ಸೊಕ್ಕೆಯಲ್ಲಿ 3 ದಿನಕ್ಕೊಮ್ಮೆ 4 ಬಿಂದಿಗೆ ನೀರು!

ನೀರಿಗೆ ಹಾಹಾಕಾರವಿದ್ದರೂ ಟ್ಯಾಂಕರ್‌ ನೀರು ಪೂರೈಕೆಗೆ ನಿರ್ಲಕ್ಷ್ಯ •ನೀರು ಹುಡುಕಿ ತರುವುದೇ ಗ್ರಾಮಸ್ಥರ ಕೆಲಸ

Team Udayavani, May 17, 2019, 10:41 AM IST

17-MAY-5

ಜಗಳೂರು: ಸೊಕ್ಕೆ ಗ್ರಾಮದಲ್ಲಿ ಜನರು ಖಾಲಿ ಕೊಡಗಳನ್ನು ನೀರು ಸಂಗ್ರಹಣಾ ತೊಟ್ಟಿಯ ಎದುರು ಸರದಿ ಸಾಲಲ್ಲಿ ಇರಿಸಿರುವುದು.

ಜಗಳೂರು: ಸೊಕ್ಕೆ ಗ್ರಾಮದಲ್ಲಿ 3 ದಿನಕ್ಕೊಮ್ಮೆ ಮನೆಗೆ 4 ಬಿಂದಿಗೆ ನೀರು ಮಾತ್ರ ತಾಲೂಕಾಡಳಿತ ಪೂರೈಸುತ್ತಿದ್ದು, ಈ ನೀರು ಸಾಕಾಗದೇ ಗ್ರಾಮಸ್ಥರು ಸುಮಾರು ಒಂದೂವರೆ ಕಿ.ಮಿ ದೂರದ ಜಮಿನುಗಳಿಗೆ ತೆರಳಿ ನೀರು ತರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ತಾಲೂಕಿನ ಸೊಕ್ಕೆ ಗ್ರಾಮವು ಹೋಬಳಿ ಮತ್ತು ಪಂಚಾಯಿತಿಯ ಕೇಂದ್ರ ಸ್ಥಾನವಾಗಿದ್ದು ಸುಮಾರು ನಾಲ್ಕು ಸಾವಿರ ಜನಸಂಖ್ಯೆ ಹೊಂದಿದೆ.

12 ಬೋರಿದ್ದರೂ ನೀರಿಲ್ಲ: ಗ್ರಾಮದ‌ಲ್ಲಿ 12 ಬೋರ್‌ವೆಲ್ ಪೈಕಿ 5 ಬೋರ್‌ಗಳಲ್ಲಿ ಮಾತ್ರ ಸ್ವಲ್ಪ ಪ್ರಮಾಣದ ನೀರು ಬರುತ್ತಿದ್ದು ಉಳಿದ ಬೋರ್‌ಗಳು ಬತ್ತಿವೆ. ನೀರಿರುವ ಬೋರ್‌ಗಳಿಂದ ಸಂಗ್ರಹಣಾ ತೊಟ್ಟಿ ಭರ್ತಿ ಮಾಡಿ ಗ್ರಾಮಸ್ಥರಿಗೆ ನೀರು ಪೂರೈಸಲಾಗುತ್ತಿದೆ. ಗ್ರಾಮದಲ್ಲಿ ನೀರಿನ ಸಮಸ್ಯೆ ಇದ್ದರೂ ಸಹ ಖಾಸಗಿ ಬೋರ್‌ವೆಲ್ನಿಂದ ನೀರು ಸರಬರಾಜು ಮಾಡಲು ಅಧಿಕಾರಿಗಳು ಮುಂದಾಗುತ್ತಿಲ್ಲ ಅಥವಾ ಟ್ಯಾಂಕರ್‌ ನೀರು ಪೂರೈಸಲು ಮುಂದಾಗುತ್ತಿಲ್ಲ ಎನ್ನುವುದು ಗ್ರಾಮಸ್ಥರ ಆರೋಪವಾಗಿದೆ.

1.5 ಕಿ.ಮೀ ದೂರದಿಂದ ನೀರು: ಸೊಕ್ಕೆ ಗ್ರಾಮದ ಸುತ್ತ ಮುತ್ತಲಿನ ಜಮಿನುಗಳಿಂದ ಪ್ರತಿದಿನ ಜನರು ಕೈಗಾಡಿಯಲ್ಲಿ ನೀರು ತರುವ ಸ್ಥಿತಿ ಇದೆ. ಕೆಲಸ ಕಾರ್ಯಗಳನ್ನು ಬದಿಗೊತ್ತಿ ಸುಡು ಬಿಸಿಲಿನಲ್ಲಿ ನೀರು ತರುವುದೇ ಗ್ರಾಮಸ್ಥರ ಕಾಯಕವಾಗಿದೆ. ಎಲ್ಲರಿಗೂ ನೀರು ಸಿಗದೇ ಮಹಿಳೆಯರು ನಿತ್ಯ ಜಗಳವಾಡುವುದು ಸಾಮಾನ್ಯವಾಗಿದೆ.

ಇರುವ ಬೋರ್‌ವೆಲ್ಗಳಲ್ಲಿ ಗ್ರಾಮಸ್ಥರಿಗೆ ನೀರನ್ನು ನೀಡಲಾಗುತ್ತಿತ್ತು. ಈಗ ಸಮಸ್ಯೆ ತೀವ್ರಗೊಳ್ಳುತ್ತಿದ್ದು ಈ ಕೂಡಲೇ ಟ್ಯಾಂಕರ್‌ ಮೂಲಕ ನೀರು ಪೂರೈಕೆ ಮಾಡುವಂತೆ ಪಿಡಿಓಗೆ ಸೂಚನೆ ನೀಡಲಾಗುವುದು.
ಕೆ.ಓ.ಜಾನಕಿರಾಮ್‌,
ತಾಪಂ ಇಓ, ಜಗಳೂರು.

ಗ್ರಾಮದಲ್ಲಿ ನೀರಿನ ಸಮಸ್ಯೆ ಇದ್ದರೂ ಸಹ ಟ್ಯಾಂಕರ್‌ ಅಥವಾ ಖಾಸಗಿ ಬೋರ್‌ವೆಲ್ ಮೂಲಕ ನೀರು ತರುವ ವ್ಯವಸ್ಥೆಯನ್ನು ಗ್ರಾಮ ಪಂಚಾಯಿತಿಯವರು ಮಾಡುತ್ತಿಲ್ಲ.
ಪರಶುರಾಮ, ಲಕ್ಷ್ಮಣ, ಗ್ರಾಮಸ್ಥರು

ಟಾಪ್ ನ್ಯೂಸ್

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.