ಕೋನಾಹಿಪ್ಪರಗಿ-ಸರಡಗಿ ಸೇತುವೆಗೆ ಗ್ರಹಣ

54 ಕೋಟಿ ರೂ. ವೆಚ್ಚ ಮಾಡಿ ನಿರ್ಮಿಸಿದರೂ ಉಪಯೋಗಕ್ಕಿಲ್ಲರಸ್ತೆ ಹದಗೆಟ್ಟು ಸವಾರರ ಪರದಾಟ

Team Udayavani, Dec 27, 2019, 10:40 AM IST

27-December-1

„ವಿಜಯಕುಮಾರ ಎಸ್‌. ಕಲ್ಲಾ
ಜೇವರ್ಗಿ:
ತಾಲೂಕಿನ ಕೋನಾಹಿಪ್ಪರಗಿ- ಸರಡಗಿ ನಡುವೆ ಭೀಮಾನದಿಗೆ ನಿರ್ಮಿಸಲಾಗಿರುವ 54 ಕೋಟಿ ರೂ. ವೆಚ್ಚದ ಸೇತುವೆ ಉಪಯೋಗಕ್ಕೆ ಇನ್ನೂ ಗ್ರಹಣ ಹಿಡಿದಂತಾಗಿದೆ. ತಾಲೂಕಿನ ಕೋಳಕೂರ ಜಿಪಂ ವ್ಯಾಪ್ತಿಯ ಕೂಡಿ, ಕೋಬಾಳ, ಬಣಮಿ, ಮಂದ್ರವಾಡ, ಕೋನಾಹಿಪ್ಪರಗಿ, ಹಂದನೂರ, ರಾಸಣಗಿ, ಗೌನಳ್ಳಿ, ಜನಿವಾರ, ಹರವಾಳ ಸೇರಿದಂತೆ ಹತ್ತಾರು ಗ್ರಾಮಗಳ ಜನರ ಬೇಡಿಕೆಯಾಗಿದ್ದ ಸೇತುವೆ ಕಳೆದ ಎರಡು ದಶಕಗಳ ಬಳಿಕ
ನಿರ್ಮಾಣವಾಗಿದೆ. ಆದರೆ ಸೇತುವೆಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದರಿಂದ ಈ ಭಾಗದ ಜನರಿಗೆ ಸೇತುವೆಯಿಂದ ಯಾವುದೇ ಪ್ರಯೋಜನವಿಲ್ಲದಂತಾಗಿದೆ.

ಕೆಆರ್‌ಡಿಸಿಎಲ್‌ ವತಿಯಿಂದ 54 ಕೋಟಿ ರೂ.ವೆಚ್ಚದಲ್ಲಿ ಸೇತುವೆ ನಿರ್ಮಿಸಲಾಗಿದೆ. ಕಡಿಮೆ ಸಮಯದಲ್ಲಿ ಕಲಬುರಗಿಗೆ ತೆರಳಲು ಅನುಕೂಲವಾಗಲಿದೆ. ಇದರ ಜತೆಗೆ 20 ಕಿಮೀ ಅಂತರ ಕಡಿಮೆಯಾಗಲಿದೆ ಎನ್ನುವ ಸದುದ್ದೇಶದಿಂದ ಸೇತುವೆ ನಿರ್ಮಾಣ ಮಾಡಲಾಗಿದೆ. ಆದರೆ ಕೂಡಿ ದರ್ಗಾದಿಂದ ಕೋನಾಹಿಪ್ಪರಗಿ ಸೇತುವೆವರೆಗೆ ತೆರಳುವ ಮೂರು ಕಿಮೀ ರಸ್ತೆ ತಗ್ಗುಗಳಿಂದ ಕೂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ರೇವನೂರ ಕ್ರಾಸ್‌ ದಿಂದ ಕೋನಾಹಿಪ್ಪರಗಿವರೆಗೆ ರಸ್ತೆ ಸಹ ತೀರಾ ಹದಗೆಟ್ಟು ಹೋಗಿದೆ, ಕನಿಷ್ಠ ತೇಪೆ ಹಾಕುವ ಕೆಲಸ ಮಾಡದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಬಹುತೇಕ ಕಡೆ ಡಾಂಬರ್‌ ಕಿತ್ತು ಹೋಗಿ ಜಲ್ಲಿ ಕಲ್ಲುಗಳು ಎದ್ದಿದೆ. ಇನ್ನು ಕೆಲವು ಕಡೆ ಬೃಹತ್‌ ಗಾತ್ರದ ಹೊಂಡಗಳು ರಸ್ತೆಯಲ್ಲಿ ಬಿದ್ದಿವೆ. ಒಂದು ಹೊಂಡ ತಪ್ಪಿಸಲು ಹೋದರೆ ಮತ್ತೊಂದು ಹೊಂಡಕ್ಕೆ ವಾಹನ ಇಳಿಯುತ್ತದೆ. ಇದರಿಂದ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ರೇವನೂರ ಕ್ರಾಸ್‌ ಬಳಿ ರಾಷ್ಟ್ರೀಯ ಹೆದ್ದಾರಿ-50ರಿಂದ ಸರಡಗಿ ಬಳಿ ಹೆದ್ದಾರಿಗೆ ಸಂಪರ್ಕ ಕಲ್ಪಿಸಿದರೆ ಮಾತ್ರ ಈ ಭಾಗದ ಜನರಿಗೆ ಇದರಿಂದ ಲಾಭ. ಕಲಬುರಗಿಯಿಂದ ವಿಜಯಪುರಕ್ಕೆ ಈ ಸೇತುವೆ ಮಾರ್ಗವಾಗಿ ಹೋದರೇ ಕನಿಷಷ್ಠ 15 ಕಿಮೀ ಅಂತರ ಕಡಿಮೆಯಾಗಲಿದೆ. ಸರಡಗಿ ಕ್ರಾಸ್‌ದಿಂದ ಸೇತುವೆ ವರೆಗೆ ರಸ್ತೆ ನಿರ್ಮಾಣ ಮಾಡಲಾಗಿದೆ. ಅದೇ ರೀತಿ ರೇವನೂರ ಕ್ರಾಸ್‌ ವರೆಗೆ ದ್ವಿಪಥದ ರಸ್ತೆ ನಿರ್ಮಾಣ ಮಾಡಬೇಕು ಎಂದು ಈ ಭಾಗದ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಈ ಬಗ್ಗೆ ಹಲವು ಬಾರಿ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. 15ಕ್ಕೂ ಹೆಚ್ಚು ಗ್ರಾಮಸ್ಥರಿಗೆ ಅನುಕೂಲವಾಗುವ ಈ ರಸ್ತೆ ಅಭಿವೃದ್ಧಿಗೆ ಶಾಸಕ ಡಾ| ಅಜಯಸಿಂಗ್‌ ಒತ್ತು ನೀಡುವರೆ ಕಾದು ನೋಡೋಣ.

ಟಾಪ್ ನ್ಯೂಸ್

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

Kalaburagi: ರೌಡಿ ಶೀಟರ್ ಬರ್ಬರ ಹತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.