ಸಾಮಾಜಿಕ ಜಾಲತಾಣಗಳಿಗೆ ಎಚ್ಚರಿಕೆ
ಕಾಸಿಗಾಗಿ ಸುದ್ದಿ ಮೇಲೆ ನಿಗಾಹೊಣೆಗಾರಿಕೆಯಿಲ್ಲದೇ ಪೋಸ್ಟ್ ಮಾಡಬೇಡಿ
Team Udayavani, Apr 12, 2019, 12:52 PM IST
ಕಲಬುರಗಿ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಾಮಾಜಿಕ ಜಾಲತಾಣಗಳಮುಖ್ಯಸ್ಥರು ಮತ್ತು ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆಯಲ್ಲಿ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ, ಸಿಇಒ ಡಾ| ಪಿ. ರಾಜಾ, ಎಸ್ಪಿ ಯಡಾ ಮಾರ್ಟಿನ್‌ಮಾರ್ಬನ್ಯಾಂಗ್ ಇದ್ದರು.
ಕಲಬುರಗಿ: ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಅನೇಕ ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ಟ್ವಿಟರ್, ಯೂಟ್ಯೂಬ್ ಚಾನೆಲ್‌ಗಳಲ್ಲಿ ಅಭ್ಯರ್ಥಿ ಅಥವಾ ರಾಜಕೀಯ ಪಕ್ಷದ ಪರವಾಗಿ ಏಕಪಕ್ಷೀಯವಾಗಿ ಪ್ರಚಾರ ಮಾಡುತ್ತಿರುವುದು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಇದನ್ನು ಮುಂದುವರಿಸಿದಲ್ಲಿ ಸಂಬಂಧಿಸಿದ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥರು, ಪ್ರತಿನಿಧಿಗಳ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿ ಬಂಧಿಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಆರ್. ವೆಂಕಟೇಶಕುಮಾರ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥರಿಗೆ ಖಡಕ್
ಎಚ್ಚರಿಕೆ ನೀಡಿದರು.
ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥರು ಮತ್ತು ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡದ ಅವರು, ಯಾವುದೇ ಸಕ್ಷಮ ಪ್ರಾ ಧಿಕಾರದಿಂದ ಅನುಮತಿ ಪಡೆಯದೆ ಸಾಮಾಜಿಕ ಜಾಲತಾಣಗಳನ್ನು ನಿರ್ವಹಿಸುತ್ತಿರುವುದು ಕಾನೂನಿಗೆ ವಿರುದ್ಧವಾಗಿದೆ. ಅದರಲ್ಲಿಯೂ ರಾಜಕೀಯವಾಗಿ ಸಾರ್ವಜನಿಕರಿಂದ ಅಭಿಪ್ರಾಯ ಪಡೆದು ಸಮೂಹವಾಗಿ ಅಭಿಪ್ರಾಯ ವ್ಯಕ್ತಪಡಿಸುತ್ತ ಅಭ್ಯರ್ಥಿ ಅಥವಾ ರಾಜಕೀಯ ಪಕ್ಷದ ಪರವಾಗಿ ಸಾರ್ವಜನಿಕ ಅಭಿಪ್ರಾಯ ಮೂಡುವಂತೆ ಬಿಂಬಿಸುವುದು, ವ್ಯಕ್ತಿ ನಿಂದನೆ ಮಾಡುವುದು ಐ.ಪಿ.ಸಿ. ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದೆ ಎಂದು ವಿವರಣೆ ನೀಡಿದರು.
ಜಿಲ್ಲೆಯಲ್ಲಿ ಕಾಸಿಗಾಗಿ ಸುದ್ದಿ ಮೇಲೆ ನಿಗಾ ಇಡಲು ನೋಂದಾಯಿತ ಪತ್ರಿಕೆ, ಕೇಬಲ್ ವಾಹಿನಿಗಳು ಹಾಗೂ ಎಫ್. ಎಂ.ರೇಡಿಯೋಗಳ ಮೇಲೆ ಜಿಲ್ಲಾಡಳಿತ ಹದ್ದಿನ ಕಣ್ಣು ಇಟ್ಟಿದೆ. ಕಾಸಿಗಾಗಿ ಸುದ್ದಿ ಪ್ರಕಟಗೊಂಡಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಯಾವುದೇ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯದೆ ಲೋಗೋ, ಕ್ಯಾಮರಾ ಹಿಡಿದು ರಾಜಕೀಯ ನಾಯಕರಿಂದ ಹೇಳಿಕೆ, ಪ್ರತಿಹೇಳಿಕೆ ಪಡೆದು ಯಾವುದೇ ಹೊಣೆಗಾರಿಕೆಯಿಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಇಚ್ಚೆಯಂತೆ ಪೋಸ್ಟ್ ಮಾಡುವುದು ಶಾಂತಿ, ಸಾಮರಸ್ಯಕ್ಕೆ ಧಕ್ಕೆಯಾಗಿದೆ. ಕೂಡಲೆ ಇಂತಹ ಪೋಸ್ಟ್‌ಗಳ ಪ್ರಸಾರವನ್ನು ನಿರ್ಬಂಧಿಸಬೇಕು ಎಂದು ಸೂಚನೆ ನೀಡಿದರು.
ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ರಾಜಾ ಪಿ., ಜಿಲ್ಲಾ ಪೊಲೀಸ್ ಅಧೀಕ್ಷಕ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಯೋಗೇಶ, ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಮತ್ತು ಕಣ್ಗಾವಲು ಸಮಿತಿ ಸದಸ್ಯ ಕಾರ್ಯದರ್ಶಿ ಸಿದ್ದೇಶ್ವರಪ್ಪ ಜಿ.ಬಿ., ಜಿಲ್ಲೆಯ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥರು, ಪ್ರತಿನಿಧಿಗಳು ಇನ್ನಿತರರು ಇದ್ದರು.
ಮಧ್ಯರಾತ್ರಿಯೊಳಗೆ ಚುನಾವಣಾ ಕಂಟೆಂಟ್ ತೆರವುಗೊಳಿಸಿ
ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ರಾಜಕೀಯಕ್ಕೆ ಸಂಬಂ
ಧಿಸಿದಂತೆ ಯಾವುದೇ ಪೋಸ್ಟ್, ಆಡಿಯೋ, ವಿಡಿಯೋ, ಮೆಸೇಜ್
ಗಳನ್ನು ಈಗಾಗಲೆ ಅಪಲೋಡ್ ಮಾಡಿದಲ್ಲಿ ಅವುಗಳೆಲ್ಲವನ್ನು
ಮಧ್ಯರಾತ್ರಿ ಒಳಗಾಗಿ ತಮ್ಮ ಸಾಮಾಜಿಕ ಜಾಲತಾಣಗಳಿಂದ
ಡಿಲಿಟ್ ಮಾಡಬೇಕು. ನೀತಿ ಸಂಹಿತೆ ಮುಗಿಯುವವರೆಗೆ ಯಾವುದೇ
ರೀತಿಯ ಪ್ರಸಾರ ಮಾಡಬಾರದು. ಜಿಲ್ಲಾಡಳಿತ ಇದೆಲ್ಲವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇಡಲೆಂದೇ ಪ್ರತ್ಯೇಕ ಸೆಲ್ ರಚಿಸಲಾಗಿದೆ.
. ಆರ್. ವೆಂಕಟೇಶಕುಮಾರ,
ಜಿಲ್ಲಾ ಚುನಾವಣಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.