ಪಾಲಿಕೆ ಕಾಮಗಾರಿ ಚುರುಕುಗೊಳಿಸಿ: ಶರತ್
ಪೋಸ್ಟರ್‌ಗಳಿಗೆ ಕಡಿವಾಣ ಹಾಕಿ ಟೆಂಡರ್ ನೆಪವೊಡ್ಡಿ ನಿಧಾನಗತಿ ಅನುಸರಿಸಬೇಡಿ
Team Udayavani, Nov 7, 2019, 10:45 AM IST
ಕಲಬುರಗಿ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾಮಾನ್ಯ ಮೂಲ ಅನುದಾನ, ಎಸ್‌ಎಫ್‌ಸಿ ಅನುದಾನ, 13 ಮತ್ತು 14ನೇ ಹಣಕಾಸು ಆಯೋಗದ ಅನುದಾನದಡಿ ಕಳೆದ ಮೂರ್‍ನಾಲ್ಕು ವರ್ಷಗಳ ಹಿಂದೆ ಆರಂಭಿಸಿದ ಕಾಮಗಾರಿಗಳು ಇನ್ನು ಪ್ರಗತಿಯಲ್ಲಿದ್ದು, ಅವುಗಳನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಶರತ್ ಬಿ. ಪಾಲಿಕೆ ಅಧಿಕಾರಿಗಳಿಗೆ
ಸೂಚಿಸಿದರು.
ಜಿಲ್ಲಾ ಧಿಕಾರಿ ಕಚೇರಿ ಸಭಾಂಗಣದಲ್ಲಿ ಕಲಬುರಗಿ ಮಹಾನಗರ ಪಾಲಿಕೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಹಿಂದಿನ ಸಾಲಿನ ಕಾಮಗಾರಿಗಳನ್ನು ಪೂರ್ಣಗೊಳಿಸದೇ ಹಾಗೆಯೇ ಉಳಿದುಕೊಂಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿ, ಕೂಡಲೆ ಬಾಕಿ ಕಾಮಗಾರಿಗಳನ್ನು ಮುಗಿಸಬೇಕು ಎಂದರು.
2019-20ನೇ ಸಾಲಿನ ಎಲ್ಲ ಕಾಮಗಾರಿಗಳನ್ನು ಮಾರ್ಚ್-2020ರ ಅಂತ್ಯದ ವರೆಗೆ ಪೂರ್ಣಗೊಳಿಸುವಂತೆ ಪಾಲಿಕೆ ಕಾರ್ಯಪಾಲಕ ಅಭಿಯಂತರರಿಗೆ ಸೂಚನೆ ಕೊಟ್ಟರು. ಪಾಲಿಕೆಯ 2019-20ನೇ ಸಾಲಿನ ಎಸ್ ಎಫ್‌ಸಿ ಅನ್‌ಟೈಡ್ ಅನುದಾನದಲ್ಲಿ ವೈಯಕ್ತಿಕ ಲಾಭ ಪಡೆಯುವ ಕಾಮಗಾರಿಗಳಿಗೆ ಇದುವರೆಗೆ ಟೆಂಡರ್ ಕರೆಯದಿರುವುದಕ್ಕೆ ಅಕ್ಷೇಪಿಸಿದ ಜಿಲ್ಲಾಧಿಕಾರಿಗಳು ಕೂಡಲೇ ಟೆಂಡರ್ ಕರೆದು ಅರ್ಹ ಫಲಾನುಭವಿಗಳಿಂದ ಅರ್ಜಿ ಪಡೆಯಿರಿ ಎಂದು ತಿಳಿಸಿದರು.
ಪಾಲಿಕೆ ವ್ಯಾಪ್ತಿಯಲ್ಲಿನ ಕಾಮಗಾರಿಗೆ 2ನೇ ಕರೆ, 3ನೇ ಕರೆ ಕರೆಯುತ್ತಿರುವುದನ್ನು ಗಮನಿಸಿದ ಜಿಲ್ಲಾಧಿಕಾರಿಗಳು, ಟೆಂಡರ್ ಪ್ರಕ್ರಿಯೆಗಳು ಇ-ಪ್ರೋಕ್ಯೂರಮೆಂಟ್ ಮೂಲಕ ನಡೆಯುತ್ತಿರುವುದರಿಂದ ಟೆಂಡರ್ ಕರೆಯುವ ಪ್ರಾಧಿಕಾರ ಪ್ರತಿ ಕಾಮಗಾರಿಗೆ ನಿಗದಿಪಡಿಸಿದ ಟೆಂಡರ್ ಮೊತ್ತಕ್ಕಿಂತ ಕಡಿಮೆ ಮೊತ್ತಕ್ಕೆ ಕೇವಲ ಓರ್ವ ಗುತ್ತಿಗೆದಾರರು ಬಿಡ್ ಸಲ್ಲಿಸಿದಲ್ಲಿ, ಅದನ್ನು ನಿಯಮಾನುಸಾರ ಪುರಸ್ಕರಿಸಿ. ಕೇವಲ ಓರ್ವ ಬಿಡ್ಡುದಾರರು ಮಾತ್ರ ಮುಂದೆ ಬಂದಿದ್ದಾರೆ ಎಂದು ಕಾರಣವೊಡ್ಡಿ ಮತ್ತೆ ಟೆಂಡರ್ ಪುನಃ ಕರೆದು ಕಾಮಗಾರಿ ನಿಧಾನಗತಿಗೆ ಮುಂದುವರಿಸಬೇಡಿ ಎಂದರು.
