ಶಾಲೆಗೆ ಡ್ರಾಪ್ ಕೊಡ್ತಿರಾ ಪ್ಲೀಸ್!
ಸಮಯಕ್ಕೆ ಸರಿಯಾಗಿ ಬಾರದ ಬಸ್•ಚನ್ನೂರ ಆದರ್ಶ ಶಾಲೆ ಮಕ್ಕಳ ಪರದಾಟ
Team Udayavani, Jul 29, 2019, 9:47 AM IST
ಜೇವರ್ಗಿ: ಬಸ್‌ಗಾಗಿ ಕಾಯುತ್ತಿರುವ ಆದರ್ಶ ಶಾಲೆ ವಿದ್ಯಾರ್ಥಿಗಳು
•ವಿಜಯಕುಮಾರ ಎಸ್. ಕಲ್ಲಾ
ಜೇವರ್ಗಿ: ಅಂಕಲ್, ಅಣ್ಣ, ಸರ್ ನಿಲ್ಸಿ..ನಿಲ್ಸಿ.. ಪ್ಲೀಸ್! ಶಾಲೆಗೆ ಟೈಂ ಆಗಿದೆ, ನಮಗೆ ಸ್ವಲ್ಪ ಡ್ರಾಪ್ ಕೊಡಿ! ಹೀಗೆಂದು ನಿತ್ಯ ಹೋಗೋ, ಬರೋ ಬೈಕ್ ಹಾಗೂ ಇನ್ನಿತರ ವಾಹನಗಳಿಗೆ ಕೈಯೊಡ್ಡುತ್ತಾರೆ ಚನ್ನೂರ ಬಳಿಯ ಆದರ್ಶ ವಿದ್ಯಾಲಯಕ್ಕೆ ಹೋಗುವ ವಿದ್ಯಾರ್ಥಿಗಳು.
ಪಟ್ಟಣದಿಂದ 4 ಕಿ.ಮೀ ದೂರದಲ್ಲಿ ಈ ಶಾಲೆಯಿದೆ. ನಿತ್ಯ ಶಾಲೆಗೆ ಹೋಗಲು ಮಕ್ಕಳು ಅನೇಕ ಕಸರತ್ತು ಮಾಡುತ್ತಾರೆ. ಈ ಆದರ್ಶ ಶಾಲೆಗೆ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಿಂದ ನೂರಾರು ವಿದ್ಯಾರ್ಥಿಗಳು ಆಗಮಿಸುತ್ತಾರೆ.
ಸಮಯಕ್ಕೆ ಸರಿಯಾಗಿ ಸಾರಿಗೆ ಬಸ್ ವ್ಯವಸ್ಥೆ ಇಲ್ಲದ ಕಾರಣ ಬೈಕ್, ಟಂಟಂ ಸೇರಿದಂತೆ ಇನ್ನಿತರ ವಾಹನ ಸವಾರರಿಗೆ ಕೈ ಮಾಡಿ ವಾಹನ ನಿಲ್ಲಿಸಿ, ಹತ್ತುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ವೇಳೆ ಏನಾದರೂ ಅಪಘಾತ ಸಂಭವಿಸಿದರೇ ಮಕ್ಕಳ ಉಜ್ವಲ ಭವಿಷ್ಯಕ್ಕೆ ಯಾರು ಹೊಣೆ ಎಂದು ಪ್ರಜ್ಞಾವಂತ ನಾಗರಿಕರು ಪ್ರಶ್ನಿಸುತ್ತಾರೆ.
ಪಟ್ಟಣದ ಬಸವೇಶ್ವರ ಸರ್ಕಲ್ ಬಳಿಯಿರುವ ನರಿಬೋಳ ರಸ್ತೆ ಮೇಲೆ ಈ ವಿದ್ಯಾರ್ಥಿಗಳ ಗೋಳು ನಿತ್ಯ ನೋಡುವಂತಾಗಿದೆ.
