ಶರಣ-ಸಂತರ ಪ್ರತಿಮೆ ಸ್ಥಾಪನೆಗೆ ಯೋಜನೆ
ಕನಕ ಭವನ ನಿರ್ಮಾಣಕ್ಕೆ ಕೆಕೆಆರ್‌ಡಿಬಿ ಅನುದಾನ ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿವೇಶನ
Team Udayavani, Nov 16, 2019, 10:59 AM IST
ಕಲಬುರಗಿ: ನಗರದ ಜಗತ್ ವೃತ್ತದಿಂದ ಯಲ್ಲಮ್ಮ ದೇವಸ್ಥಾನ ಮಧ್ಯೆ ಟ್ಯಾಂಕ್ ಬಂಡ್ ರಸ್ತೆಯಲ್ಲಿ ಎಲ್ಲ ಶರಣ-ಸಂತರ ಪ್ರತಿಮೆ ಸ್ಥಾಪನೆಗೆ ಯೋಜನೆ ರೂಪಿಸಲಾಗಿದೆ. ಅಲ್ಲಿ ಕನಕದಾಸರು ಮತ್ತು ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುವುದು ಎಂದು ದಕ್ಷಿಣ ಮತಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಹೇಳಿದರು.
ನಗರದ ಡಾ| ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಶುಕ್ರವಾರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಸಂತ ಶ್ರೇಷ್ಠ ಕವಿ ಕನಕದಾಸರ ಜಯಂತ್ಯುತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ನಗರದಲ್ಲಿ ಕನಕ ಭವನ ನಿರ್ಮಾಣಕ್ಕೂ ಪ್ರಯತ್ನ ಮಾಡಲಾಗುವುದು. ಸಮಾಜದ ಜಾಗ ಇದ್ದರೆ, ಭವನ ನಿರ್ಮಾಣಕ್ಕೆ ಕೆಕೆಆರ್‌ಡಿಬಿಯಿಂದ ಅನುದಾನ ಒದಗಿಸಲಾಗುವುದು. ಇಲ್ಲವಾದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿವೇಶನ ಕೊಟ್ಟು, ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು.
ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾಧ್ಯಕ್ಷ ತಿಪ್ಪಣ್ಣ ಗುಂಡಗುರ್ತಿ ಬಳಬಟ್ಟಿ ಮಾತನಾಡಿ, ಜಿಲ್ಲೆಯಲ್ಲಿ ಸಿಂಧುತ್ವ ಪ್ರಮಾಣ ಪತ್ರ ಪಡೆಯಲು ಸಮಾಜದ ಯುವಕ-ಯುವತಿಯರಿಗೆ ತೊಂದರೆಯಾಗುತ್ತಿದ್ದು, ಸರ್ಕಾರ ಇದರ ಬಗ್ಗೆ ಗಮನಹರಿಸಿ ಪರಿಹಾರ ಕಲ್ಪಿಸಬೇಕೆಂದು ಮನವಿ ಮಾಡಿದರು.
ಗ್ರಾಮೀಣ ಶಾಸಕ ಬಸವರಾಜ ಮತ್ತಿಮಡು, ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ, ಜಿಲ್ಲಾಧಿಕಾರಿ ಬಿ.ಶರತ್ ಮಾತನಾಡಿದರು. ದಿವ್ಯ ಸಾನಿಧ್ಯ ವಹಿಸಿದ್ದ ತಿಂಥಣಿ ಬ್ರಿಡ್ಜ್ ಕಾಗಿನೆಲೆ ಕನಕಗುರು ಪೀಠದ ಲಿಂಗಬೀರ ದೇವರು ಆಶೀರ್ವಚನ ನೀಡಿದರು.
ಗುಲಬರ್ಗಾ ವಿಶ್ವವಿದ್ಯಾಲಯದ ಮಾಜಿ ಸಿಂಡಿಕೇಟ್ ಸದಸ್ಯ ಹಾಗೂ ಇತಿಹಾಸ ಉಪನ್ಯಾಸಕ ಡಾ| ಬಾಬು ಪೂಜಾರಿ ಕನಕನ ಜೀವನ ಚರಿತ್ರೆ ಕುರಿತು ಉಪನ್ಯಾಸ ನೀಡಿದರು. ಇದಕ್ಕೂ ಮುನ್ನ ಜಿ.ಪಂ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಕಾರ್ಯಕ್ರಮ ಉದ್ಘಾಟಿಸಿದರು.
ವಿಧಾನಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಪಂ ಸಿಇಒ ಡಾ| ಪಿ.ರಾಜಾ, ಡಿಸಿಪಿ ಕಿಶೋರ ಬಾಬು, ಅಪರ ಜಿಲ್ಲಾ ಧಿಕಾರಿ ಡಾ| ಶಂಕರಪ್ಪ ವಣಿಕ್ಯಾಳ, ಪ್ರೊಬೇಷನರ್ ಐಎಎಸ್ ಅಧಿಕಾರಿ ಡಾ| ಬಿ. ಗೋಪಾಲಕಷ್ಣ ಹಾಗೂ ಸಮಾಜದ ಗಣ್ಯರು ಹಾಗೂ ಮುಖಂಡರು ಪಾಲ್ಗೊಂಡಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ ಸ್ವಾಗತಿಸಿದರು. ಶಿವಾನಂದ ಅಣಜಗಿ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.