ಬೀರೂರು ಪುರಸಭೆ ಅತಂರ
ಬಿಜೆಪಿ 10- ಕಾಂಗ್ರೆಸ್ 9- ಜೆಡಿಎಸ್‌ಗೆ 22 ಸ್ಥಾನಗಳಲ್ಲಿ ಪಕ್ಷೇತರರ ಗೆಲುವು
Team Udayavani, Nov 15, 2019, 4:54 PM IST
ಕಡೂರು: ಬೀರೂರು ಪುರಸಭೆ ಚುನಾವಣೆ ಮತ ಎಣಿಕೆ ಗುರುವಾರ ನಡೆದಿದ್ದು, ಈ ಬಾರಿಯೂ ಮತದಾರರು ಅತಂತ್ರ ಪುರಸಭೆಗೆ ಆಶೀರ್ವಾದ ಮಾಡಿದ್ದಾರೆ. ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು ಯಥಾಸ್ಥಿತಿ ಕಾಪಾಡಿಕೊಂಡಿರುವುದು ವಿಶೇಷವಾಗಿದೆ.
ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿ ಅಧಿಕಾರಕ್ಕೆ ಬರಲು ಇನ್ನೂ 2 ಸ್ಥಾನಗಳ ಅವಶ್ಯಕತೆ ಇದೆ. ಕಾಂಗ್ರೆಸ್‌ಗೆ ಮೂರು ಸ್ಥಾನಗಳ ಅಗತ್ಯವಿದೆ. ಒಟ್ಟು 23 ವಾರ್ಡ್‌ಗಳಲ್ಲಿ ಬಿಜೆಪಿ 10 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದರೆ, ಕಾಂಗ್ರೆಸ್ 9 ಸ್ಥಾನ, ಜೆಡಿಎಸ್ 2 ಸ್ಥಾನ ಹಾಗೂ ಪಕ್ಷೇತರರು 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಕಳೆದ ಬಾರಿಗೆ ಹೋಲಿಸಿದರೆ ಬಿಜೆಪಿ ಮತ್ತು ಕಾಂಗ್ರೆಸ್ ಸ್ಥಾನ ಗಳಿಕೆತಿರುವು ಮುರುವು ಆಗಿರುವುದಷ್ಟೇ ಸಾಧನೆ ಎನ್ನಲಾಗುತ್ತಿದೆ.
ಕಳೆದ ಬಾರಿ ಬಿಜೆಪಿ 9 ಸ್ಥಾನಗಳಲ್ಲಿ ಕಾಂಗ್ರೆಸ್ 10 ಸ್ಥಾನದಲ್ಲಿ, ಜೆಡಿಎಸ್ 2 ಸ್ಥಾನದಲ್ಲಿ ಹಾಗೂ ಓರ್ವ ಪಕ್ಷೇತರ ಮತ್ತು ಓರ್ವ ಕೆಜೆಪಿ ಸದಸ್ಯರು ಪುರಸಭೆಗೆ ಪ್ರವೇಶ ಪಡೆದಿದ್ದರು. ಈ ಬಾರಿ
ಬಿಜೆಪಿ 10 ಸ್ಥಾನ ಗಳಿಸಿ ಅತೀ ಹೆಚ್ಚಿನ ಸ್ಥಾನ ಪಡೆದ ಪಕ್ಷವಾಗಿ ಹೊರಹೊಮ್ಮಿದೆ. ಕಾಂಗ್ರೆಸ್ 9 ಸ್ಥಾನ ಪಡೆದು ದ್ವಿತೀಯ ಸ್ಥಾನದಲ್ಲಿದೆ. ಜೆಡಿಎಸ್ ಕಳೆದ ಬಾರಿಯ ಹಾಗೆಯೇ 2 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಎಲ್ಲ 23 ವಾರ್ಡ್‌ಗಳಲ್ಲೂ ತನ್ನಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದ ಬಿಜೆಪಿ, ಒಟ್ಟಾರೆ 5,867 ಮತಗಳನ್ನು ಗಳಿಸುವ ಮೂಲಕ ಅತೀ ಹೆಚ್ಚು ಮತ ಪಡೆದ ಪಕ್ಷವಾಗಿದೆ.
