ಮಕ್ಕಳಿಗೆ ಇನ್ನೂ ವಿತರಣೆಯಾಗಿಲ್ಲ ಸೈಕಲ್
Team Udayavani, Aug 14, 2019, 10:11 AM IST
ಜೇವರ್ಗಿ: ಗ್ರಾಮೀಣ ಪ್ರದೇಶದ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿ ಎಂದು ಸರ್ಕಾರ ಪ್ರೌಢಶಾಲೆ ಎಂಟನೇ ತರಗತಿ ಮಕ್ಕಳಿಗೆ ಸೈಕಲ್ ವಿತರಿಸುವ ಯೋಜನೆ ಜಾರಿಗೊಳಿಸಿದೆ. ಆದರೆ ತಾಲೂಕಿನ ಶಾಲೆ ಆರಂಭವಾಗಿ 70 ದಿನಗಳಾದರೂ ಇಲ್ಲಿಯವರೆಗೂ ಮಕ್ಕಳಿಗೆ ಸೈಕಲ್ ವಿತರಣೆಯಾಗಿಲ್ಲ.
ಯಾವ ಉದ್ಧೇಶಕ್ಕೆ ಯೋಜನೆ ಜಾರಿಗೊಳಿಸುತ್ತಾರೋ ಅದು ಕ್ರಮಬದ್ಧವಾಗಿ, ಸಕಾಲಕ್ಕೆ ಫಲಾನುಭವಿಗಳಿಗೆ ಸಿಗದೆ ಸರ್ಕಾರದ ಬೊಕ್ಕಸಕ್ಕೆ ಹಣ ವ್ಯರ್ಥವಾಗುತ್ತಿದೆ. ಯೋಜನೆ ಜಾರಿಯಾದರೂ ಉದ್ಧೇಶ ಸಫಲವಾಗುವುದಿಲ್ಲ ಎನ್ನುವುದಕ್ಕೆ ಇದು ಸಾಕ್ಷಿಯಾಗಿದೆ. ಜೇವರ್ಗಿ ಪಟ್ಟಣದ ಸುತ್ತಮುತ್ತಲಿನ ಪ್ರೌಢಶಾಲೆಗಳಿಗೆ ಸೈಕಲ್ ವಿತರಿಸಲು ಸರಕಾರಿ ಕನ್ಯಾ ಪ್ರೌಢಶಾಲೆ ಆವರಣದಲ್ಲಿ ಅದರ ಬಿಡಿ ಭಾಗಗಳನ್ನು ಜೋಡಿಸುವ ಕಾರ್ಯ ಕಳೆದ ಒಂದು ವಾರದಿಂದ ನಡೆಯುತ್ತಿದೆ. ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಆಗದೇ ಇರುವುದು ಒಂದೆರೆಡು ಶಾಲೆಗಳ ಕಥೆಯಲ್ಲ. ಎಲ್ಲ ಶಾಲೆಗಳ ವ್ಯಥೆ.
ಜೇವರ್ಗಿ ತಾಲೂಕಿನಲ್ಲಿ 42 ಸರ್ಕಾರಿ ಪ್ರೌಢಶಾಲೆಗಳು, 9 ಅನುದಾನಿತ ಪ್ರೌಢಶಾಲೆಗಳು, ಆರ್‌ಎಂಎಸ್‌ಎ 4 ಸೇರಿದಂತೆ ಒಟ್ಟು 55 ಪ್ರೌಢಶಾಲೆಗಳಿವೆ. ಸೈಕಲ್ಗಳ ಬಿಡಿ ಭಾಗಗಳನ್ನು ಜೋಡಿಸುವ ಕೆಲಸ ಪೂರ್ಣಗೊಂಡು ತಾಲೂಕಿನ ಎಲ್ಲ ಶಾಲೆ ಮಕ್ಕಳಿಗೆ ಆಗಸ್ಟ್ ಮಾಸಾಂತ್ಯದೊಳಗೆ ಸೈಕಲ್ ವಿತರಣೆ ಮಾಡಬಹುದು ಎಂದು ಅಂದಾಜಿಸಲಾಗಿದೆ. ಮಕ್ಕಳಿಗೆ ಸೈಕಲ್ ಕೊಡಲು ಏಕೆ ತಡವಾಯಿತು ಎಂದು ಗುತ್ತಿಗೆದಾರನನ್ನು ಕೇಳಿದರೆ, ಸರ್ಕಾರ ಟೆಂಡರ್ ಕರೆಯುವುದು ತಡವಾಯಿತು ಎಂದು ಉತ್ತರಿಸುತ್ತಾರೆ.
ಶಾಲೆ ಪ್ರಾರಂಭವಾದ ಕೂಡಲೇ ಪಠ್ಯಪುಸ್ತಕ, ಸಮವಸ್ತ್ರ, ಸೈಕಲ್ ನೀಡುವ ವ್ಯವಸ್ಥೆಯಾಗಬೇಕು ಎಂದು ಪೋಷಕರು ಸರ್ಕಾರ ಮತ್ತು ಶಿಕ್ಷಣ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.