ಎಫ್ಬಿಯಲ್ಲಿ ಸಿದ್ದು ವಿರುದ್ಧ ಜನಾರ್ದನ ರೆಡ್ಡಿ ಕಿಡಿ
Team Udayavani, Mar 24, 2019, 12:38 PM IST
ಬೆಂಗಳೂರು: ಕಾಂಗ್ರೆಸ್ ಶುಕ್ರವಾರ ಬಿಡುಗಡೆ ಮಾಡಿದ್ದ ಯಡಿಯೂರಪ್ಪ ಅವರ ಡೈರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯವರು ಫೇಸ್‌ಬುಕ್ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.
ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ ಸುಳ್ಳಿನ ಸರದಾರ ಸಿದ್ದರಾಮಣ್ಣನ ಮುಖಕ್ಕೆ ಮಹಾ ಮಂಗಳಾರತಿಯಾಗಿದೆ ಎಂದು ಹೆಡ್‌ಲೈನ್ ನೀಡಿ, ಪೋಸ್ಟ್ ಬರೆದಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಬರೆದಿದ್ದಾರೆ ಎನ್ನುವ ನಕಲಿ ಡೈರಿಯನ್ನು ಶುಕ್ರವಾರ ದೆಹಲಿಯಲ್ಲಿ ಎಐಸಿಸಿ ವಕ್ತಾರರು ಬಿಡುಗಡೆ ಮಾಡಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ನಕಲಿ ಡೈರಿ ಬಿಡುಗಡೆ ವಿಷಯ ಮಾಧ್ಯಮಗಳಲ್ಲಿ ಬರುತ್ತಿದ್ದಂತೆ ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಡೈರಿ ಇರುವ ಬಗ್ಗೆ ನನಗೆ ಗೊತ್ತಿತ್ತು.
ಬಿಜೆಪಿ ಸರ್ಕಾರದಲ್ಲಿ ರೆಡ್ಡಿ ಹಾಗೂ ಯಡಿಯೂರಪ್ಪನವರು ಸೇರಿ ಲೂಟಿ ಹೊಡೆದು ಹೈಕಮಾಂಡ್‌ಗೆ ಹಣ ತಲುಪಿಸಿದ್ದಾರೆ ಎಂದು ಅಸಂಬದ್ಧ ಹೇಳಿಕೆಯನ್ನು ನೀಡಿದ್ದಾರೆ. ಶನಿವಾರ ಸಂಜೆ ಸ್ವತ: ಐಟಿ ಇಲಾಖೆಯ ಮುಖ್ಯಸ್ಥರು ಮಾತನಾಡಿ, “ನಿನ್ನೆ ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿರುವ ಡೈರಿ ನಕಲಿ ಡೈರಿ’ ಎಂದು ಸ್ಪಷ್ಟನೆ ನೀಡಿದೆ.
ಮಾಜಿ ಮುಖ್ಯಮಂತ್ರಿಯಾಗಿ ಸಾಮಾನ್ಯ ತಿಳುವಳಿಕೆಯೂ ಇಲ್ಲದಂತೆ ಬಾಯಿಗೆ ಬಂದಂತೆ ಬೇಕಾಬಿಟ್ಟಿ ಹೇಳಿಕೆ ನೀಡಿರುವುದು ಸರಿಯಲ್ಲ. ಇಂತಹ ವರ್ತನೆಯಿಂದಲೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹೀನಾಯವಾಗಿ ಸೋತು ಮಾನ ಕಳೆದುಕೊಂಡು, ಬಾದಾಮಿಯಲ್ಲಿ ಅಲ್ಪಮಾನ ಉಳಿಸಿಕೊಂಡವರು, ಆತುರ ಆತುರವಾಗಿ ಸತ್ಯಾಸತ್ಯತೆ ತಿಳಿಯದೆ ಮಾತನಾಡಬಾರದು ಎಂಬುದನ್ನು ಈಗಲಾದರೂ ಅರಿತುಕೊಳ್ಳಲಿ ಎಂದು ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ ಬರೆದುಕೊಂಡಿದ್ದಾರೆ.
ಇದಕ್ಕೆ ಬಹುತೇಕರು ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ವಿರುದ್ಧವಾಗಿ ಕಮೆಂಟ್ ಮಾಡಿದ್ದಾರೆ. 38 ಕಮೆಂಟ್, 49 ಶೇರ್ ಹಾಗೂ 230ಕ್ಕೂ ಅಧಿಕ ಲೈಕ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.