ಹೈಕ ಭಾಗದಲ್ಲಿ ಮೋಡ ಬಿತ್ತನೆ ಮಾಡಿ

ಎಚ್ಕೆಸಿಸಿಐ ಅಧ್ಯಕ್ಷ ಅಮರನಾಥ ಪಾಟೀಲ ಆಗ್ರಹ

Team Udayavani, Jul 28, 2019, 4:24 PM IST

Udayavani Kannada Newspaper

ಕಲಬುರಗಿ: ವ್ಯಾಪಕ ಮೋಡಗಳ ಸಂಚಲನ ಕಾಣುತ್ತಿದ್ದರೂ ಮಳೆ ಬಾರದೇ ಇರುವುದರಿಂದ ಸರ್ಕಾರ ಈ ಕೂಡಲೇ ಹೈದ್ರಾಬಾದ ಕರ್ನಾಟಕ ಭಾಗದಲ್ಲಿ ಮೋಡ ಬಿತ್ತನೆಗೆ ಮುಂದಾಗಬೇಕೆಂದು ಹೈದ್ರಾಬಾದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ (ಎಚ್ಕೆಸಿಸಿಐ) ಸಂಸ್ಥೆ ಆಗ್ರಹಿಸಿದೆ.

ಮಳೆಗಾಲ ಪ್ರಾರಂಭವಾಗಿ ಎರಡು ತಿಂಗಳಾದರೂ ಸಮರ್ಪಕ ಮಳೆ ಬಾರದೇ ಇರುವುದು, ಎಲ್ಲೆಲ್ಲೂ ನೀರಿಗೆ ಹಾಹಾಕಾರ ಇರುವುದರಿಂದ ಹಾಗೂ ಮೋಡಗಳು ದಟ್ಟವಾಗಿ ಹರಿದಾಡುತ್ತಿದ್ದರೂ ಮಳೆ ಸುರಿಯದ ಹಿನ್ನೆಲೆಯಲ್ಲಿ ಮೋಡ ಬಿತ್ತನೆಗೆ ಮುಖ್ಯಮಂತ್ರಿಗಳು ಮುಂದಾಗುವ ಮೂಲಕ ಹೈ.ಕ ಭಾಗಕ್ಕೆ ಸ್ಪಂದಿಸಬೇಕೆಂದು ಎಚ್ಕೆಸಿಸಿಐ ಅಧ್ಯಕ್ಷ ಅಮರನಾಥ ಪಾಟೀಲ, ಜಂಟಿ ಗೌರವ ಕಾರ್ಯದರ್ಶಿ ರವಿಕುಮಾರ ಸರಸಂಬಿ, ಎಪಿಎಂಸಿ ಸಮಿತಿ ಚೇರ್ಮನ್‌ ಶಿವರಾಜ ಇಂಗಿನಶೆಟ್ಟಿ ಆಗ್ರಹಿಸಿದ್ದಾರೆ.

