ಲೋಕ ಅದಾಲತ್‌ನಲ್ಲಿ ಒಂದಾದ ಸತಿ-ಪತಿ
Team Udayavani, Jul 14, 2019, 12:29 PM IST
ಕಲಬುರಗಿ: ರಾಷೀóಯ ಮೆಗಾ ಲೋಕ ಅದಾಲತ್ ಅಂಗವಾಗಿ ರಾಜಿ ಸಂಧಾನ ಮೂಲಕ ವಿಚ್ಛೇದನದ ಎರಡು ಪ್ರಕರಣಗಳಲ್ಲಿ ಸತಿ-ಪತಿಗಳನ್ನು ಒಂದುಗೂಡಿಸಲಾಯಿತು.
ಕಲಬುರಗಿ: ರಾಷ್ಟ್ರೀಯ ಮೆಗಾ ಲೋಕ್ ಅದಾಲತ್ ಅಂಗವಾಗಿ ಜುಲೈ 1ರಿಂದ ರಾಜಿ ಸಂಧಾನದ ಮೂಲಕ ವಿವಿಧ ಬಗೆಯ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ಕಲಬುರಗಿ ಉಚ್ಛ ನ್ಯಾಯಾಲಯದಲ್ಲಿ ಶನಿವಾರ ಸತಿ-ಪತಿಗಳ ವಿಚ್ಚೇದನದ ಎರಡು ಪ್ರಕರಣಗಳಲ್ಲಿ ಗುರುರಾಜ ಮತ್ತು ಅಶ್ವಿನಿ ಅಲಿಯಾಸ್ ಅಂಬಿಕಾ ಹಾಗೂ ಶಂಕರ ಮತ್ತು ದ್ರೌಪತಿ ದಂಪತಿ ಒಂದಾದರು.
ಕಲಬುರಗಿ ಮೂಲದ ಗುರುರಾಜ ಮಲ್ಲೇಶಪ್ಪ ಧುಮಲೆ ತಮ್ಮ ಪತ್ನಿ ಅಶ್ವಿನಿ ಅಲಿಯಾಸ್ ಅಂಬಿಕಾರಿಂದ ವಿಚ್ಛೇದನ ಕೋರಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಅದೇ ರೀತಿ ಇನ್ನೊಂದು ಪ್ರಕರಣದಲ್ಲಿ ಭೂಪಾಲ ತೆಗನೂರ ನಿವಾಸಿ ದ್ರೌಪತಿ ಗಂಡ ಶಂಕರ ಅಂತರಗಂಗಿ ಕುಟುಂಬ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಉಚ್ಚ ನ್ಯಾಯಾಲಯದ ಮೊರೆ ಹೋಗಿದ್ದರು.
ಎರಡು ಪ್ರಕರಣಗಳನ್ನು ಅದಾಲತ್‌ನಲ್ಲಿ ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ನೇತೃತ್ವದ ನ್ಯಾಯಮೂರ್ತಿ ಅಶೋಕ ಜಿ. ನಿಜಗಣ್ಣನವರ್, ನ್ಯಾಯಮೂರ್ತಿ ಶ್ಯಾಮ್ ಪ್ರಸಾದ ಅವರನ್ನು ಒಳಗೊಂಡ ಪೀಠವು ಸತಿ-ಪತಿಗೆ ಬುದ್ಧಿ ಮಾತು ಹೇಳಿದರು.
ನ್ಯಾಯಾಧಿಧೀಶರ ಬುದ್ಧಿ ಮಾತಿಗೆ ಸಹಮತ ವ್ಯಕ್ತಪಡಿಸಿದ ಜೋಡಿಗಳು ಸಂತೋಷದಿಂದಲೇ ಪರಸ್ಪರ ಹೂಮಾಲೆ ಬದಲಾಯಿಸಿಕೊಂಡು ಸಿಹಿ ಹಂಚಿಕೊಂಡರು. ಈ ಮೂಲಕ ಪ್ರಕರಣ ಸುಖಾಂತ್ಯ ಕಂಡಿತು.
ಈ ವೇಳೆ ಮಾತನಾಡಿದ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಕುಟುಂಬ ನ್ಯಾಯಾಲಯದಲ್ಲಿ ಹಲವು ಜೋಡಿಗಳು ಬೇರೆಯಾಗುವುದನ್ನು ನಾವು ಕಂಡಿದ್ದೇವೆ. ಅದಕ್ಕೆ ತದ್ವಿರುದ್ಧವಾಗಿ ಶನಿವಾರ ಎರಡು ಜೋಡಿಗಳು ನ್ಯಾಯಾಲಯದಲ್ಲಿ ಸಂತೋಷದಿಂದ ಒಂದಾಗಿವೆ.
