ಅಕ್ರಮ ಹಣ-ವಸ್ತು ಕಂಡಲ್ಲಿ ಕ್ರಮ ಕೈಗೊಳ್ಳಿ

ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನಿಂದ ಕರ್ತವ್ಯ ನಿಭಾಯಿಸಿ ಪ್ರಚಾರ ಭಾಷಣ ವಿಡಿಯೋ ಮಾಡಿ

Team Udayavani, Apr 3, 2019, 3:17 PM IST

3-April-17

ಜಮಖಂಡಿ: ನಗರದಲ್ಲಿ ನಡೆದ ಚುನಾವಣಾ ಅಧಿಕಾರಿಗಳ ಸಭೆಯಲ್ಲಿ ಸಹಾಯಕ ಚುನಾವಣಾಧಿಕಾರಿ ಮತ್ತು ಉಪವಿಭಾಗಾಧಿಕಾರಿ ಇಕ್ರಮ ಶರೀಫ್‌ ಮಾತನಾಡಿದರು.

ಜಮಖಂಡಿ: ಅಧಿಕಾರಿಗಳು ತಮ್ಮ ವ್ಯಾಪ್ತಿಯ ಚೆಕ್‌ ಪೋಸ್ಟ್‌ಗಳಲ್ಲಿ ಯಾವುದೇ ಲೋಪ ಎಸಗದಂತೆ ಕೆಲಸ ನಿರ್ವಹಿಸಬೇಕು. ಪ್ರತಿಯೊಂದು ವಾಹನ ತಪಾಸಣೆಗೆ ಒಳಪಡಿಸಿ ಅಕ್ರಮ ಹಣ, ವಸ್ತುಗಳು ಕಂಡು ಬಂದಲ್ಲಿ ಕೂಡಲೇ ಸೀಜ್‌ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಹಾಯಕ ಚುನಾವಣಾಧಿಕಾರಿ ಮತ್ತು ಉಪವಿಭಾಗಾಧಿಕಾರಿ ಇಕ್ರಮ ಶರೀಫ್‌ ಹೇಳಿದರು.

ನಗರದ ಮಿನಿ ವಿಧಾನಸೌಧ ಚುನಾವಣಾ ಕಚೇರಿಯಲ್ಲಿ ಚುನಾವಣಾ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಯಾವುದೇ ಕಾರಣಕ್ಕೂ ಅನುಮತಿಯಿಲ್ಲದೇ ನಿಮಗೆ ವಹಿಸಿದ ವ್ಯಾಪ್ತಿ ಬಿಟ್ಟು ಹೊರಗಡೆ ಹೋಗುವಂತಿಲ್ಲ ಎಂದು ಅಧಿಕಾರಿಗಳಿಗೆ ತಾಕಿತು
ಮಾಡಿದರು. ಯಾವುದೇ ಮನೆಯಲ್ಲಿ, ಪ್ರದೇಶದಲ್ಲಿ ಹಣ ಅಥವಾ ಮದ್ಯ ಸಾಗಾಣಿಕೆ ಅಕ್ರಮವಾಗಿ ನಡೆಯುತ್ತಿವೆಂಬ ಅನುಮಾನಗಳು ಕಂಡುಬಂದಲ್ಲಿ ತೆರಿಗೆ ಇಲಾಖೆ, ಪೊಲೀಸ್‌ ಇಲಾಖೆ, ಅಬಕಾರಿ ಇಲಾಖೆಗಳ ಸಹಯೋಗದೊಂದಿಗೆ ಪಂಚನಾಮೆ ಮಾಡಿ ಪ್ರಕರಣ ನೊಂದಾಯಿಸಬೇಕು. ಪೊಲೀಸ್‌ರು ಅಕ್ರಮ ಹಣ ಮತ್ತು ಮದ್ಯವನ್ನು ಸೀಜ್‌ ಮಾಡಿದ 24 ಗಂಟೆ ಒಳಗಡೆ ಸಕ್ಷಮ ಪ್ರಾಧಿಕಾರದ ಎದುರು ಹಾಜರು ಪಡಿಸಬೇಕು ಎಂದರು.

