ಗಾಂಧೀಜಿ ಅಹಿಂಸಾ ತತ್ವ ಅಳವಡಿಸಿಕೊಳ್ಳಿ

ದೊಡ್ಡಪ್ಪ ಅಪ್ಪ ಅವರನ್ನು ಭೇಟಿಯಾಗಿದ್ದ ಗಾಂಧೀಜಿಮುಕ್ತ ಶೌಚಾಲಯ ಅರಿವು ಮೂಡಿಸಿ

Team Udayavani, Sep 27, 2019, 11:10 AM IST

27-Sepctember-1

ಕಲಬುರಗಿ: ದೇಶದ ಸ್ವಾತಂತ್ರ್ಯಕ್ಕಾಗಿ ಶಾಂತಿಯಿಂದ ಹೋರಾಡಿದ ಮಹಾತ್ಮ ಗಾಂಧಿಧೀಜಿ ಅವರ ಅಹಿಂಸಾ ತತ್ವಗಳನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಕರೆ ನೀಡಿದರು.

ನಗರದ ಶರಣಬಸವ ವಿಶ್ವವಿದ್ಯಾಲಯದಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯ, ಕಲಬುರಗಿ-ಬಳ್ಳಾರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಪಂಚಾಯತ್‌, ತಾಲೂಕ ಪಂಚಾಯತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಶು ಅಭಿವೃದ್ಧಿ ಯೋಜನೆ (ಗ್ರಾಮೀಣ) ಹಾಗೂ ಶರಣಬಸವೇಶ್ವರ ಶಿಕ್ಷಣ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧೀಜಿಯವರ 150ನೇ ಜಯಂತ್ಯುತ್ಸವ, ಛಾಯಾಚಿತ್ರ ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಹಾತ್ಮ ಗಾಂಧಿಧೀಜಿ ಚಿಕ್ಕ ವಯಸ್ಸಿನಲ್ಲಿ ಕೆಲ ತಪ್ಪು ಮಾಡಿ, ತಿದ್ದಿಕೊಂಡು ಸ್ವಾತಂತ್ರ್ಯಕ್ಕಾಗಿ ಹೋರಾಡುವ ಮೂಲಕ ಮಹಾನ್‌ ವ್ಯಕ್ತಿ ಎನಿಸಿಕೊಂಡರು. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯೂ ಗಾಂಧಿಜೀಯವರ ಜೀವನ ಚರಿತ್ರೆ ತಿಳಿದುಕೊಂಡು ಅವರ ನಡೆ-ನುಡಿ, ಆದರ್ಶ-ತತ್ವಗಳನ್ನು ಬೆಳೆಸಿಕೊಳ್ಳಿ ಎಂದರು.

ಹಿಂಸೆಯಿಂದ ಏನೂ ಸಾ ಧಿಸಲು ಆಗುವುದಿಲ್ಲ. ಶಾಂತಿ ಸೌಹಾರ್ದದಿಂದ ಎಲ್ಲವನ್ನೂ ಪಡೆದುಕೊಳ್ಳಬಹುದು. ಅದೇ ರೀತಿ ಮಹಾತ್ಮ ಗಾಂಧಿ  ತಮ್ಮ ಶಾಂತ ಸ್ವಭಾವದಿಂದ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ ಎಂದು ಗುಣಗಾನ ಮಾಡಿದರು.

ಗೋದುತಾಯಿ ದೊಡ್ಡಪ್ಪ ಅಪ್ಪಾ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯ ಪ್ರಾಚಾರ್ಯರಾದ ಡಾ| ನೀಲಾಂಬಿಕಾ ಪೊಲೀಸ್‌ ಪಾಟೀಲ ಮಾತನಾಡಿ, 1924ರಲ್ಲಿ ಬೆಳಗಾವಿಯ ಕಾಂಗ್ರೆಸ್‌ನ 39ನೇ ಅ ಧಿವೇಶನದ ಅಧ್ಯಕ್ಷತೆ ವಹಿಸಿದ್ದ ಮಹಾತ್ಮ ಗಾಂ ಧೀಜಿ ಅವರು ಕಲಬುರಗಿ ಶರಣಬಸವೇಶ್ವರ ಸಂಸ್ಥಾನದ ಶಾಂತಿ-ಸೌಹಾರ್ದತೆ ಕ್ರಮಗಳು, ಶಿಕ್ಷಣ ಮುಂತಾದ ಅನೇಕ ಜನಪರ ವಿಚಾರ ಅರಿಯಲು ಬೆಳಗಾವಿಯಿಂದ ನೇರವಾಗಿ ಕಲಬುರಗಿಗೆ ಅಗಮಿಸಿ ದೊಡ್ಡಪ್ಪ ಅಪ್ಪ ಅವರನ್ನು ಭೇಟಿಯಾಗಿದ್ದರು ಎಂದರು.

