ಏಪ್ರಿಲ್‌ 30ರವರೆಗೂ ನೀರು ಕೊಡಿ

ಆಲಮಟ್ಟಿಯಲ್ಲಿ ನಡೆಯುವ ನೀರಾವರಿ ಸಲಹಾ ಸಮಿತಿ ಸಭೆಯತ್ತ ರೈತರ ಚಿತ್ತ

Team Udayavani, Nov 16, 2019, 12:04 PM IST

16-November-8

ಬಾಲಪ್ಪ ಎಂ. ಕುಪ್ಪಿ
ಕಕ್ಕೇರಾ:
ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಭತ್ತದ ಬೆಳೆಗೆ ನೀರು ಹರಿಸುವ ಕುರಿತು ನ. 17ರಂದು ಆಲಮಟ್ಟಿಯಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಡೆಸಲು ಅಂತೂ ಸರಕಾರ ನಿರ್ಧರಿಸಿದ್ದು, ಈ ಭಾಗದ ರೈತರಿಗೆ ಖುಷಿ ಮೂಡಿಸಿದೆ.

ನೀರಾವರಿ ಸಲಹಾ ಸಮಿತಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಅಧ್ಯಕ್ಷತೆಯಲ್ಲಿ ಸಭೆಯಲ್ಲಿ ನಡೆಯಲಿದ್ದು, ಬಸವಸಾಗರ ಎಡದಂಡೆ ಹಾಗೂ ಬಲದಂಡೆ ಕಾಲುವೆ ನೀರು ನೆಚ್ಚಿಕೊಂಡ ಈ ಭಾಗದ ರೈತರು ಸಭೆ ನಿರ್ಧಾರಕ್ಕೆ ಕಾಯುತ್ತಿದ್ದಾರೆ. ನೀರಾವರಿ ಸಲಹಾ ಸಮಿತಿ ನಡೆಸಿ ರೈತರಿಗೆ ಸ್ಪಷ್ಟ ಮಾಹಿತಿ ನೀಡಬೇಕು ಎಂದು ಮಾಜಿ ಶಾಸಕ ರಾಜಾ ವೆಂಕಟಪ್ಪನಾಯಕ ಹಾಗೂ ಹಾಲಿ ಶಾಸಕ ನರಸಿಂಹನಾಯಕ(ರಾಜುಗೌಡ) ಕೆಲದಿನದ ಹಿಂದೆ ಸರಕಾರಕ್ಕೆ ಒತ್ತಾಯಿಸಿದ್ದರು. ಹಾಗೇ ಈ ಭಾಗದ ಹಲವಾರು ಸಂಘಟನೆಗಳು ಕೂಡ ಸಭೆ ನಡೆಸಿ ನೀರು ಹರಿಸುವ ಕುರಿತು ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದವು ಎಂಬುದು ಇಲ್ಲಿ ಗಮನಾರ್ಹ ಸಂಗತಿ.

ಈಗ ಬಾಗಲಕೋಟೆ, ಯಾದಗಿರಿ, ವಿಜಯಪುರ, ರಾಯಚೂರು ಸೇರಿದಂತೆ ಅಚ್ಚುಕಟ್ಟು ಪ್ರದೇಶದ ಶಾಸಕರು ಮತ್ತು ವಿಧಾನ ಪರಿಷತ್ತು ಸದಸ್ಯರು ಹಾಗೂ ಸಂಸದರನ್ನೊಳಗೊಂಡು ನೀರಾವರಿ ಮಹತ್ವದ ಸಭೆ ನಡೆಸಲು ಸರಕಾರ ಆದೇಶ ಹೊರಡಿಸಿದ್ದು, ರೈತರಿಗೆ ಸಮಾಧಾನ ತಂದರೆ ಇನ್ನೂ ರೈತರೊಬ್ಬರನ್ನು ಸಲಹಾ ಸಮಿತಿಗೆ ಸೇರಿಸದೇ ಇರುವುದು ಅಷ್ಟೇ ಬೇಸರ ಮೂಡಿಸಿದೆ.

