ಹಾಸ್ಟೆಲ್ ಸಮಸ್ಯೆ ಪರಿಹರಿಸಲು ಒತ್ತಾಯ
ಬೇಡಿಕೆ ಈಡೇರಿಸದಿದ್ದರೆ ಉಗ್ರ ಹೋರಾಟ
Team Udayavani, Jul 20, 2019, 12:49 PM IST
ಕಲಬುರಗಿ: ವಿದ್ಯಾರ್ಥಿ ವಸತಿ ನಿಲಯಗಳ ಸಮಸ್ಯೆ ಬಗೆಹರಿಸಬೇಕೆಂದು ಆಗ್ರಹಿಸಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಕಾರ್ಯಕರ್ತರು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕಲಬುರಗಿ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿ ವಸತಿ ನಿಲಯಗಳಲ್ಲಿ ಯಾವುದೇ ಸಮಸ್ಯೆ ಉದ್ಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಒತ್ತಾಯಿಸಿ ಗುರುವಾರ ಕರ್ನಾಟಕ ವಿದ್ಯಾರ್ಥಿ ಸಂಘಟನೆ ವತಿಯಿಂದ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ವಸತಿ ನಿಲಯಗಳಿಗೆ ಅರ್ಜಿ ಹಾಕುವ ಎಲ್ಲ ವಿದ್ಯಾರ್ಥಿಗಳಿಗೆ ಅವಕಾಶ ನೀಡಬೇಕೆಂದು ಹಿಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆದೇಶ ಹೊರಡಿಸಿದೆ. ಆದರೆ, ಇದು ಸರಿಯಾಗಿ ಅನುಷ್ಠಾನವಾಗುತ್ತಿಲ್ಲ. ವಿದ್ಯಾಭ್ಯಾಸ ಮಾಡುತ್ತಿರುವ ಕಾಲೇಜು ಹಾಗೂ ವಿದ್ಯಾರ್ಥಿ ನಿಲಯದ ದೂರದ ಅಂತರವೂ ಹೆಚ್ಚಿದ್ದು, ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಶೈಕ್ಷಣಿಕ ವರ್ಷ ಪ್ರಾರಂಭದ ಮುಂಚಿತವಾಗಿಯೇ ಮೆಟ್ರಿಕ್ ನಂತರದ ವೃತ್ತಿಪರ ಹಾಗೂ ಎಲ್ಲ ಪದವಿ ಶಿಕ್ಷಣ ವಿದ್ಯಾರ್ಥಿಗಳಿಗೆ ಹೊಸ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಶಿಫಾರಸ್ಸು ಮಾಡಬೇಕು. ಕಟ್ಟಡಗಳನ್ನಾದರೂ ಬಾಡಿಗೆ ಪಡೆದು ಅರ್ಜಿ ಹಾಕುವ ಎಲ್ಲ ವಿದ್ಯಾರ್ಥಿಗಳಿಗೆ ಮೂರ್‍ನಾಲ್ಕು ವಿದ್ಯಾರ್ಥಿಗಳು ಇರುವಂತೆ ಅಧ್ಯಯನ ಸ್ನೇಹಿ ಕೊಠಡಿಗಳ ವ್ಯವಸ್ಥೆ ಕಲ್ಪಿಸಬೇಕು. ಎಲ್ಲ ವಿದ್ಯಾರ್ಥಿ ನಿಲಯಗಳಲ್ಲಿ ಗ್ರಂಥಾಲಯದ ಸೌಕರ್ಯ ಕಲ್ಪಿಸಬೇಕೆಂದು ಆಗ್ರಹಿಸಿದರು.
ಗುಣಮಟ್ಟದ ಆಹಾರದ ಜತೆಗೆ ವಾರಕ್ಕೊಂದು ಮೊಟ್ಟೆ, ಸಿಹಿಯೂಟ, ಬಾಳೆಹಣ್ಣು ಹಾಗೂ 15 ದಿನಗಳಿಗೊಮ್ಮೆ ಮಾಂಸದೂಟ ನೀಡಬೇಕು. ವಸತಿ ನಿಲಯದ ಆವರಣ, ಶೌಚಾಲಯವನ್ನು ನಿತ್ಯ ಶುಚಿ ಮಾಡಬೇಕು. ಶುಚಿಗೊಳಿಸುವ ನೌಕರರನ್ನು ಸೂಕ್ತವಾದ ವೇತನದ ಜತೆ ಕಾಯಂ ನೌಕರರನ್ನಾಗಿ ನೇಮಿಸಿಕೊಳ್ಳಬೇಕೆಂದು ಪ್ರತಿಭಟನಾ ನಿರತರು ಹೇಳಿದರು.
ಐಟಿಐ ಮತ್ತು ಐಟಿಸಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವಸತಿ ನಿಲಯಗಳನ್ನು ಪ್ರಾರಂಭಿಸಬೇಕು. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ವೃತ್ತಿಪರ ವಸತಿ ನಿಲಯಗಳನ್ನು ಪ್ರಾರಂಭಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ತಕ್ಷಣವೇ ಈಡೇರಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಜಿಲ್ಲಾ ಸಂಚಾಲಕ ರಾಜೇಂದ್ರ ರಾಜವಾಳ, ಶರಣು ಕೋಲಿ, ನಾಗರಾಜ ಯಡ್ರಾಮಿ, ಕಾಶಿನಾಥ ಹಂಗರಗಿ, ವಿಜಯಕುಮಾರ ರಾಠೊಡ ಹಾಗೂ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.