ತಿ ಇದ್ದು ಹಲವಾರು ಬಾರಿ ತಾಲೂಕಿನಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡಿಸಿದ್ದೇನೆ. ಬರುವ ಡಿಸೆಂಬರ್ ಮಾಹೆಯಲ್ಲಿ ಅರಸಿಕೆರೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಿದ್ದೇನೆ ಎಂದರು.
ನಮ್ಮ ಶಾಲೆಯ ಮಕ್ಕಳೇ ಕಲಾ ತಂಡಗಳನ್ನು ಮೀರಿಸುವಂತೆ ನೃತ್ಯ, ಕೋಲಾಟ ಸೇರಿದಂತೆ ವಿವಿಧ ಚಟುವಟಿಕೆಗಳಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದು ಮುಂದಿನ ಕಾರ್ಯಕ್ರಮಗಳಲ್ಲಿ ಇವರಿಗೆ ಆವಕಾಶ ನೀಡುತ್ತೇನೆ ಎಂದರು.
ಮುಂದಿನ ದಿನಗಳಲ್ಲಿ ತಾಲೂಕಿನ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಿದ್ದು, ಉತ್ತಮ ಪ್ರದರ್ಶನ ತೋರಿದವರಿಗೆ ಬಹುಮಾನ ವಿತರಿಸಲಾಗುವುದು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಯಶೋಧಮ್ಮ ಮರಳುಸಿದ್ದಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ ಇಂತಹ ವೇದಿಕೆಗಳು ಅವಶ್ಯಕ ಎಂದರು. ಕ್ಷೇತ್ರ ಶಿಕ್ಷಣಾಧಿ ಕಾರಿ ಯುವರಾಜ್ ನಾಯ್ಕ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಕಲೆಯನ್ನು ಪ್ರೋತ್ಸಾಹಿಸುವ ಸಲುವಾಗಿ ಸರಕಾರ 2002 ರಿಂದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಮಕ್ಕಳು ಸಹ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆ ಸಹಕಾರಿಯಾಗಿದೆ. ತಂತ್ರಜ್ಞಾನದ ಭರಾಟೆಯಲ್ಲಿ ಕಣ್ಮರೆಯಾಗುತ್ತಿರುವ ಜಾನಪದ ಕಲೆಗಳನ್ನು ಉಳಿಸಿ, ಬೆಳೆಸುವಂತಹ ಕೆಲಸ ಸಹ ಇದರಿಂದ ನಡೆಯುತ್ತಿದೆ ಎಂದು ಹೇಳಿದರು.
ಮುಗ್ಗಿದ ರಾಗಿಹಳ್ಳಿ ಮೋರಾರ್ಜಿ ದೇಸಾಯಿ ವಸತಿ ಶಾಲಾ ಮಕ್ಕಳು ಮಾಡಿದ ಸಾಂಪ್ರದಾಯಿಕ ಕಂಸಾಳೆ ನೃತ್ಯ ಮೆಚ್ಚಿ ಶಾಸಕರು ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ 10 ಸಾವಿರ ರೂ. ನಗದು ಬಹುಮಾನ ನೀಡಿದರು. ವಿವಿಧ ಸ್ಪರ್ಧೆಗಳಲ್ಲಿ 800ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಜಿಪಂ ಸದಸ್ಯರಾದ ಎಸ್.ಕೆ. ಮಂಜುನಾಥ, ಶಾಂತಕುಮಾರಿ,ಉಮಾ ವೆಂಕಟೇಶ್, ಜಿ.ಪಂ ಮಾಜಿ ಸದಸ್ಯ ಸೊಕ್ಕೆ ನಾಗರಾಜ್, ಪಪಂ ಸದಸ್ಯರಾದ ಲುಕ್ಮಾನ್ ಖಾನ್, ಬಿಜೆಪಿ ಮುಖಂಡರಾದ ಬಿಸ್ತುವಳ್ಳಿ ಬಾಬು, ವಕೀಲ ಹನುಮಂತಪ್ಪ, ಇಮಾಮ್ ಶಾಲಾ ಆಡಳಿತ ಮಂಡಳಿಯ ಹುಸೇನ್ ಮಿಯ್ನಾ, ಇಸಿಓ ಮಂಜುನಾಥ, ಶಿಕ್ಷಕರಾದ ಸತೀಶ್, ನಾಗರಾಜ್, ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.