ಕನ್ನಡ ಸಾಹಿತ್ಯಕ್ಕೆ ಕಲ್ಯಾಣ ಮೇಲ್ಪಂಕ್ತಿ
28 ಜನರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಪುನಃ ಸಂಸ್ಕೃತಿ-ಚರಿತ್ರೆ ಕಟ್ಟೋಣ
Team Udayavani, Nov 14, 2019, 1:22 PM IST
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗವು ಜನಪದ ಕಲೆ, ಸಾಹಿತ್ಯದಿಂದ ಸಂಪದ್ಭರಿತವಾಗಿದೆ. ಕನ್ನಡ ಸಾಹಿತ್ಯಕ್ಕೆ ಇದೇ ಭಾಗ ಮೇಲ್ಪಂಕ್ತಿ ಹಾಕಿದೆ ಎಂದು ಮೈಸೂರು ಭಾಷಾ ಸಂಸ್ಥೆಯ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಯೋಜನಾ ನಿರ್ದೇಶಕ ಪ್ರೊ| ಕೆ.ಆರ್. ದುರ್ಗಾದಾಸ್ ಹೇಳಿದರು.
ಗುಲಬರ್ಗಾ ವಿಶ್ವವಿದ್ಯಾಲಯದ ಮಹಾತ್ಮಾಗಾಂಧಿ ಸಭಾಂಗಣದಲ್ಲಿ ಬುಧವಾರ ವಿಶ್ವವಿದ್ಯಾಲಯದ ಪ್ರಸಾರಾಂಗ ವತಿಯಿಂದ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.
ಚರಿತ್ರೆಯನ್ನು ಅವಲೋಕನ ಮಾಡಿದಾಗ ಈ ಭಾಗ ಸಾಂಸ್ಕೃತಿಕ ಸಂಪತ್ತಿನಿಂದ ಕೂಡಿದೆ. ಕವಿರಾಜಮಾರ್ಗ, ವಚನ, ದಾಸ ಸಾಹಿತ್ಯ ಇದೇ ಭಾಗದಿಂದ ಮೂಡಿ ಬಂದಿರುವುದು ಹೆಮ್ಮೆಯ ಸಂಗತಿ. ಈ ಎಲ್ಲ ಚರಿತ್ರೆ, ಇತಿಹಾಸ ಇಟ್ಟುಕೊಂಡು ಹಲಬುವ ಕಾರಣವಿಲ್ಲ. ಪುನಃ ನಮ್ಮ ಸಂಸ್ಕೃತಿ, ಚರಿತ್ರೆ ಕಟ್ಟಬೇಕಾಗಿದೆ ಎಂದು ಕರೆ ನೀಡಿದರು.
ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ| ಸತೀಶಕುಮಾರ ಹೊಸಮನಿ ಮಾತನಾಡಿ, ಪ್ರಶಸ್ತಿಗಳು ಮನುಷ್ಯರ ಜವಾಬ್ದಾರಿ ಹೆಚ್ಚಿಸುತ್ತವೆ. ನಮ್ಮಲ್ಲಿರುವ ಅಧ್ಯಯನಶೀಲತೆ ಹಾಗೂ ಪರಿಶ್ರಮ ಸಾಧನೆ ಉತ್ತುಂಗಕ್ಕೆ ಎಳೆದೊಯ್ಯಲಿದೆ ಎಂದರು. ಪ್ರಸಾರಾಂಗ ನಿರ್ದೇಶಕ ಪ್ರೊ| ಎಚ್.ಟಿ. ಪೋತೆ ಮಾತನಾಡಿ, ಗುಲಬರ್ಗಾ ವಿಶ್ವವಿದ್ಯಾಲಯ ಕಳೆದ 35 ವರ್ಷಗಳಿಂದ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಪ್ರಶಸ್ತಿ ಪ್ರದಾನ ಮಾಡುತ್ತಾ ಬರುತ್ತಿದೆ. ಈ ಬಾರಿ 28 ಜನರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುತ್ತಿದೆ ಎಂದರು.