ದಾಸೋಹ ಮನೆಯಲ್ಲಿ ದೊಡ್ಡಪ್ಪ ಅಪ್ಪ ಅವರನ್ನು ಕಂಡ ಗಾಂಧಿಧೀಜಿ ಅವರು ಹೊರಗಡೆಯೇ ತಮ್ಮ ಪಾದರಕ್ಷೆ ಬಿಟ್ಟು ಶರಣರೇ, ಪೂಜ್ಯರೇ ನಾನು ಒಳಗಡೆ ಬರಬಹುದಾ ಎಂದು ಅತಿವಿನಯದಿಂದ ಕೇಳುತ್ತಾರೆ. ಗಾಂಧಿಧೀಜಿ ಅವರ ಈ ನಡೆಗೆ ಮಾರುಹೋಗಿ ಅವರಿದ್ದೆಡೆಗೆ ದೊಡ್ಡಪ್ಪ ಅಪ್ಪ ಅವರು ಹೋಗಿ ಪ್ರೀತಿಯಿಂದ ಅಪ್ಪಿಕೊಂಡಿದ್ದರು ಎಂದು ಆ ಕ್ಷಣವನ್ನು ಸ್ಮರಿಸಿದರು.

ಗಾಂಧೀಜಿ ಭೇಟಿಕೊಟ್ಟ ಈ ಸ್ಥಳದಲ್ಲಿ 150ನೇ ಜಯಂತ್ಯುತ್ಸವ ನಡೆಯುತ್ತಿರುವುದು ಅರ್ಥಪೂರ್ಣವಾಗಿದೆ ಎಂದು ಹೇಳಿದರು.

ಕಲಬುರಗಿ ತಾ.ಪಂ ಅಧ್ಯಕ್ಷ ಶಿವರಾಜ ಕಲ್ಲಪ್ಪ ಸಜ್ಜನ್‌ ಮಾತನಾಡಿ, ಬಯಲು ಮುಕ್ತ ಶೌಚಾಲಯ ಹಾಗೂ ಪ್ಲಾಸ್ಟಿಕ್‌ ನಿಷೇಧ ಕುರಿತು ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಜನರಿಗೆ ಅರಿವು ಮೂಡಿಸಬೇಕು ಎಂದರು.

ಶರಣಬಸವೇಶ್ವರ ಕಲಾ ಮಹಾವಿದ್ಯಾಲಯದ ಸಹ ಪ್ರಾಚಾರ್ಯ ಡಾ| ಸುರೇಶಕುಮಾರ ನಂದಗಾಂವ, ಕಲಬುರಗಿ-ಬಳ್ಳಾರಿ ಕ್ಷೇತ್ರ ಜನಸಂಪರ್ಕ ಕಾರ್ಯಾಲಯದ ಉಪ ನಿರ್ದೇಶಕ ಡಾ| ಜಿ.ಡಿ. ಹಳ್ಳಿಕ್ಕೇರಿ ಮಾತನಾಡಿದರು. ಜಿ.ಪಂ ಅಧ್ಯಕ್ಷೆ ಸುವರ್ಣಾ ಹಣಮಂತರಾವ ಮಲಾಜಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕ ಜಿ.ಬಿ. ಸಿದ್ದೇಶ್ವರಪ್ಪ, ಶರಣ ಬಸವೇಶ್ವರ ಬಿಎಡ್‌ ಕಾಲೇಜಿನ ಉಪನ್ಯಾಸಕಿ ಗೀತಾ ಹಾಗೂ ವಿದ್ಯಾರ್ಥಿಗಳು ಇದ್ದರು.

ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಧರ್ಮವೀರ ಮಾಣಿಕರಾವ ಗಂಪಾ ಮತ್ತು ಶ್ಯಾಮರಾವ ಕುಲಕರ್ಣಿ ಅವರನ್ನು ಸನ್ಮಾನಿಸಲಾಯಿತು. ಲೊಹಿಯಾ ಕಲಾತಂಡ ಅಸ್ಟಗಿ, ರೇವಣಸಿದ್ದೇಶ್ವರ ಕಲಾ ತಂಡಗಳು ಸ್ವಚ್ಛ ಭಾರತ ಕುರಿತು ಬೀದಿನಾಟಕ, ಹಾಡು, ಡೊಳ್ಳು ಕುಣಿತ ಪ್ರದರ್ಶನ ನೀಡಿದವು.

ರೇಣುಕಮ್ಮ ವಾರದ ನಿರೂಪಿಸಿದರು. ಬೆಂಗಳೂರಿನ ಪಿಐಬಿ ಮಾಧ್ಯಮ ಮತ್ತು ಸಂವಹನ ಅಧಿಕಾರಿ ಪಿ.ಜಿ ಪಾಟೀಲ ಸ್ವಾಗತಿಸಿದರು. ಎನ್‌. ರಾಮಕೃಷ್ಣ ವಂದಿಸಿದರು.

ಟಾಪ್ ನ್ಯೂಸ್

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.