ಅರ್ಧಕ್ಕೆ ನಿಂತ ರಾಜೀವಗಾಂಧಿ ಥೀಮ್‌ ಪಾರ್ಕ್‌


Team Udayavani, Nov 18, 2019, 10:45 AM IST

18-November-2

ಹಣಮಂತರಾವ ಭೈರಾಮಡಗಿ
ಕಲಬುರಗಿ: ವೇಗದಲ್ಲಿ ಬೆಳೆಯುತ್ತಿರುವ ಕಲಬುರಗಿ ಮಹಾನಗರದಲ್ಲಿ ಮನೋರಂಜನಾ (ಥೀಮ್‌) ಪಾರ್ಕ್‌ ಸ್ಥಾಪನೆ ಆಗಬೇಕೆಂಬ ನಿಟ್ಟಿನಲ್ಲಿ ನಗರದ ದರಿಯಾಪುರ-ಕೋಟನೂರ ಡಿ. ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರ ಬಡಾವಣೆಯಲ್ಲಿ ನಿರ್ಮಿಸಲಾಗುತ್ತಿರುವ ರಾಜೀವಗಾಂಧಿ ಥೀಮ್‌ ಪಾರ್ಕ್‌ ಅರ್ಧಕ್ಕೆ ನಿಂತಿದ್ದು, ಸಂಪೂರ್ಣ ಹಾಳಾಗುತ್ತಿದೆ.

ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರ ಬಡಾವಣೆ ಮಧ್ಯ ಭಾಗದಲ್ಲಿ ಮಹಾನಗರ ಜನತೆಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಕಳೆದ ಐದು ವರ್ಷಗಳ ಹಿಂದೆ ವಿಶಾಲವಾದ 18 ಎಕರೆ ಪ್ರದೇಶದಲ್ಲಿ ಥೀಮ್‌ ಪಾರ್ಕ್‌ ಸ್ಥಾಪಿಸಲು ಮುಂದಾಗಲಾಗಿದೆ. 3.50 ಕೋಟಿ ರೂ. ಖರ್ಚು ಮಾಡಿ ಪೂರಕ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಆದರೆ ಅನುದಾನ ಸಿಗದೇ ಇರುವುದರಿಂದ ಅರ್ಧಕ್ಕೆ ನಿಲ್ಲಿಸಲಾಗಿದೆ. ಇದರಿಂದ ಈಗಾಗಲೇ ನಿರ್ಮಿಸಲಾದ ಕಟ್ಟಡಗಳು ಸಂಪೂರ್ಣ ಹಾಳಾಗುತ್ತಾ ಸಾಗಿದ್ದು, 3.50 ಕೋಟಿ ರೂ.ಗಳನ್ನು ನೀರಲ್ಲಿ ಹೋಮ ಮಾಡಿದಂತಾಗಿದೆ.

ಕೆಕೆಆರ್‌ಡಿಬಿಯು 3.50 ಕೋಟಿ ರೂ. ಅನುದಾನ ನೀಡಿದೆ. ಆದರೆ ಈಗ ಅಭಿವೃದ್ಧಿ ಕಾರ್ಯಗಳಿಗೆ ಮಾತ್ರ ಅನುದಾನ ನೀಡಲಾಗುವುದು. ಪಾರ್ಕ್‌ ಮುಂದುವರಿದ ಪ್ರದೇಶಗಳಲ್ಲಿ ಸ್ಥಾಪನೆ ಆಗುವಂತದ್ದು. ಹೀಗಾಗಿ ಅನುದಾನ ನೀಡುವುದಿಲ್ಲ ಎಂದು ಮಂಡಳಿ ಕಾರ್ಯದರ್ಶಿಗಳು ಹೇಳುತ್ತಿದ್ದಾರೆ.

