ದೇಶದ ಸಂಕಟಗಳಿಗೆ ಮೋದಿ ಕಾರಣ
ದೇಶದಲ್ಲಿ ಶೈಕ್ಷಣಿಕ ಅಭಿವೃದ್ಧಿ- ಆಣೆಕಟ್ಟು ನಿರ್ಮಾಣ ಮಾಡಿದವರ್ಯಾರು ಮೋದಿನಾ?: ಖರ್ಗೆ
Team Udayavani, Apr 12, 2019, 10:41 AM IST
ಕಲಬುರಗಿ: ಚಾಂದ್ ಬೀಬಿ ಬಿ.ಎಡ್. ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಅಲ್ಪಸಂಖ್ಯಾತ ಪರಿವರ್ತನಾ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಮಾತನಾಡಿದರು.
ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕಳೆದ ಐದು ವರ್ಷಗಳಲ್ಲಿ ದೇಶ ಅನುಭವಿಸಿದ ಸಂಕಷ್ಟಗಳ ಬಗ್ಗೆ ಜನತೆಗೆ ಅರಿವಿದೆ. ಮುಂದಿನ ದಿನಗಳಲ್ಲಿ ಮತ್ತೆ ಇಂತಹ ಸಂಕಟಗಳು ಬಂದೊದಗದಂತೆ ತಡೆಯುವ ಶಕ್ತಿ ನಿಮಗೆ ಮಾತ್ರವೇ ಇದೆ. ಆ ಶಕ್ತಿಯನ್ನು ಕಾಂಗ್ರೆಸ್‌ಗೆ ಮತ ಚಲಾಯಿಸುವ ಮೂಲಕ ನಿರೂಪಿಸಿ ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ| ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ನಗರದ ಚಾಂದ್ ಬೀಬಿ ಬಿ.ಎಡ್.ಕಾಲೇಜಿನಲ್ಲಿ ಆಯೋಜಿಸಿದ್ದ ಅಲ್ಪಸಂಖ್ಯಾತ ಪರಿವರ್ತನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಧಾನಿ ಮೋದಿ ಪ್ರಪಂಚದ ವಿದ್ಯಮಾನಗಳ ಬಗ್ಗೆ ಮಾತನಾಡುತ್ತಾರೆ. ಆದರೆ, ದೇಶದಲ್ಲಿ ಏನು ನಡೆಯುತ್ತಿದೆ ಎನ್ನುವುದರ ಬಗ್ಗೆ ಎಲ್ಲೂ
ಮಾತನಾಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ 70 ವರ್ಷಗಳಲ್ಲಿ ಏನು ಮಾಡಿದೆ ಎಂದು ಮೋದಿ ಕೇಳುತ್ತಾರೆ. ದೇಶದಲ್ಲಿ ರಸ್ತೆಗಳು, ಅಣೆಕಟ್ಟು ನಿರ್ಮಾಣ, ಶೈಕ್ಷಣಿಕ ಅಭಿವೃದ್ಧಿ ಮಾಡಿದ್ದು ಯಾರು? ಮೋದಿನಾ? ಎಂದು ಕೇಳಿದ ಅವರು, ಪ್ರಧಾನಿಯಾದ ಬಳಿಕ
ನೀವೇನು ಮಾಡಿದ್ದೀರಿ ಹೇಳಿ ಎಂದು ಪ್ರಶ್ನಿಸಿದರು. ಸೈನಿಕರ ಹೆಸರು ಹೇಳಿಕೊಂಡು ಮತ ಕೇಳುವ ಮೋದಿ, ದೇಶದ ಸ್ವಾತಂತ್ರ್ಯಕ್ಕಾಗಿ ಬಿಜೆಪಿಯ ಎಷ್ಟು ಜನ ಹುತಾತ್ಮರಾಗಿದ್ದಾರೆ ಎನ್ನುವುದನ್ನು ತಿಳಿಸಲಿ. ಬರೀ ಸುಳ್ಳುಗಳ ಮೂಲಕ ಜನರನ್ನು ಮರಳು ಮಾಡಲು ಆಗುವುದಿಲ್ಲ. ಮೋದಿಯ ಸುಳ್ಳುಗಳನ್ನು ಜನತೆ ಸಹ ಕೇಳುವುದಿಲ್ಲ. ಈ ಬಾರಿ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಲಬುರಗಿ ಉತ್ತರ ಮತಕ್ಷೇತ್ರದ ಶಾಸಕಿ ಖನೀಜ್ ಫಾತೀಮಾ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Padubidri: ಮೈದಾನದ ಅಂಚಿನಲ್ಲಿ ಚರಂಡಿ ನಿರ್ಮಾಣ; ಕ್ರೀಡಾಪ್ರೇಮಿಗಳ ಆರೋಪ
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Manipal: ಇಲ್ಲಿ ನಿರಾಳವಾಗಿ ನಡೆಯಲೂ ಭಯ!; ಪಾತ್‌ನಲ್ಲಿ ತರಗೆಲೆ, ಗಿಡಗಂಟಿ, ಪೊದರಿನ ಆತಂಕ
Canada Court:ಹರ್ದೀಪ್ ನಿಜ್ಜರ್ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು
Belman: ಅಣೆಕಟ್ಟಿನ ಹಲಗೆ ಅಳವಡಿಕೆ; ತುಂಬಿದ ಶಾಂಭವಿ ನದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.