ಜೇವರ್ಗಿ ಪುರಸಭೆ: 10 ತಿಂಗಳಾದರೂ ಸಿಕ್ಕಿಲ್ಲ ಅಧಿಕಾರ
ಚಾತಕ ಪಕ್ಷಿಯಂತೆ ಕಾಯುತ್ತಿರುವ ಸದಸ್ಯರು ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಗೆ ಗ್ರಹಣ
Team Udayavani, Jun 29, 2019, 10:02 AM IST
ಜೇವರ್ಗಿ: ಪುರಸಭೆ ಕಚೇರಿ
ವಿಜಯಕುಮಾರ ಎಸ್. ಕಲ್ಲಾ
ಜೇವರ್ಗಿ: ಸ್ಥಳಿಯ ಪುರಸಭೆ ಚುನಾವಣೆ ಮುಗಿದು 10 ತಿಂಗಳಾದರೂ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಇಲ್ಲದೇ ಸಾರ್ವಜನಿಕ ಕೆಲಸ, ಅಭಿವೃದ್ಧಿ ಕಾರ್ಯಗಳ ಮೇಲೆ ಕೆಟ್ಟ ಪರಿಣಾಮ ಬೀರಿದೆ.
ಮುಖ್ಯಾಧಿಕಾರಿಗಳ ವರ್ಗಾವಣೆ, ಸಿಬ್ಬಂದಿ ಮಂದಗತಿ ಕಾರ್ಯದಿಂದಾಗಿ ಸಾರ್ವಜನಿಕರು ನಿತ್ಯ ಪರದಾಡುವಂತಾಗಿದೆ. ಜೇವರ್ಗಿ ಪುರಸಭೆಗೆ 2018ರ ಆಗಸ್ಟ್ ತಿಂಗಳಲ್ಲಿ ಚುನಾವಣೆ ನಡೆದು ಸೆ. 3ರಂದು ಫಲಿತಾಂಶ ಬಂದಿತ್ತು. ಆದರೂ ಇಲ್ಲಿಯವರೆಗೂ ಚುನಾಯಿತ ಸದಸ್ಯರಿಗೆ ಅಧಿಕಾರ ಭಾಗ್ಯ ಸಿಕ್ಕಿಲ್ಲ. ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಪ್ರಶ್ನಿಸಿ ಕೆಲವರು ಕೋರ್ಟ್ ಮೆಟ್ಟಿಲೇರಿದ್ದಾರೆ. ಇದರಿಂದ ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆ ಕೂಡ ಸ್ಥಗಿತಗೊಂಡಿದೆ. ಮುಂದೆ ಸರ್ಕಾರದಿಂದ ಮೀಸಲಾತಿ ಮರು ಪ್ರಕಟಣೆ, ಮತ್ತೇ ಮರು ಪ್ರಕಟಣೆಗೆ ನ್ಯಾಯಾಲಯ ತಡೆಯಾಜ್ಞೆ ನೀಡಿತ್ತು. ಇದರ ಜತೆಗೆ ಲೋಕಸಭಾ ಚುನಾವಣೆ ನೀತಿ ಸಂಹಿತೆ ಸೇರಿದಂತೆ ಹಲವು ಕಾರಣಗಳಿಂದಾಗಿ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಪ್ರಕಟವಾಗಿರಲಿಲ್ಲ. ಇವೆಲ್ಲ ಕಾರಣದಿಂದ ಪುರಸಭೆ ಅಧಿಕಾರ ಚುಕ್ಕಾಣಿಗಾಗಿ ಚುನಾಯಿತ ಸದಸ್ಯರು 10 ತಿಂಗಳಿನಿಂದ ಚಾತಕ ಪಕ್ಷಿಯಂತೆ ಕಾಯುವಂತಾಗಿದೆ.