ಚನ್ನೂರ ಗ್ರಾಮದ ಹತ್ತಿರ ಲಕ್ಷಾಂತರ ರೂ. ಖರ್ಚು ಮಾಡಿ ಮೂರು ಮಹಡಿಯ ಸುಸಜ್ಜಿತವಾದ ಆದರ್ಶ ಶಾಲಾ ಕಟ್ಟಡ ನಿರ್ಮಾಣ ಮಾಡಲಾಗಿದೆ. 6ನೇ ತರಗತಿಯಿಂದ 10ನೇ ತರಗತಿ ವರೆಗೆ 400 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ. ನಿತ್ಯ ಶಾಲೆಗೆ ಹೋಗಿ ಬರಲು ವಿದ್ಯಾರ್ಥಿಗಳು ತೊಂದರೆಪಡುತ್ತಿದ್ದು, ಈ ಬಗ್ಗೆ ಕಳೆದ 2016ರ ನವೆಂಬರ್ 29 ರಂದು ಜೇವರ್ಗಿ ಬಸ್ ಘಟಕದಲ್ಲಿ ನಡೆದ ಸಾರಿಗೆ ಸ್ಪಂದನ ಕಾರ್ಯಕ್ರಮದಲ್ಲಿ ಬಸ್ ಸೌಕರ್ಯ ಕಲ್ಪಿಸುವಂತೆ ಮನವಿ ಮಾಡಲಾಗಿತ್ತು. ಮನವಿಗೆ ಸ್ಪಂದಿಸಿದ ಸಾರಿಗೆ ಇಲಾಖೆ ಅಧಿಕಾರಿಗಳು ಬೆಳಗ್ಗೆ 9 ಗಂಟೆಗೆ ಎರಡು, ಸಂಜೆ 4:30 ಗಂಟೆಗೆ ಎರಡು ಪ್ರತ್ಯೇಕ ಬಸ್ ವ್ಯವಸ್ಥೆ ಮಾಡಿದ್ದಾರೆ. ಆದರೆ ಬೆಳಗ್ಗೆ ಹೋಗುವ ಎರಡೂ ಬಸ್‌ಗಳು ಶಾಲಾ ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ.
ನರಿಬೋಳ, ಗುಡೂರ ಕಡೆ 4:15 ಗಂಟೆಗೆ ಬಸ್ ಹೋಗುವುದರಿಂದ ಆ ಗ್ರಾಮದ ವಿದ್ಯಾರ್ಥಿಗಳು ಸಂಜೆ 6 ಗಂಟೆ ವರೆಗೆ ಶಾಲಾ ಆವರಣದಲ್ಲಿ ಕಳೆಯುವಂತಹ ಪರಿಸ್ಥಿತಿ ಬಂದಿದೆ. ಕೆಲ ಶ್ರೀಮಂತ ವಿದ್ಯಾರ್ಥಿಗಳು ಆಟೋ, ಜೀಪ್‌ಗ್ಳಿಗೆ ಹಣ ಕೊಟ್ಟು ಹೋದರೇ, ಬಡ ವಿದ್ಯಾರ್ಥಿಗಳು ಮಾತ್ರ ತೊಂದರೆ ಅನುಭವಿಸುವಂತಾಗಿದೆ. ಆದ್ದರಿಂದ ಸಾರಿಗೆ ಅಧಿಕಾರಿಗಳು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡದೇ ನಿತ್ಯ ಬೆಳಗ್ಗೆ ಸಮಯಕ್ಕೆ ಸರಿಯಾಗಿ 9 ಗಂಟೆಗೆ ಎರಡು ಬಸ್ ಹಾಗೂ ಸಂಜೆ 4:30ರ ನಂತರ ಎರಡು ಬಸ್, ಇದರ ಜೊತೆಯಲ್ಲಿ ನರಿಬೋಳ, ಗುಡೂರ ಕಡೆ ತೆರಳುವ ಬಸ್ 4:15ರ ಬದಲು 4:30ಕ್ಕೆ ಬಿಡಲು ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೇ ಬಸ್ ಘಟಕದ ಮುಂದೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಸಂಘದ ತಾಲೂಕು ಅಧ್ಯಕ್ಷ ನಿಂಗಣ್ಣ ರದ್ದೇವಾಡಗಿ ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.