ಧರ್ಮಸ್ಥಳ ಸಂಸ್ಥೆಗೆ 15 ಕೋಟಿ ರೂ. ಉಳಿತಾಯ

•ಕೃಷಿಕರಿಗಾಗಿ ಪ್ರಗತಿ ಬಂಧು ಸ್ಥಾಪನೆ •ವೃದ್ಧರಿಗಾಗಿ ಸರ್ವ ಸೇವಾ ಸಂಘ ಆರಂಭ: ಪ್ರಕಾಶ್‌ರಾವ್‌

Team Udayavani, Jun 24, 2019, 11:52 AM IST

24-June-15

ಕಡೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆಯ ಜಿಲ್ಲಾ ನಿರ್ದೇಶಕ ಪ್ರಕಾಶ್‌ರಾವ್‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಕಡೂರು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಕಡೂರು ತಾಲೂಕಿನಲ್ಲಿ ಆರಂಭವಾಗಿ 12 ವರ್ಷ ಕಳೆದಿದ್ದು, ಒಟ್ಟು ಉಳಿತಾಯ 15.07 ಕೋಟಿ ರೂ. ಆಗಿರುತ್ತದೆ ಎಂದು ಶ್ರೀ ಕ್ಷೇತ್ರದ ಜಿಲ್ಲಾ ನಿರ್ದೇಶಕ ಪ್ರಕಾಶ್‌ರಾವ್‌ ತಿಳಿಸಿದರು.

ಭಾನುವಾರ ಕಡೂರು ಕಚೇರಿಯಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೃಷಿಕರಿಗಾಗಿ ಪ್ರಗತಿ ಬಂಧು ಸ್ಥಾಪಿಸಲಾಗಿದ್ದು, 860 ಸಂಘಗಳು ತಾಲ್ಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿವೆ. ಮಹಿಳೆಯರ ಸ್ವಸಹಾಯ ಸಂಘಗಳು 2158 ಸಂಘಗಳು ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದರು.

ಯುವಕರಿಗಾಗಿ ಜೆಎಲ್ಜಿ 150 ಸಂಘಗಳು ಕಾರ್ಯನಿರ್ವಹಿಸುತ್ತಿವೆ. ವೃದ್ಧರಿಗಾಗಿ ಸರ್ವಸೇವಾ ಸಂಘಗಳನ್ನು ಆರಂಭಿಸಲಾಗಿದೆ. ತಾಲೂಕಿನಾದ್ಯಂತ 25 ಸಂಘಗಳಿದ್ದು, ಒಟ್ಟು 3193 ಸಂಘಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ 27,569 ಸದಸ್ಯರನ್ನು ಹೊಂದಿದ್ದು, 359 ಹೊಸ ಸಂಘಗಳನ್ನು ರಚಿಸಲಾಗಿದೆ. ಇವುಗಳಲ್ಲಿ 3136 ಸಂಘಗಳು ಎಬಿ ಗ್ರೇಡ್‌ನ‌ಲ್ಲಿದ್ದು, 57 ಸಂಘಗಳು ಸಿಡಿ ಗ್ರೇಡ್‌ನ‌ಲ್ಲಿವೆ. ಬ್ಯಾಂಕಿನಲ್ಲಿ 3167 ಸಂಘಗಳು ಖಾತೆ ತೆರೆದಿವೆ. ಆರ್ಥಿಕ ನೆರವನ್ನು 3059 ಸಂಘಗಳು ಪಡೆದಿದ್ದು, ಯೋಜನೆಯ ವತಿಯಿಂದ 69 ಗ್ರಾಹಕರ ಸೇವಾ ಕೇಂದ್ರಗಳನ್ನು ತೆರಯಲಾಗಿದೆ ಎಂದರು.