ನಗರ, ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಗೆ ಅಡ್ಡಿಯಾದ ತಡೆಯಾಜ್ಞೆ ತೆರವಾಗಬೇಕು. ಈ ಎಲ್ಲ ಪ್ರಕ್ರಿಯೆ ಮುಗಿಯಬೇಕು ಎಂದರೂ ಕನಿಷ್ಠ ಎರಡರಿಂದ ಮೂರು ತಿಂಗಳಾದರೂ ಬೇಕಾಗುತ್ತದೆ. ಇದರಿಂದ ರಾಜ್ಯದ ಸ್ಥಳೀಯ ಸಂಸ್ಥೆಗಳಿಗೆ ಹಿಡಿದಿರುವ ಗ್ರಹಣ ಸದ್ಯಕ್ಕೆ ಬಿಡುವ ಲಕ್ಷಣಗಳು ಕಾಣುತ್ತಿಲ್ಲ.
ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಗೆ ಕೋರ್ಟ್ ತಡೆಯಾಜ್ಞೆ ನೀಡಿದ ಪರಿಣಾಮ ನಾವು ಅಧಿಕೃತ ಅಧಿಕಾರ ಹೊಂದದೇ ಇರುವುದರಿಂದ ವಾರ್ಡ್‌ನ ಸಾರ್ವಜನಿಕರಿಗೆ ಪೂರ್ಣ ಪ್ರಮಾಣದ ಸೇವೆ ಒದಗಿಸಲು ಸಾಧ್ಯವಾಗುತ್ತಿಲ್ಲ. ಕೆಲವು ಸಂದರ್ಭಗಳಲ್ಲಿ ಮತ ನೀಡಿದ ಮತದಾರರಿಂದಲೇ ಟೀಕೆಗೊಳಗಾಗುವ ಮುಜುಗರ ಪ್ರಸಂಗಗಳು ಅನುಭವಿಸಬೇಕಾಗಿದೆ. ತಡೆಯಾಜ್ಞೆ ತೆರವಾಗಿ ಶೀಘ್ರ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ನಡೆದು ಅಧಿಕೃತ ಸದಸ್ಯರಾಗಿ ಪುರಸಭೆ ಪ್ರವೇಶಿಸಲು ಕಾಯುತ್ತಿದ್ದೇವೆ ಎನ್ನುತ್ತಾರೆ ಚುನಾಯಿತ ಸದಸ್ಯರಾದ ಸಂಗನಗೌಡ ರದ್ಧೇವಾಡಗಿ, ಶಿವಬಾಯಿ ಕೊಂಬಿನ್, ಶಾಹೀನ್‌ಬೇಗಂ ಅಬ್ದುಲ್ ಖಯೂಮ್.
ಕಳೆದ ಕೆಲವು ತಿಂಗಳುಗಳಿಂದ ಪುರಸಭೆಯಲ್ಲಿ ಸಿಬ್ಬಂದಿ ಸರಿಯಾಗಿ ಕರ್ತವ್ಯ ನಿರ್ವಹಿಸದೇ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಸ್ವಚ್ಛತೆ ಮರೀಚಿಕೆಯಾಗಿದೆ. ಕುಡಿಯುವ ನೀರಿಗಾಗಿ ಜನರು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ಚುನಾಯಿತ ಸದಸ್ಯರು ನಮ್ಮ ಪಾಲಿಗೆ ಇದ್ದೂ ಇಲ್ಲದಂತಾಗಿದ್ದಾರೆ. ನಮ್ಮ ಸಮಸ್ಯೆ ಕೇಳುವರೇ ಇಲ್ಲದಂತಾಗಿದೆ.
•ದೇವಿಂದ್ರ ಬನ್ನೆಟ್ಟಿ,
ಖಾಜಾ ಕಾಲೋನಿ ನಿವಾಸಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ICC U19 ವನಿತಾ ಟಿ20 ವಿಶ್ವಕಪ್: ಭಾರತಕ್ಕೆ ನಿಕಿ ಪ್ರಸಾದ್ ನಾಯಕಿ
Maharashtra: ಬಾಸ್ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.