ಪರಸ್ಪರ ಸಂಸಾರ ಮಾಡಿಕೊಂಡು ಹೋಗುವುದಾಗಿ ಒಪ್ಪಿದ್ದರಿಂದ ಪ್ರಕರಣವನ್ನು ವಿಲೇವಾರಿ ಮಾಡಲಾಗಿದೆ.
ತಂದೆ-ತಾಯಿಗೆ ಸಿಹಿ ತಿನ್ನಿಸಿದ ಮಗ: ಕೂಲಿ ಕೆಲಸ ಮಾಡುವ ಕಲಬುರಗಿ ತಾಲೂಕಿನ ಕಡಣಿ ಗ್ರಾಮದ ಶಂಕರ ರಾಯಪ್ಪ ಅಂತರಗಂಗಿ ಅವರು ಭೂಪಾಲ ತೆಗನೂರ ಗ್ರಾಮದ ದ್ರೌಪತಿ ಅವರೊಂದಿಗೆ ವಿವಾಹ ಮಾಡಿಕೊಂಡು 11 ವರ್ಷದ ನಂತರ ಕೌಟುಂಬಿಕ ಕಾರಣವೊಡ್ಡಿ ವಿಚ್ಛೇದನ ಕೋರಿ ಕುಟುಂಬ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಕುಟುಂಬ ನ್ಯಾಯಾಲಯವು ಇವರಂತೆ ತೀರ್ಪು ನೀಡಿತು. ಸ್ಥಳೀಯ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಪತ್ನಿ ದ್ರೌಪತಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಒಂಭತ್ತು ವರ್ಷದ ವೈವಾಹಿಕ ಜೀವನಕ್ಕೆ ಇಬ್ಬರು ಮಕ್ಕಳಿದ್ದಾರೆ. ಮೆಗಾ ಅದಾಲತ್‌ನಲ್ಲಿ ತಂದೆ-ತಾಯಿ ಒಂದಾಗಿದ್ದಕ್ಕೆ ಮಗ ಶರಣು ಹೆತ್ತವರಿಗೆ ಸಿಹಿ ತಿನ್ನಿಸುತ್ತಿದ್ದಂತೆ ನ್ಯಾಯಾಲಯದಲ್ಲಿ ಚಪ್ಪಾಳೆ ಸುರಿಮಳೆ ಸುರಿಯಿತು.
ಇನ್ನೊಂದು ಪ್ರಕರಣದಲ್ಲಿ ಖಾಸಗಿ ಉದ್ಯೋಗ ಮಾಡಿಕೊಂಡಿರುವ ಕಲಬುರಗಿ ಮೂಲದ ಗುರುರಾಜ ಮಲ್ಲೇಶಪ್ಪ ಧುಮಲೆ ಕೌಟುಂಬಿಕ ಕಾರಣ ನೀಡಿ ಸ್ಥಳೀಯ ನಿವಾಸಿ ಅಶ್ವಿನಿ ಅಲಿಯಾಸ್ ಅಂಬಿಕಾ ಅವರಿಂದ ವಿಚ್ಛೇದನ ಕೋರಿ ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದರು.
ಉಚ್ಛ ನ್ಯಾಯಾಲಯದ ಹೆಚ್ಚುವರಿ ರಿಜಿಸ್ಟ್ರಾರ್ ಜನರಲ್ ಕೆ.ವಿ.ಅಸೋಡೆ, ನ್ಯಾಯಿಕ ರಿಜಿಸ್ಟ್ರಾರ್ ಶ್ರೀನಿವಾಸ ಸುವರ್ಣಾ, ಕಲಬುರಗಿ ಹೈಕೋರ್ಟ್ ಪೀಠದ ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಗೋಮತಿ ರಾಘವೇಂದ್ರ, ಹೈಕೋರ್ಟ್ ಘಟಕದ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಅರುಣ ಕುಮಾರ ಕಿಣ್ಣಿ, ಉಪಾಧ್ಯಕ್ಷ ಸುಧೀರ ಸಿಂಗ್ ವಿಜಯಪುರ, ಕಾರ್ಯದರ್ಶಿ ಬಿ.ಸಿ. ಜಾಕಾ ಸೇರಿದಂತೆ ವಾದಿ-ಪ್ರತಿವಾದಗಳ ವಕೀಲರು ಹಾಗೂ ಸಿಬ್ಬಂದಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.