ಸರಕಾರ ಶುಕ್ರವಾರದಿಂದ ಮೈಸೂರು ಜಿಲ್ಲೆಯಲ್ಲಿ ಮೋಡ ಬಿತ್ತನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿರುವುದು ಸ್ವಾಗತಾರ್ಹವಾಗಿದೆ. ಹೈದ್ರಾಬಾದ ಕರ್ನಾಟಕ ಪ್ರದೇಶದಲ್ಲಿ ಸಕಾಲಕ್ಕೆ ಮಳೆ ಬಾರದಿರುವುದರಿಂದ ಬರಗಾಲದ ಪರಿಸ್ಥಿತಿ ಉದ್ಭವಿಸಿದೆ. ಇದರ ಪರಿಣಾಮವಾಗಿ ರೈತರ ಕೃಷಿ ಚಟುವಟಿಕೆಗಳಾದ ಹೆಸರು, ಉದ್ದು ಮತ್ತು ತೊಗರಿ ಬೆಳೆಗಳ ಬಿತ್ತಣಿಕೆ ಕಾರ್ಯಗಳಲ್ಲಿ ಸಾಕಷ್ಟು ವಿಳಂಬವಾಗಿದೆ. ಆದುದ್ದರಿಂದ ಮೋಡ ಬಿತ್ತನೆ ಕೈಗೊಳ್ಳಬೇಕೆಂದು ಈ ಹಿಂದೆಯೂ ವಿನಂತಿಸಿಕೊಳ್ಳಲಾಗಿದೆ. ಆದರೆ ಯಾವುದೇ ನಿರ್ಣಯ ಕೈಗೊಳ್ಳದಿರುವುದು ಬೇಸರ ತರಿಸಿದೆ. ಆದ್ದರಿಂದ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಹೈದ್ರಾಬಾದ ಕರ್ನಾಟಕ ಪ್ರದೇಶದ ತಲಾ ಆದಾಯವು ಕೇವಲ 141ರೂ. ಇದ್ದು ಜೀವನ ನಿರ್ವಹಣೆ ಅಸಾಧ್ಯವಾಗಿದೆ. ಈ ಭಾಗದಲ್ಲಿ 303ಎಮ್‌.ಎಮ್‌. ಮಳೆಯಾಗುವ ನಿರೀಕ್ಷೆ ಇದ್ದರೂ ಕೇವಲ ಶೇ. 50ರಷ್ಟೇ ಮಳೆಯಾಗಿದೆ. ಪರಿಸ್ಥಿತಿ ಗಾಂಭಿರ್ಯ ಪರಿಗಣಿಸಿಲಾರದೆ ಸರಕಾರವು ಮೋಡ ಬಿತ್ತನೆ ಕಾರ್ಯಕ್ರಮವನ್ನು ಹೈದರಾಬಾದ್‌ ಕರ್ನಾಟಕ ಪ್ರದೇಶದಲ್ಲಿ ಆದ್ಯತೆ ಮೇರೆಗೆ ಕೈಗೊಳ್ಳುವುದರ ಬದಲಾಗಿ ಶೇ. 15 ಮಳೆ ಅಭಾವವಿರುವ ದಕ್ಷಿಣ ಕರ್ನಾಟಕ ಪ್ರದೇಶದಲ್ಲಿ ಕೈಗೊಳ್ಳುವ ಬಗ್ಗೆ ಘೋಷಿಸಿರುವುದು ವಿಷಾದಕರವಾದ ಸಂಗತಿ. ದಕ್ಷಿಣ ಕರ್ನಾಟಕದಲ್ಲಿ ಕೈಗೊಂಡ ಮೋಡ ಬಿತ್ತನೆ ಕ್ರಮಕ್ಕೆ ನಮ್ಮ ವಿರೋಧವಿಲ್ಲ. ಆದರೆ ಹೈ.ಕ. ಪ್ರದೇಶದ ವಸ್ತು ಸ್ಥಿತಿ ನಿರ್ಲಕ್ಷಿಸಿ ಅದರ ಬಗ್ಗೆ ಪ್ರಾಮುಖ್ಯತೆ ನೀಡದೇ ದಕ್ಷಿಣ ಕರ್ನಾಟಕ ಭಾಗಕ್ಕೆ ಆದ್ಯತೆ ನೀಡಿರುವುದು ಮಾತ್ರ ಆಶ್ಚರ್ಯಕರ ಸಂಗತಿಯಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಮಳೆ ನಾಪತ್ತೆ ಆಗಿರುವುದರಿಂದ ಜಲಾಶಯಗಳೆಲ್ಲ ಖಾಲಿಯಾಗಿವೆ. ಆದ್ದರಿಂದ ಮೋಡ ಬಿತ್ತನೆ ಈಗಲೇ ಮುಂದಾಗಬೇಕು. ಕಲಬುರಗಿ ವಿಮಾನ ನಿಲ್ದಾಣ ಜಾಗದಿಂದಲೇ ಮೋಡ ಬಿತ್ತುವ ಕೆಲಸ ಕೈಗೊಳ್ಳಬಹುದಾಗಿದೆ. ಹೈದ್ರಾಬಾದ ಕರ್ನಾಟಕ ಪ್ರದೇಶದ ಯಾದಗಿರಿ ಜಿಲ್ಲೆಯ ಸೂರಪುರದಲ್ಲಿ ರಡಾರ್‌ವನ್ನು ಸ್ಥಾಪಿಸಿ ಮೋಡ ಬಿತ್ತನೆಯ ಕಾರ್ಯಕ್ರಮವನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕೆಂದು ಎಚ್ಕೆಸಿಸಿಐ ಪದಾಧಿಕಾರಿಗಳು ವಿನಂತಿಸಿದ್ದಾರೆ

ಟಾಪ್ ನ್ಯೂಸ್

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

13

ಕಾಪು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನೂತನ ಭಂಡಿ ರಥ, ರಜತ ಗರುಡ ವಾಹನ, ಶೇಷ ವಾಹನ ಸಮರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

accident

Udupi: ಬೈಕ್‌ ಢಿಕ್ಕಿ; ವ್ಯಕ್ತಿಗೆ ಗಾಯ; ಪ್ರಕರಣ ದಾಖಲು

2

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ

complaint

Udupi: ಕಾರ್ಮಿಕನ ಬೈಕ್‌ ಕಳ್ಳತನ; ಪ್ರಕರಣ ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Australian Open:  ಹಿಂದೆ ಸರಿದ ಸಿಮೋನಾ ಹಾಲೆಪ್‌

Australian Open: ಹಿಂದೆ ಸರಿದ ಸಿಮೋನಾ ಹಾಲೆಪ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.