ಈಗ ಸೋಲು-ಗೆಲುವಿನ ಲೆಕ್ಕಾಚಾರ
ಹಿಂದಿನ ಚುನಾವಣೆಗಳ ಸರಾಸರಿ ಮತದಾನ ಅವಲೋಕನ •ಕಳೆದ ಸಲಕ್ಕಿಂತ ಶೇ. 3ರಷ್ಟು ಮತದಾನ ಹೆಚ್ಚಳ
Team Udayavani, Apr 25, 2019, 10:57 AM IST
ಕಲಬುರಗಿ: ತೀವ್ರ ಜಿದ್ದಾಜಿದ್ದಿ ಕಂಡ ಕಲಬುರಗಿ ಲೋಕಸಭಾ ಮೀಸಲು ಕ್ಷೇತ್ರದ ಚುನಾವಣೆಯಲ್ಲಿ ಒಟ್ಟಾರೆ ಅಂತಿಮವಾಗಿ ಶೇ. 60.88 ಮತದಾನವಾಗಿದ್ದು, ಈ ಸರಾಸರಿ ಮತದಾನ ಆಧಾರದ ಮೇಲೆ ಲೆಕ್ಕಾಚಾರಗಳು ಹತ್ತಾರು ನಿಟ್ಟಿನಲ್ಲಿ ನಡೆದಿವೆ.
ಕಳೆದ 2014ಕ್ಕಿಂತ ಈ ಸಲ ಮೂರು ಪ್ರತಿಶತ ಮತದಾನ ಹೆಚ್ಚಳವಾಗಿರುವುದು ತಮಗೆ ಅನುಕೂಲ ಎನ್ನುವುದಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಉಲ್ಲೇಖೀಸುತ್ತಿವೆ. ಯಾವ್ಯಾವ ಕ್ಷೇತ್ರದಲ್ಲಿ ಶೇಕಡಾವಾರು ಮತದಾನ ಪ್ರಮಾಣ ಎಷ್ಟಾಗಿದೆ ಎನ್ನುವುದನ್ನು ಮುಂದಿಟ್ಟುಕೊಂಡು ಸೋಲು-ಗೆಲುವಿನ ಲೆಕ್ಕಾಚಾರ ಆರಂಭವಾಗಿದೆ.
2014ರಲ್ಲಿ 10 ಲಕ್ಷ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರೆ ಪ್ರಸಕ್ತ 2019ರ ಚುನಾವಣೆಯಲ್ಲಿ ಒಟ್ಟಾರೆ 11.84 ಲಕ್ಷ ಮತದಾರರು ಹಕ್ಕು ಚಲಾಯಿಸಿದ್ದಾರೆ. 1.84 ಮತದಾರರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹೊಸ ಮತದಾರರು ಇದ್ದಾರೆ. ಹೀಗಾಗಿ ಈ ಮತಗಳು ಬಿಜೆಪಿಗೆ ಸಿಂಹಪಾಲು ದೊರಕುತ್ತವೆ ಎನ್ನುವ ಲೆಕ್ಕಾಚಾರವನ್ನು ಹಾಕಲಾಗುತ್ತಿದೆ.
ನಗರಕ್ಕಿಂತ ಗ್ರಾಮೀಣ ಭಾಗದಲ್ಲೇ ಹೆಚ್ಚಿನ ಮತದಾನವಾಗಿದೆ. ಬಿಸಿಲನ್ನೂ ಲೆಕ್ಕಿಸದೇ ಮತದಾರರು ಉತ್ಸಾಹದಿಂದ ಹಕ್ಕು ಚಲಾಯಿಸಿದ್ದಾರೆ. ಮೊದಲ ಬಾರಿಗೆ ಮತ ಚಲಾಯಿಸಿದವರಂತೂ ವ್ಯಾಪಕ ಸಂತೋಷ ವ್ಯಕ್ತಪಡಿಸಿದ್ದಾರೆ.