ಸದ್ಯ ಅಚ್ಚುಕಟ್ಟು ಪ್ರದೇಶ ರೈತರು ಹಿಂಗಾರು ಭತ್ತ ನಾಟಿಗಾಗಿ ಮುಂಗಾರು ಭತ್ತ ಕಟಾವು ನಡೆಸಿದ್ದಾರೆ. ಸಸಿ ಮಾಡಿ ಹಾಕುವುದು ಸೇರಿದಂತೆ ಕೃಷಿ ಚಟುವಟಿಕೆ ಜೋರಾಗಿಸಿದ್ದಾರೆ. ಈ ಭಾರಿ ಮಹಾರಾಷ್ಟ್ರದಲ್ಲಿ ನಿರೀಕ್ಷೆ ಮೀರಿ ಮಳೆಯಾದ ಕಾರಣ ಆಲಮಟ್ಟಿ ಮತ್ತು ಬಸವಸಾಗರ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬಂದು ಸಂಗ್ರಹವಾಗಿದೆ. ಹೆಚ್ಚುವರಿ ನೀರನ್ನು ಕೃಷ್ಣಾ ನದಿಗೆ ಬಿಡಲಾಗಿದೆ.

2019ನೇ ಸಾಲಿನಲ್ಲಿ ನವೆಂಬರ್‌ನಲ್ಲಿ ಬಸವಸಾಗರ ಭರ್ತಿಯಾಗಿದ್ದು ಇದೇ ಮೊದಲ ಭಾರಿ ಎನ್ನಬಹುದು. ಈ ಹಿಂದೆ ಯಾವಾಗಲೂ ನವೆ‌ಂಬರ್‌ನಲ್ಲಿ ಜಲಾಶಯ ಭರ್ತಿಯಾಗಿರಲಿಲ್ಲ. ಈಗ ಅಚ್ಚುಕಟ್ಟು ಪ್ರದೇಶ ರೈತರಿಗೆ ಬಸವಸಾಗರ ಜಲಾಶಯ ವರದಾನವಾಗಿದಂತೂ ಸತ್ಯ ಎನ್ನುತ್ತಾರೆ ರೈತರು.

ಕಳೆದ ವರ್ಷ ಮುಂಗಾರು ಮಾತ್ರ ಬೆಳೆದ ಅನ್ನದಾತರು ಹಿಂಗಾರು ಭತ್ತ ಬೆಳೆಯದೇ ನಷ್ಟವೇ ಹೊಂದಬೇಕಾಯಿತು. ಇದರಿಂದಾಗಿ ಕೃಷಿ ಕೂಲಿಕಾರ್ಮಿಕರು ಹಾಗೂ ರೈತರು ಗುಳೆ ಹೋಗುವಂತಾಗಿತ್ತು. ಖುಷಿಯಿಂದಲೇ ಮುಂಗಾರು ಬೆಳೆದ ರೈತರಿಗೆ ಈಗ ಹಿಂಗಾರು ಭತ್ತದ ನೀರಿನ ಚಿಂತೆ ಮಾಡುವಂತಾಗಿ ಕೆಲವರು ಇನ್ನೂ ಕೂಡ ಸಸಿ ಹಾಕಿಲ್ಲ. ಕೆಲ ರೈತರು ದೇವರ ಮೇಲೆ ಬಾರ ಹಾಕಿ ಸಸಿ ಹಾಕಿದ್ದಾರೆ. ಸದ್ಯ ಕಾಲುವೆಗೆ ನೀರು ಹರಿಸುವ ಕುರಿತು ನಡೆಸುವ ಸಲಹಾ ಸಮಿತಿ ಸಭೆಯತ್ತ ರೈತರು ಚಿತ್ತ ಹರಿಸಿದ್ದಾರೆ.