ಪೋಸ್ಟರ್‌ಗಳಿಗೆ ಕಡಿವಾಣ ಹಾಕಿ: ನಗರದ ಜಗತ್ ವೃತ್ತ ಸೇರಿದಂತೆ ಪ್ರಮುಖ ವೃತ್ತಗಳಲ್ಲಿ ಸಾರ್ವಜನಿಕರು ಮತ್ತು ಸಂಘ-ಸಂಸ್ಥೆಗಳು ಅನುಮತಿ ಪಡೆಯದೇ ಪೋಸ್ಟರ್‌ಗಳನ್ನು ಅಂಟಿಸುತ್ತಿರುವುದರಿಂದ ನಗರದ ಸೌಂದರ್ಯಕ್ಕೆ ಧಕ್ಕೆಯಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಪಾಲಿಕೆ ಕಾರ್ಯನಿರ್ವಾಹಕ ಅಭಿಯಂತ ಶಿವಣಗೌಡ ಪಾಟೀಲ ಮಾತನಾಡಿ, ಪಾಲಿಕೆ ವ್ಯಾಪ್ತಿಯಲ್ಲಿ ನಗರೋತ್ಥಾನ 2ನೇ ಹಂತದಲ್ಲಿ ಹಂಚಿಕೆಯಾದ 100 ಕೋಟಿ ರೂ. ಮೊತ್ತದಡಿ 138 ಕಾಮಗಾರಿಗಳನ್ನು ತೆಗೆದುಕೊಂಡು, 136 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಬಿಡುಗಡೆಯಾದ 92.41 ಕೋಟಿ ರೂ. ಅನುದಾನವನ್ನು ಸಂಪೂರ್ಣ ಖರ್ಚು ಮಾಡಲಾಗಿದೆ ಎಂದರು.
3ನೇ ಹಂತದ ನಗರೋತ್ಥಾನ ಯೋಜನೆಯಡಿ 100 ಕೋಟಿ ರೂ. ಅನುದಾನದಲ್ಲಿ 34 ಕಾಮಗಾರಿಗಳನ್ನು ತೆಗೆದುಕೊಂಡು 27 ಮುಗಿಸಲಾಗಿದೆ. ನಗರ ಟ್ರಾಫಿಕ್ ಸಂಚಾರಕ್ಕೆ ಸಂಬಂಧಿ ಸಿದಂತೆ ಮೂರು ಕಾಮಗಾರಿಗಳು ಪೊಲೀಸ್ ಇಲಾಖೆಗೆ ವಹಿಸಿದ್ದು, ಇದುವರೆಗೆ ಬಿಡುಗಡೆಯಾದ 46.18 ಕೋಟಿ ರೂ. ಖರ್ಚು ಮಾಡಿ ಶೇ.100ರಷ್ಟು ಪ್ರಗತಿ ಸಾಧಿಸಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಕಲಬುರಗಿ ನಗರಕ್ಕೆ 24×7 ಕುಡಿಯುವ ನೀರು ಪೂರೈಕೆ ಕಾಮಗಾರಿಗೆ ನಗರೋತ್ಥಾನ ಯೋಜನೆಯಡಿ 40 ಕೋಟಿ ರೂ. ಅನುದಾನ ಕಾಯ್ದಿರಿಸಿಕೊಳ್ಳಲಾಗಿದೆ. ಅಲ್ಲದೆ ಪಾಲಿಕೆ ವ್ಯಾಪ್ತಿಯಲ್ಲಿ ಸಾಮಾನ್ಯ ಮೂಲ ಅನುದಾನ, ಎಸ್‌ಎಫ್‌ಸಿ ವಿಶೇಷ ಅನುದಾನ 40 ಕೋಟಿ ರೂ., ವಿಶೇಷ ಅನುದಾನ 50 ಕೋಟಿ ರೂ., ಎಸ್‌ಎಫ್‌ಸಿ ಅನ್‌ಟೈಡ್ ಅನುದಾನ, ಎಸ್‌ಎಫ್‌ಸಿ, ಎಸ್‌ಸಿಸಿಪಿ, ಎಸ್‌ಎಫ್‌ಸಿ ವಿಶೇಷ ಅನುದಾನ, 13 ಮತ್ತು 14ನೇ ಹಣಕಾಸು ಆಯೋಗದ ಅನುದಾನದಡಿ ಕೈಗೊಂಡ ಕಾಮಗಾರಿಗಳ ಅಂಕಿ-ಸಂಖ್ಯೆ ಸಭೆ ಮುಂದಿಟ್ಟರು.
ಇದಕ್ಕೆ ಪ್ರತಿಕ್ರಿಯೆಸಿದ ಜಿಲ್ಲಾಧಿಕಾರಿಗಳು ಮುಂದಿನ ಸಭೆಗೆ ಪ್ರತಿ ಕಾಮಗಾರಿಯ ಸಮಗ್ರ ಚಿತ್ರಣ ಸಲ್ಲಿಸುವಂತೆ ತಿಳಿಸಿದರು. ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ, ಡಿಯುಡಿಸಿ ಯೋಜನಾ ನಿರ್ದೇಶಕ ಸೋಮಪ್ಪ ಕಡಕೋಳ ಹಾಗೂ ಜಿಲ್ಲೆಯ ಎಲ್ಲ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಪೌರಾಯುಕ್ತರು, ಕಾರ್ಯಪಾಲಕ ಅಭಿಯಂತರು, ಕಿರಿಯ ಎಂಜಿನಿಯರ್ ಹಾಗೂ ಇನ್ನಿತರ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.