ಕುಡುಕರ ತಾಣವಾದ ಬೈಪಾಸ್ ರಸ್ತೆ
ಜೇವರ್ಗಿ: ಡಾಬಾಗಳಲ್ಲಿ ಕದ್ದು ಮುಚ್ಚಿ ಮದ್ಯ ವ್ಯಾಪಾರ
Team Udayavani, Apr 14, 2019, 11:00 AM IST
ಜೇವರ್ಗಿ: ಮದ್ಯದ ಅಂಗಡಿಗಳಲ್ಲಿ ಮದ್ಯಪಾನ ಮಾಡಬಾರದು ಎನ್ನುವ ಆದೇಶವನ್ನು ಚುನಾವಣೆ ಸಂದರ್ಭದಲ್ಲಿ ಅಬಕಾರಿ ಇಲಾಖೆ ಕಟ್ಟುನಿಟ್ಟಾಗಿ
ಜಾರಿ ಮಾಡುತ್ತಿದೆ. ಹೀಗಾಗಿ ಮದ್ಯಪ್ರಿಯರು ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲೆಂದರಲ್ಲಿ ಮದ್ಯಪಾನ ಮಾಡುತ್ತಿದ್ದಾರೆ. ಇದು ಸಾರ್ವಜನಿಕರು, ಮಹಿಳೆಯರಿಗೆ ಕಿರಿಕಿರಿ ಉಂಟುಮಾಡುತ್ತಿದೆ.
ಪಟ್ಟಣದಲ್ಲಿ ಇರುವ ಮದ್ಯದ ಅಂಗಡಿಗಳ ಪೈಕಿ ಸಿಎಲ್ ಒಂಭತ್ತು ಪರವಾನಗಿ ಹೊಂದಿರುವ ನಾಲ್ಕು ಸಿಎಲ್, ಏಳು ಪರವಾನಗಿ ಪಡೆದಿರುವ ಎರಡು ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳಿವೆ. ಇಲ್ಲಿ ಮಾತ್ರ ಕುಳಿತು ಮದ್ಯಪಾನ ಮಾಡಲು ಅವಕಾಶವಿದೆ. ಉಳಿದ ಅಂದರೆ ಸಿಎಲ್ ಎರಡು ಪರವಾನಿಗೆ ಪಡೆದಿರುವ ಅಂಗಡಿಗಳಲ್ಲಿ ಮದ್ಯಪಾನ ಮಾಡಲು ಅವಕಾಶವಿಲ್ಲ. ಚುನಾವಣೆ ಸಂದರ್ಭದಲ್ಲಿ ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲಾಗುತ್ತದೆ. ಹೀಗಾಗಿ ಮದ್ಯ ಖರೀದಿಸಿದವರು ಅಕ್ಕಪಕ್ಕದ ಸಾರ್ವಜನಿಕ ಸ್ಥಳದ ಸಂದುಗೊಂದುಗಳನ್ನು ಹುಡುಕುತ್ತಾರೆ. ಜನಸಂಚಾರ ಕಡಿಮೆ ಇರುವ ಅಥವಾ ಸಂದಿಗೊಂದಿಗಳಲ್ಲಿ ಕುಳಿತು ಮದ್ಯಪಾನ ಮಾಡುತ್ತಾರೆ. ಕೆಲವೊಮ್ಮೆ ರಸ್ತೆ ಪಕ್ಕದಲ್ಲೇ ಮದ್ಯಪಾನ ಮಾಡುತ್ತಿರುವ ದೃಶ್ಯಗಳು ಕಂಡುಬರುತ್ತವೆ.
ಕೆಲವರು ಪಟ್ಟಣದ ಹೊರ ಪ್ರದೇಶಗಳಲ್ಲಿರುವ ಜಮೀನುಗಳಲ್ಲಿ, ಅದರಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ವಿಜಯಪುರ-ಕಲಬುರಗಿ ಬೈಪಾಸ್‌ಗೆ ತೆರಳಿ ಮದ್ಯಪಾನ ಮಾಡುತ್ತಿದ್ದಾರೆ. ಬೈಪಾಸ್ ರಸ್ತೆಯುದ್ದಕ್ಕೂ ಎಲ್ಲಿ ನೋಡಿದರಲ್ಲೂ ಮದ್ಯದ
ಬಾಟಲ್‌ಗಳು ಕಾಣಸಿಗುತ್ತವೆ. ಸಂಜೆಯಾಗುವುದೇ ತಡ ಬೈಕ್, ಕಾರುಗಳಲ್ಲಿ ಮದ್ಯದ ಬಾಟಲ್ ಗಳೊಂದಿಗೆ ತೆರಳಿ ಕುಡಿದು ರಸ್ತೆ ಮೇಲೆ ಬಾಟಲ್ ಒಡೆದು ಹಾಕಲಾಗುತ್ತಿದೆ.