ಪ್ರತಿ ಸಲ ನೀರಾವರಿ ಸಭೆಯಲ್ಲಿ ಕಾಲುವೆಗಳಿಗೆ ವಾರ ಬಂದಿ ಪದ್ಧತಿ ಪ್ರಕಾರ ನೀರು ಹರಿಸುವ ನಿರ್ಣಯ ಕೈಗೊಳ್ಳಲಾಗಿದೆ. ಇದರಿಂದಾಗಿ ಅಚ್ಚುಕಟ್ಟು ಪ್ರದೇಶದ ಕೊನೆಭಾಗದ ರೈತರ ಜಮೀನುಗಳಿಗೆ ಸಮರ್ಪಕ ನೀರು ತಲುಪದೆ ಗೋಳಾಡುವಂತಾಗಿದೆ. ಅಲ್ಲದೇ ಉತ್ತಮವಾಗಿ ಯಾವುದೇ ಬೆಳೆ ಬೆಳೆಯದೆ ಬಹುತೇಕ ರೈತರು ನಷ್ಟವೇ ಎದುರಿಸಬೇಕಾಯಿತು. 2019ನೇ ಸಾಲಿಗಾದರೂ ಸಲಹಾ ಸಮಿತಿ ವಾರಬಂದಿ ಪದ್ಧತಿ ಕೈಬಿಟ್ಟು ಏಪ್ರಿಲ್‌ 30 ವರೆಗೂ ನೀರು ಹರಿಸಿದರೆ ಮಾತ್ರ ಅನ್ನದಾತರಿಗೆ ಉಳಿಗಾಲವಿದೆ ಎಂಬ ಕೂಗು ರೈತರಿಂದ ಕೇಳಿ ಬರುತ್ತಿದೆ. ಅದಾಗ್ಯೂ ನೀರಾವರಿ ಸಲಹಾ ಸಮಿತಿ ಮೇಲೆ ರೈತರ ಭವಿಷ್ಯ ಅಡಗಿದೆ ಎಂದು ರೈತ ಸಂಘಟನೆ ಮುಖಂಡರ ಅಭಿಪ್ರಾಯವಾಗಿದೆ.

ಈಗಾಗಲೇ ಶಹಾಪುರ, ಜೇವರ್ಗಿ, ದೇವದುರ್ಗ ಹಾಗೂ ಸುರಪುರ ಪ್ರದೇಶದ ರೈತರು ಕಾಲುವೆಗಳ ನೀರು ನಂಬಿಕೊಂಡು ಹಿಂಗಾರು ಶೇಂಗಾ ಬಿತ್ತನೆ ಮಾಡಿದ್ದಾರೆ. ಸುರಪುರ ತಾಲೂಕಿನಲ್ಲಿ 3978 ಹೆಕ್ಟೇರ್‌ ಪ್ರದೇಶದಲ್ಲಿ ಶೇಂಗಾ ಬಿತ್ತನೆಯಾಗಿದೆ. 36620 ಹೆಕ್ಟೇರ್‌ ಪ್ರದೇಶದಲ್ಲಿ ಹತ್ತಿ ನಾಟಿ ಮಾಡಲಾಗಿದೆ. 54758 ಹೆಕ್ಟೇರ್‌ ಪ್ರದೇಶದಲ್ಲಿ ಹಿಂಗಾರು ಭತ್ತ ನಾಟಿ ಸಾಧ್ಯತೆ ಇದೆ ಎನ್ನಲಾಗಿದೆ. ಹತ್ತಿ ದೀರ್ಘ‌ ಬೆಳೆಯಾಗಿದೆ. ಕಾಲುವೆಗೆ ಸಮರ್ಪಕವಾಗಿ ನೀರು ಹರಿಸುವ ಕುರಿತು ಜನಪ್ರತಿನಿಧಿಗಳು ಒಳ್ಳೆಯ ನಿರ್ಣಯ ಕೈಗೊಳ್ಳಬೇಕಾಗಿದೆ ಎಂಬುದು ರೈತರ ಆಗ್ರಹ.

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

5

Udupi: ಜಿಲ್ಲೆಯ ಬ್ಲ್ಯಾಕ್‌ ಸ್ಪಾಟ್‌ 30ರಿಂದ 20ಕ್ಕೆ ಇಳಿಕೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.