ನೌಕರರ ಪಾದಯಾತ್ರೆ ತಡೆಗೆ ಖಂಡನೆ
ಹೋರಾಟ ತಡೆ ಜನತಂತ್ರಕ್ಕೆ ಮಾರಕ ಬೇಡಿಕೆ ಈಡೇರಿಸದಿದ್ದರೆ ಹೋರಾಟ
Team Udayavani, Dec 12, 2019, 10:42 AM IST
ಕಲಬುರಗಿ: ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಆರಂಭಿಸಬೇಕೆಂದು ನಡೆಯುತ್ತಿರುವ ಪಾದಯಾತ್ರೆಗೆ ತಡೆ ನೀಡಿರುವುದನ್ನು ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.
ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಾರುತಿ ಮಾನ್ಪಡೆ ನೇತೃತ್ವದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ, ಸಿಐಟಿಯು, ಎಸ್‌ಎಫ್‌ಐ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಅಂಗನವಾಡಿ ಕಾರ್ಯಕರ್ತೆಯರ ಹೋರಾಟ ದಮನ ಮಾಡಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.
ಸರ್ಕಾರಿ ಶಾಲೆಗಳ ಬದಲಿಗೆ ಅಂಗನವಾಡಿ ಕೇಂದ್ರಗಳಲ್ಲೇ ಎಲ್
ಕೆಜಿ, ಯುಕೆಜಿ ಪ್ರಾರಂಭಿಸುವಂತೆ ಅಂಗನವಾಡಿ ನೌಕರರ ಪ್ರಬಲ ಒತ್ತಾಯವಾಗಿದೆ. ಹೀಗಾಗಿ ಬೆಂಗಳೂರಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತುಮಕೂರಿನಿಂದ ನೌಕರರು ಪಾದಯಾತ್ರೆ ಕೈಗೊಂಡಿದ್ದಾರೆ. ಆದರೆ, ಸರ್ಕಾರ ಮಾರ್ಗ ಮಧ್ಯದಲ್ಲೇ ಪಾದಯಾತ್ರೆಗೆ ತಡೆವೊಡ್ಡಿ ಖಂಡನೀಯವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಮುಷ್ಕರದ ಬಗ್ಗೆ ಮೂರು ತಿಂಗಳ ಹಿಂದೆ ಮುಖ್ಯಮಂತ್ರಿಗಳ ಕಚೇರಿಗೆ ಪತ್ರ ತಲುಪಿಸಲಾಗಿದೆ. ಅಂಗನವಾಡಿ ನೌಕರರ ಬೇಡಿಕೆ ಈಡೇರಿಸುವುದು ಸರ್ಕಾರ ಮೂಲ ಕರ್ತವ್ಯವಾಗಿದೆ. ಬೇಡಿಕೆ ಈಡೇರಿಸುವುದು ಬಿಟ್ಟು ಪಾದಯಾತ್ರೆಗೆ ತಡೆದಿರುವುದು ಜನತಂತ್ರಕ್ಕೆ ಶೋಭೆತರುವಂತದ್ದಲ್ಲ.
ಸರ್ಕಾರದ ಕ್ರಮದಿಂದ ರಸ್ತೆಯಲ್ಲಿ ಚಳಿಗೆ ಅಂಗನವಾಡಿ ಕಾರ್ಯಕರ್ತೆಯರು ರಾತ್ರಿ ಕಳೆಯುವಂತೆ ಆಗಿದೆ. ಆದರೂ, ನೌಕರರು ತಮ್ಮ ಹೋರಾಟ ನಿಲ್ಲಿಸುವುದಿಲ್ಲ ಎಂದು ಹೇಳಿದರು.
ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಯನ್ನು ಸರ್ಕಾರ ಈಡೇರಿಸಲೇಬೇಕು. ಇಲ್ಲವಾದಲ್ಲಿ ಹಲವು ಸಂಘಟನೆಗಳಿಂದ ರಾಜ್ಯಾದ್ಯಂತ ಉಗ್ರ ಹೋರಾಟ ರೂಪಿಸಬೇಕಾಗುತ್ತಿದೆ ಎಂದು ಪ್ರತಿಭಟನನಿತರರು ಎಚ್ಚರಿಸಿದರು.
ಕೆಪಿಆರ್‌ಎಸ್ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಶಾಂತಪ್ಪ ಪಾಟೀಲ, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಗಂಗಮ್ಮ ಬಿರಾದಾರ, ಎಸ್ ಎಫ್‌ಐ ಜಿಲ್ಲಾ ಕಾರ್ಯದರ್ಶಿ ಸಿದ್ದಲಿಂಗ ಪಾಳಾ, ತಾಲೂಕಾಧ್ಯಕ್ಷ ವಿಶ್ವನಾಥ ರಾಗಿ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.