ಕಳೆದ ಸಾಲಿನಲ್ಲಿ ಪ್ರಗತಿ ನಿಧಿ ಕಾರ್ಯಕ್ರಮದಲ್ಲಿ ಸದಸ್ಯರಿಗೆ 73.72 ಕೋಟಿ ರೂ. ಸಾಲ ವಿತರಿಸಲಾಗಿದೆ. ಇದರಲ್ಲಿ ಯೋಜನೆಗೆ 84.76 ಕೋಟಿ ರೂ. ಹೊರ ಬಾಕಿ ಬರಬೇಕಿದೆ. ಜನ್‌ಧನ್‌ ಖಾತೆಯನ್ನು 16,422 ಸದಸ್ಯರು ತೆರೆದಿದ್ದು. ನಿವೃತ್ತಿ ವೇತನಕ್ಕಾಗಿ 2798 ಸದಸ್ಯರು ನೋಂದಾಯಿಸಿಕೊಂಡಿದ್ದಾರೆ. ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಯಲ್ಲಿ 912 ಜನ ಸದಸ್ಯರು ಸೇರ್ಪಡೆಗೊಂಡಿದ್ದಾರೆ. ಸಂಪೂರ್ಣ ಸುರಕ್ಷಾ ಯೋಜನೆ ನೋಂದಣಿ ಕುಟುಂಬದಲ್ಲಿ 1866 ಸದಸ್ಯರು ನೋಂದಾಯಿಸಿಕೊಂಡಿದ್ದಾರೆ. ಇವರುಗಳಿಂದ ಸಂಗ್ರಹಿಸಿದ ಒಟ್ಟಾರೆ ಮೊತ್ತ 31,96,500 ಆಗಿರುತ್ತದೆ ಎಂದರು.

ಸುರಕ್ಷಾ ಯೋಜನೆಯಲ್ಲಿ ಮರಣ ಸಾಂತ್ವನದ ಮೊತ್ತ 20.33 ಲಕ್ಷ ರೂ.ಗಳನ್ನು ವಿತರಿಸಲಾಗಿದೆ. ಆರೋಗ್ಯ ಸೌಲಭ್ಯದಲ್ಲಿ 220,82 ಲಕ್ಷ ರೂ.ಗಳನ್ನು ಸದಸ್ಯರಿಗೆ ನೀಡಲಾಗಿದೆ. ಜೀವ ಭದ್ರತೆ ವಿಮೆ ಮಾಡಿಸಿರುವ ಸದಸ್ಯರು 41,922 ಇದರಲ್ಲಿ ಸದಸ್ಯರಿಗೆ ವಿಮೆ ನೀಡಿರುವ ಮೊತ್ತ 109,26 ಲಕ್ಷ. ಇದರಲ್ಲಿ 202ಜನ ಸದಸ್ಯರು ಫಲಾನುಭವಿಗಳಾಗಿರುತ್ತಾರೆ ಎಂದರು.

ಕೃಷಿ ಕಾರ್ಯಕ್ರಮದ ಅನುಷ್ಟಾನದಲ್ಲಿ ರೈತ ಕ್ಷೇತ್ರ ಪಾಠ ಶಾಲೆ, ಕೃಷಿ ಪ್ರಾತ್ಯಕ್ಷಿಕೆ 49 ಕಡೆಗಳಲ್ಲಿ ನಡೆಸಲಾಗಿದ್ದು, ಇದರಲ್ಲಿ 9,133 ಜನ ಫಲಾನುಭವಿಗಳು ಭಾಗವಹಿಸಿದ್ದರು. 4,67 ಲಕ್ಷ ರೂ.ಗಳ ಸಸಿಗಳನ್ನು ವಿತರಿಸಲಾಗಿದೆ. ಕೃಷಿಗೆ ಪೂರಕವಾದ ಯಂತ್ರೋಪಕರಣಗಳನ್ನು 174 ಫಲಾನುಭವಿಗಳಿಗೆ 3,15 ಲಕ್ಷ ರೂ. ವೆಚ್ಚದಲ್ಲಿ ವಿತರಿಸಲಾಗಿದೆ. ಕೋಳಿ ಫಾರಂ, ಆಡು, ಹಂದಿ ಸಾಕಾಣಿಕೆ ಸೋಲಾರ್‌ ಅಳವಡಿಸಲು 136 ಫಲಾನುವಿಗಳಿಗೆ 2.59 ಲಕ್ಷ ರೂ.ಗಳನ್ನು ನೀಡಲಾಗುತ್ತಿದೆ. 125 ಕೃಷಿ ಅಧ್ಯಯನ ಪ್ರವಾಸ ಕೈಗೊಂಡು ಇದರಲ್ಲಿ 4,303 ಜನ ಫಲಾನುಭವಿಗಳು ಅನುಭವ ಪಡೆದಿರುತ್ತಾರೆ ಎಂದು ತಿಳಿಸಿದರು.