ದಿ. ಜಯತೀರ್ಥ ರಾಜಪುರೋಹಿತ ಸ್ಮಾರಕ ದತ್ತಿ ರಾಜ್ಯಮಟ್ಟದ ಕನ್ನಡ ಕಥಾ ಸ್ಪರ್ಧೆಯಲ್ಲಿ ಪತ್ರಕರ್ತರಾದ ಡಾ| ಶಿವರಾಮ್ ಅಸುಂಡಿ ಅವರ “ಹೆಣದ ಮೇವು’ ಕೃತಿಗೆ ಮತ್ತು ಪ್ರಭುಲಿಂಗ ನೀಲೂರೆ ಅವರ “ಒಳಿತು ಮಾಡು ಮನುಜ’ ಕೃತಿಗೆ ಚಿನ್ನದ ಪದಕ ಹಾಗೂ ಗಾಯಿತ್ರಿ ಸುಂದರೇಶ್ ಅವರ “ಸೋಪ್ಪೀರಮ್ಮನ ಸಮಾ ಯ ಸುತ್ತ’ ಕೃತಿಗೆ ಬೆಳ್ಳಿ ಪದಕ ಮತ್ತು ಮುದಿರಾಜ್ ಬಾಣದ್ ಅವರ “ಹೇನು’ ಕೃತಿಗೆ ಕಂಚಿನ ಪದಕದೊಂದಿಗೆ 5,000 ರೂ., 3,000 ಹಾಗೂ 2,000 ರೂಪಾಯಿ ಗೌರವಧನ ಹಾಗೂ ಸ್ಮರಣಿಕೆ ಪದಕ ಪ್ರದಾನ ಮಾಡಲಾಯಿತು.
ಪ್ರಶಸ್ತಿ ವಿಜೇತರಿಗೆ ಕಲ್ಯಾಣ ಕರ್ನಾಟಕ ಪ್ರದೇಶದ ಕನ್ನಡ ಸೃಜನ, ಸೃಜನೇತರ ಲೇಖಕರು, ಜೀವನ ಕಥನ ಹಾಗೂ ಕನ್ನಡ ಪುಸ್ತಕ ಪ್ರಕಾಶಕರು, ಅನುವಾದ ಲೇಖಕರು, ಸಮಾಜ ವಿಜ್ಞಾನ, ಜನಪದ ಕಲಾವಿದರು ಹಾಗೂ ಚಿತ್ರ, ಶಿಲ್ಪಕಲಾವಿದರು, ಹಿಂದಿ, ಮರಾಠಿ, ಇಂಗ್ಲಿಷ್ ಹಾಗೂ ಉರ್ದು ಭಾಷಾ ಲೇಖಕರಿಗೆ ಪದಕ ಪ್ರದಾನ ಹಾಗೂ ಗೌರವ ಧನ ನೀಡಿ ಸನ್ಮಾನಿಸಲಾಯಿತು. ಕುಲಪತಿ ಪ್ರೊ| ಪರಿಮಳಾ ಅಂಬೇಕರ್ ಅಧ್ಯಕ್ಷತೆ ವಹಿಸಿದ್ದರು. ಕುಲಸಚಿವ ಪ್ರೊ|ಸಿ.ಸೋಮಶೇಖರ, ಮೌಲ್ಯಮಾಪನ ಕುಲಸಚಿವ ಪ್ರೊ| ಕೆ.ಎಂ.ಸಂಜೀವಕುಮಾರ, ವಿತ್ತಾಧಿ ಕಾರಿ ಬಿ. ವಿಜಯ, ಸಿಂಡಿಕೇಟ್ ಸದಸ್ಯ ಕೆ.ವಿಜಯಕುಮಾರ, ಡಾ|ಸಿದ್ದಲಿಂಗ ದಬ್ಟಾ, ಡಾ| ಹಣಮಂತ ಮೇಲಕೇರಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.