ಒಟ್ಟಾರೆಯಾಗಿ ಬೈಪಾಸ್ ರಸ್ತೆ ಕುಡುಕರ ತಾಣವಾಗಿ ಮಾರ್ಪಟ್ಟಿದೆ. ಇದರಿಂದ ಸಂಜೆ ವಾಯು ವಿಹಾರಕ್ಕೆ ಹೋಗುವವರು ತೀವ್ರ ಕಿರಿಕಿರಿ ಅನುಭವಿಸುತ್ತಿದ್ದಾರೆ. ಮಹಿಳೆಯರು ಸಂಜೆ ಸಮಯದಲ್ಲಿ ಅಡ್ಡಾಡಲು ಹಿಂಜರಿಯುತ್ತಿದ್ದಾರೆ. ರಸ್ತೆ ಪಕ್ಕದಲ್ಲಿ ಮತ್ತು ಜಮೀನುಗಳ ಅಂಚಿನಲ್ಲಿ ಮದ್ಯದ ಬಾಟಲ್‌ಗಳು ಕಂಡುಬರುತ್ತದೆ. ಚುನಾವಣೆ ಇರುವುದರಿಂದ ಮದ್ಯದಂಗಡಿಗಳ ಮುಂದೆ ನಿಂತುಕೊಂಡು ಮದ್ಯ ಸೇವನೆ ಮಾಡಬೇಡಿ. ಅಬಕಾರಿ ಇಲಾಖೆ ಅ ಧಿಕಾರಿಗಳು ಬಂದು ಬೈಯುತ್ತಾರೆ. ಹೀಗಾಗಿ ಬೇರೆಡೆ ಕೊಂಡೊಯ್ಯಿರಿ ಎಂದು ಮದ್ಯದಂಗಡಿ ಮಾಲೀಕರು ಹೇಳುತ್ತಾರೆ.
ಇದರಿಂದ ಕೆಲವು ಗ್ರಾಹಕರು ಅಂಗಡಿ ಮಾಲೀಕರ ಜತೆ ವಾಗ್ವಾದಕ್ಕೂ ಇಳಿಯುತ್ತಿದ್ದಾರೆ. ಕದ್ದುಮುಚ್ಚಿ ವ್ಯಾಪಾರ: ಪಟ್ಟಣದ ಕೆಲವು ಮಾಂಸಹಾರಿ ಹೋಟೆಲ್, ಡಾಬಾಗಳಲ್ಲಿ ಕದ್ದುಮುಚ್ಚಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಇಲ್ಲಿ ಹೆಚ್ಚಿನ ಬೆಲೆಗೆ ಮದ್ಯ ಮಾರಾಟ ಮಾಡಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಪ್ರಜ್ಞಾವಂತ ನಾಗರಿಕರು ಆಗ್ರಹಿಸಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲೂ ಮದ್ಯ ಸೇವನೆಗೆ ಕಡಿವಾಣ ಹಾಕಬೇಕು. ಅಬಕಾರಿ ಹಾಗೂ ಪೊಲೀಸ್ ಇಲಾಖೆ ಅ ಧಿಕಾರಿಗಳು ಗಸ್ತು ನಡೆಸಿ ಈ ಕುರಿತು ನಿಗಾ ಇಡಬೇಕು ಎನ್ನುವುದು ಸಾರ್ವಜನಿಕರ ಬೇಡಿಕೆಯಾಗಿದೆ. ಜೇವರ್ಗಿ: ಪಟ್ಟಣದ ವಿಜಯಪುರ- ಕಲಬುರಗಿ ಬೈಪಾಸ್ ರಸ್ತೆ ಅಕ್ಕ ಪಕ್ಕದಲ್ಲಿ ಬಿದ್ದಿರುವ ಮದ್ಯದ ಬಾಟಲ್‌ಗಳು.
ವಿಜಯಕುಮಾರ ಎಸ್.ಕಲಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.