ತಮ್ಮ ವ್ಯಾಪ್ತಿಯಲ್ಲಿ ಬರುವ ದುರ್ಬಲ, ಸೂಕ್ಷ್ಮ ಮತಗಟ್ಟೆ ಪ್ರದೇಶಗಳ ಮೇಲೆ ಪ್ರತಿದಿನ ವಿಕ್ಷಣೆ ಇರಬೇಕು. ಸಮುದಾಯ ಭವನ, ಕಲ್ಯಾಣ ಮಂಟಪ, ಬಾರ್‌ ಮತ್ತು ರೆಸ್ಟೋರೆಂಟ್‌ ಗಳ ಮೇಲೆ ನಿಗಾ ಇಡಬೇಕು. ಮನೆ-ಮನೆ ಪ್ರಚಾರ, ರ್ಯಾಲಿ ಸಹಿತ ಪ್ರತಿಯೊಂದು ಪ್ರಚಾರಕ್ಕೆ ಚುನಾವಣಾ ಅ ಧಿಕಾರಿಗಳಿಂದ 48 ಗಂಟೆ ಮುಂಚೆ ಅನುಮತಿ ಪಡೆದಿರಬೇಕು. ಇಲ್ಲವಾದಲ್ಲಿ ಅಂತಹ ಕಾರ್ಯಕ್ರಮಗಳನ್ನು ರದ್ದುಪಡಿಸಬೇಕೆಂದು ಸೂಚಿಸಿದರು. ಸಾರ್ವಜನಿಕರು ಚುನಾವಣಾ ಸಂಬಂಧಿಸಿದ ಅಕ್ರಮ ವ್ಯವಹಾರಗಳು ಕಂಡುಬಂದಲ್ಲಿ ದೂರುಗಳನ್ನು ದಾಖಲಿಸಬಹುದು ಎಂದರು.

ಇದೇ ಸಂದರ್ಭದಲ್ಲಿ ವಿವಿಟಿ ಮತ್ತು ವಿಎಸ್‌ಟಿ ಅಧಿಕಾರಿಗಳಿಗೆ ಅವರ ಕರ್ತವ್ಯ ಮತ್ತು ಜವಾಬ್ದಾರಿಗಳ ಕುರಿತು ಮಾಹಿತಿ ನೀಡಲಾಯಿತು. ರಾಜಕೀಯ ಪ್ರಚಾರಗಳ ಭಾಷಣ ವಿಡಿಯೋಗಳನ್ನು ಮಾಡಬೇಕು. ಯಾವುದೇ ಕಾರಣಕ್ಕೆ ಕರ್ತವ್ಯ ಲೋಪ ಎಸಗದೆ ಕಾರ್ಯನಿರ್ವಹಿಸಲು ಎಚ್ಚರಿಕೆ ನೀಡಿದರು. ಸಭೆಯಲ್ಲಿ ತಹಶೀಲ್ದಾರ್‌ ಚಂದ್ರಶೇಖರ ಗಾಳಿ, ತೇರದಾಳದ ಸಹಾಯಕ ಚುನಾವಣಾಧಿಕಾರಿ ದುರ್ಗೇಶ ರುದ್ರಾಕ್ಷಿ, ರಬಕವಿ ಬನಹಟ್ಟಿ ತಹಶೀಲ್ದಾರ್‌ ಮಹೆಬೂಬಿ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

3-

Mahalingpur: 2020ರ ಪುರಸಭೆ ಗಲಾಟೆ ಪ್ರಕರಣ: ಮರು ತನಿಖೆಗೆ ಕೋರ್ಟ್ ಆದೇಶ

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಅನ್ನದಾತರ ನೋವಿಗೆ ಮಿಡಿಯದ ಜಿಲ್ಲಾಡಳಿತ; ರೈತರ ಅಹೋರಾತ್ರಿ ಧರಣಿ

ಅನ್ನದಾತರ ನೋವಿಗೆ ಮಿಡಿಯದ ಜಿಲ್ಲಾಡಳಿತ; ರೈತರ ಅಹೋರಾತ್ರಿ ಧರಣಿ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

POLICE-5

Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.