ಹೀಗಾಗಿ ಕಾಮಗಾರಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತಾಗಿದೆ. ಪಾರ್ಕ್‌ ಅಕ್ಷರಶಃ ದನಗಳು ಮೇಯುವ ಹಾಗೂ ಅನೈತಿಕ ಚಟುವಟಿಕೆಗಳಿಗೆ ನಿರ್ಮಿಸಿದಂತ ಸ್ಥಳವಾಗಿ ಪರಿವರ್ತನೆಯಾಗಿದೆ. ಇಲ್ಲಿ ಲಕ್ಷಾಂತರ ರೂ. ವೆಚ್ಚದಲ್ಲಿ ಹೈಮಾಸ್ಟ್‌ ದೀಪಗಳನ್ನು ಹಾಕಲಾಗಿದೆ. ಆದರೆ ಒಂದೂ ಬೆಳಕು ನೀಡುವುದಿಲ್ಲ. ಅದೇ ರೀತಿ ವಾಕಿಂಗ್‌ ಟ್ರ್ಯಾಕ್‌ನುದ್ದಕ್ಕೂ ದೀಪ ಅಳವಡಿಸಲಾಗಿದೆ.

ಅವುಗಳಲ್ಲಿಯೂ ಒಂದೂ ಸರಿಯಾಗಿಲ್ಲ. ಒಟ್ಟಾರೆ ನೀಡಲಾಗಿರುವ ಎತ್ತಿ ಹಾಕುವ ಕಾರ್ಯ ನಡೆದಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿ ಕಂಡು ಬರುತ್ತದೆ.

ಎಚ್‌ಕೆಆರ್‌ಡಿಬಿಯಿಂದ ಅನುದಾನ: ಈ ಮುಂಚಿನ ಎಚ್‌ಕೆಆರ್‌ಡಿಬಿ ಹಾಗೂ ಈಗಿನ ಕೆಕೆಆರ್‌ಡಿಬಿಯಿಂದ 3.50 ಕೋಟಿ ರೂ. ಅನುದಾನ ಥೀಮ್‌ ಪಾರ್ಕ್‌ ನಿರ್ಮಾಣಕ್ಕೆ ನೀಡಲಾಗಿದೆ. ಪಾರ್ಕ್‌ ಸಲುವಾಗಿ ಸುತ್ತಲೂ ರಕ್ಷಣಾ ಗೋಡೆ ನಿರ್ಮಿಸಲಾಗಿದೆ. ನಾಲ್ಕು ದಿಕ್ಕಿನಲ್ಲೂ ಗೇಟ್‌ಗಳನ್ನು ಅಳವಡಿಸಲಾಗಿದೆ. ನಡುವೆ ಕಾರಂಜಿ ದೀಪ ಹಾಗೂ ಮೂರು ಕಟ್ಟಡಗಳನ್ನು ಅರ್ಧಕ್ಕೆ ನಿರ್ಮಿಸಿ ಕೈ ಚೆಲ್ಲಲಾಗಿದೆ. ಥೀಮ್‌ ಸುತ್ತಲೂ ಟ್ರ್ಯಾಕ್‌ ಸಹ ಕಳಪೆಯಿಂದ ನಿರ್ಮಾಣವಾಗಿದೆ.

ಸುತ್ತಮುತ್ತಲಿನ ನೂರಾರು ಸಾರ್ವಜನಿಕರು ಬೆಳಗ್ಗೆ ಹಾಗೂ ಸಾಯಂಕಾಲ ವಾಕಿಂಗ್‌ ಮಾಡುತ್ತಿರುತ್ತಾರೆ. ಇಂದಲ್ಲ ನಾಳೆ ಕಾಮಗಾರಿ ಶುರುವಾಗಬಹುದೆಂದು ಸುತ್ತಮುತ್ತಲಿನ ವಾಸಿಗಳು ಬಲವಾಗಿ ನಂಬಿದ್ದರು. ಆದರೆ ಈಗ ಪಾರ್ಕ್‌ ಆಗುವುದಿಲ್ಲ ಎನ್ನುವುದನ್ನರಿತು ಹೋರಾಟಕ್ಕೆ ಇಳಿಯಲು ಮುಂದಾಗಿದ್ದಾರೆ. ಪಾರ್ಕ್‌ನ ದುಸ್ಥಿತಿ, ಕಳಪೆ ಕಾಮಗಾರಿ ಹಾಗೂ ಪೂರ್ಣಗೊಳ್ಳುವ ನಿಟ್ಟಿನಲ್ಲಿ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಮನವರಿಕೆ ಮಾಡಲು ಸಂಘ ರಚಿಸಲಾಗಿದೆ. ಪಾರ್ಕ್‌ ಉಳಿಸಬೇಕೆಂಬ ಕೂಗು ಬಲವಾಗತೊಡಗಿದೆ.

ಟಾಪ್ ನ್ಯೂಸ್

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.