ತಾಲೂಕಿನಲ್ಲಿ 2 ಕೃಷಿ ಉತ್ಸವಗಳನ್ನು ಮಾಡಲಾಗಿದ್ದು, ಕೃಷಿ ವಿಚಾರ ಸಂಕಿರಣ 65 ಕಡೆಗಳಲ್ಲಿ ಮಾಡಲಾಗಿದೆ. ಸ್ವಾಸ್ಥ ್ಯ ಸಂಕಲ್ಪ ಕಾರ್ಯಕ್ರಮ, ನವಜೀವನ ಸಮಿತಿ, ಜನಜಾಗೃತಿ ಸಮಾವೇಶ, ಬೀದಿ ನಾಟಕ, ಶತದಿನೋತ್ಸವ ಹಾಗೂ ಸತ್ಯನಾರಾಯಣ, ವರಮಹಾಲಕ್ಷಿ ್ಮೕ ಪೂಜಾ ಕಾರ್ಯಕ್ರಮಗಳನ್ನು 29 ಗ್ರಾಮಗಳಲ್ಲಿ ಈಗಾಗಲೇ ಮಾಡಲಾಗಿದೆ ಹಾಗೂ ಜ್ಞಾನ ವಿಕಾಸ, ಸ್ವಸಹಾಯ ಸಂಘಗಳ ಸಬಲೀಕರಣ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.

ಸಮುದಾಯದ ಅಭಿವೃದ್ಧಿಗಾಗಿ ಸಮುದಾಯ ಭವನ, ಹಾಲು ಉತ್ಪಾದಕರ ಸಂಘ, ದೇವಾಲಯಗಳ ಅಭಿವೃದ್ಧಿಗೆ ಸುಜ್ಞಾನ ನಿಧಿ, ಶಿಷ್ಯ ವೇತನ, ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮಗಳಿಗೆ ಅನುದಾನ ನೀಡಲಾಗಿದೆ ಎಂದು ತಿಳಿಸಿದರು.

ಪರಿಸರ ಕಾರ್ಯಕ್ರಮಗಳಾದ ಪರಿಸರ ಮಾಹಿತಿ, ನಾಗರಿಕರ ಪ್ರಜ್ಞೆ, ಮನೆ ರಿಪೇರಿ, ಶೌಚಾಲಯ ನಿರ್ಮಾಣ, ನಿರ್ಗತಿಕರ ಮಾಸಾಶನ, ಕೌಶಲ್ಯಾಭಿವೃದ್ಧಿ ತರಬೇತಿ, ಕೃಷಿಯೇತರ ಸ್ವದ್ಯೋಗ ಕಾರ್ಯಕ್ರಮಗಳಿಗೂ ಸಂಸ್ಥೆಯ ವತಿಯಿಂದ ಅನುದಾನ ನೀಡಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಲೂಕು ಯೋಜನಾಧಿಕಾರಿ ಕರುಣಾಕರ ಆಚಾರ್ಯ ಇದ್ದರು.

ಟಾಪ್ ನ್ಯೂಸ್

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.