21ವಾರ್ಡ್ ಗಳಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ 4,856 ಮತ ಗಳಿಸಿ ಎರಡನೇ ಸ್ಥಾನದಲ್ಲಿದ್ದರೆ, ಜೆಡಿಎಸ್ 13 ವಾರ್ಡ್‌ಗಳಲ್ಲಿ ಅಭ್ಯರ್ಥಿಗಳನ್ನು ನಿಲ್ಲಿಸಿ 1,493 ಮತ ಗಳಿಸಿ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. 1ನೇ ವಾರ್ಡ್‌ನ ಬಿಜೆಪಿಯ ಎಂ.ಪಿ.ಸುದರ್ಶನ್ ಹಾಗೂ 4ನೇ
ವಾರ್ಡ್ ನ ಕಾಂಗ್ರೆಸ್ ಪಕ್ಷದ ಲೋಕೇಶಪ್ಪ, 8ನೇ ವಾರ್ಡ್‌ನ ಶಶಿಧರ್ ಮತ್ತು 22ನೇ ವಾರ್ಡ್‌ನ ರವಿಕುಮಾರ್(ಎಲೆ)ಅವರು ಮರು ಆಯ್ಕೆಯಾದ ಸದಸ್ಯರಾಗಿದ್ದಾರೆ.
ಮತ ಎಣಿಕೆ ನಡೆದ ಕಡೂರು ತಾಲೂಕು ಕಚೇರಿ ಸುತ್ತಮುತ್ತ ಬಿಗಿ ಪೊಲೀಸ್ ಪಹರೆ ಹಾಕಲಾಗಿತ್ತು. ಬೆಳಗ್ಗೆ 8 ಗಂಟೆಗೆ ಆರಂಭವಾಗಬೇಕಾಗಿದ್ದ ಮತ ಎಣಿಕೆ ಕಾರ್ಯ ಪೂರ್ವ ಸಿದ್ಧತೆ ಕೊರತೆಯಿಂದ 8.45ಕ್ಕೆ ಆರಂಭವಾಯಿತು. ಆದರೂ, 9.45ರ ವೇಳೆಗೆ 22 ವಾರ್ಡ್‌ಗಳ ಎಣಿಕೆ ಕಾರ್ಯ ನಡೆದು ಫಲಿತಾಂಶ ಪ್ರಕಟಿಸುವಲ್ಲಿ ಚುನಾವಣಾ ಶಾಖೆ ಯಶಸ್ವಿಯಾಯಿತು. ವಿಜೇತ ಅಭ್ಯರ್ಥಿಗಳನ್ನು ಅವರ ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರು ಎಣಿಕಾ ಕೇಂದ್ರದ ಮುಂದೆ ಶಿಳ್ಳೆ ಹಾಕುತ್ತಾ, ಹೆಗಲ ಮೇಲೆ ಹೊತ್ತುಕೊಂಡು ಕುಣಿಯುತ್ತಾ ಸಂಭ್ರಮಿಸುತ್ತಿದ್ದ ದೃಶ್ಯ ಕಂಡು ಬಂತು. ಅನೇಕ ಹೊಸಬರು ಮೊದಲ ಬಾರಿಗೆ ಪುರಸಭೆಗೆ ಪ್ರವೇಶ ಪಡೆದಿದ್ದು, ಅವರ ಗೆಳೆಯರು ಹಾಗೂ ಪಕ್ಷದ ಕಾರ್ಯಕರ್ತರು ಉತ್ಸಾಹದಿಂದ ಸಿಹಿ ಹಂಚಿ ಸಂತಸಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.