ಅತಿ ಹೆಚ್ಚಿನ ಮತದಾನ ಸೇಡಂ ವಿಧಾನಸಭೆ ಕ್ಷೇತ್ರದಲ್ಲಿ ಅಂದರೆ ಶೇ. 68ರಷ್ಟು ಮತದಾನವಾಗಿದೆ. ಅತಿ ಕಡಿಮೆ ಮತದಾನ ಕಲಬುರಗಿ ಉತ್ತರ ಮತಕ್ಷೇತ್ರದಲ್ಲಿ ಅಂದರೆ ಶೇ. 56.89 ಪ್ರತಿಶತ ಮತದಾನವಾಗಿದೆ. ಉಳಿದಂತೆ ಅಫಜಲಪುರ ವಿಧಾನಸಭೆ ಕ್ಷೇತ್ರದಲ್ಲಿ ಶೇ. 62.54, ಜೇವರ್ಗಿ ವಿಧಾನಸಭೆ ಕ್ಷೇತ್ರದಲ್ಲಿ ಶೇ. 61.87, ಗುರುಮಿಠಕಲ್ದಲ್ಲಿ ಶೇ. 60.27, ಚಿತ್ತಾಪುರದಲ್ಲಿ ಶೇ. 61.15, ಸೇಡಂ ವಿಧಾನಸಭೆ ಕ್ಷೇತ್ರದಲ್ಲಿ ಶೇ. 68.33, ಕಲಬುರಗಿ ಗ್ರಾಮೀಣದಲ್ಲಿ ಶೇ. 60.82, ಕಲಬುರಗಿ ದಕ್ಷಿಣದಲ್ಲಿ ಶೇ. 57.04, ಕಲಬುರಗಿ ಉತ್ತರ ಮತಕ್ಷೇತ್ರದಲ್ಲಿ ಶೇ. 56.89 ಮತದಾನವಾಗಿದೆ. ಒಟ್ಟಾರೆ ಜಿಲ್ಲೆಯಾದ್ಯಂತ ಶೇ. 60.88 ಮತದಾನವಾಗಿದೆ.
ಕಳೆದ ವರ್ಷ (2018) ನಡೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಶೇ. 62.86ರಷ್ಟು ಮತದಾನವಾಗಿತ್ತು. ಈಗ ಅದರ ಸಮೀಪವಾಗಿರುವುದು ಹಲವು ಆಶ್ಚರ್ಯಗಳಿಗೆ ಫಲಿತಾಂಶ ಕಾರಣವಾಗಲಿದೆ ಎನ್ನಲಾಗುತ್ತಿದೆ. ರಾಜಕೀಯ ನೇತಾರರು ಹಾಗೂ ಪಕ್ಷದ ಕಾರ್ಯಕರ್ತರು ಏ. 23ರಂದು ನಡೆದ ಲೋಕಸಭೆ ಚುನಾವಣೆಯ ಮತದಾನ ಸರಾಸರಿ ಪಟ್ಟಿಯನ್ನಿಟ್ಟುಕೊಂಡು ತಮ್ಮದೇಯಾದ ನಿಟ್ಟಿನಲ್ಲಿ ವ್ಯಾಖ್ಯಾನಿಸುತ್ತಿದ್ದಾರೆ. ಇದೇ ಆಧಾರದ ಮೇಲೆ ಬೆಟ್ಟಿಂಗ್ ಕೂಡಾ ನಡೆದಿದೆ. ಬಿಸಿಲಿನ ನಡುವೆ ಮತದಾನ ನಡೆದಿದ್ದರಿಂದ ಮೇ 23ರವರೆಗೆ ಬಿಸಿ-ಬಿಸಿಯಾಗಿ ಚರ್ಚೆ ನಡೆಯಲಿದೆ ಎನ್ನಲಾಗುತ್ತಿದೆ.
ಗುರುಮಠಕಲ್ ಕ್ಷೇತ್ರದಲ್ಲಿ ಮಹಿಳೆಯರದ್ದೇ ಹೆಚ್ಚು ಮತದಾನ
ಕಲಬುರಗಿ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಯ ಗುರುಮಠಕಲ್ ವಿಧಾನಸಭಾ ಕ್ಷೇತ್ರದಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಹಕ್ಕು ಚಲಾಯಿಸಿದ್ದಾರೆ. 73714 ಪುರುಷರು ಮತದಾನ ಮಾಡಿದ್ದರೆ 74062 ಮಹಿಳೆಯರು ಹಕ್ಕು ಚಲಾಯಿಸಿದ್ದಾರೆ. ಅಂದರೆ ಪುರುಷರಿಗಿಂತ 348 ಮಹಿಳೆಯರು ಹೆಚ್ಚಿಗೆ ಮತ ಚಲಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ
Mangaluru; ಟ್ಯಾಂಕರ್ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ
ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.