ಕಾಂಗ್ರೆಸ್-ಬಿಜೆಪಿಗೆ ಎಸ್‌ಯುಸಿಐ ಎದುರಾಳಿ: ಆರ್‌ಕೆ
Team Udayavani, Apr 6, 2019, 2:37 PM IST
ವಾಡಿ: ಲೋಕಸಭೆ ಚುನಾವಣೆ ನಿಮಿತ್ತ ಪಟ್ಟಣದ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ಕಾರ್ಯಾಲಯದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕರ್ತರ ಸಭೆಯಲ್ಲಿ ಕಾಮ್ರೇಡ್ ವೀರಭದ್ರಪ್ಪ ಆರ್.ಕೆ. ಮಾತನಾಡಿದರು.
ವಾಡಿ: ಕಲಬುರಗಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಗೆ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷ ಪ್ರಬಲ
ಎದುರಾಳಿಯಾಗಿದೆ ಎಂದು ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಎಸ್ ಯುಸಿಐ) ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಸಮಿತಿ
ಸದಸ್ಯ ಕಾಮ್ರೇಡ್ ವೀರಭದ್ರಪ್ಪ ಆರ್.ಕೆ. ಹೇಳಿದರು.
ಪಟ್ಟಣದ ಎಸ್‌ಯುಸಿಐ (ಸಿ) ಪಕ್ಷದ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕರ್ತರ ಸಭೆ ಉದ್ದೇಶಿಸಿ ಅವರು
ಮಾತನಾಡಿದರು. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ದೇಶಾದ್ಯಂತ ಬಿಜೆಪಿಯ ಕೋಮುವಾದಿ ಆಡಳಿತಕ್ಕೆ ಕಾಂಗ್ರೆಸ್
ಪರ್ಯಾಯ ಎಂಬಂತೆ ಬಿಂಬಿಸಲಾಗುತ್ತಿದೆ. ದೇಶವನ್ನು ಆರು ದಶಕಗಳ ಕಾಲ ಆಳಿದ ಕಾಂಗ್ರೆಸ್ ಪಕ್ಷವೇ ಇಂದಿನ ಸಮಸ್ಯೆಗಳಿಗೆ
ಮೂಲ ಕಾರಣ ಎನ್ನುವ ಸತ್ಯವನ್ನು ವ್ಯವಸ್ಥಿತವಾಗಿ ಮರೆಮಾಚಲಾಗುತ್ತಿದೆ ಎಂದರು.
ಹಿಂದಿನ ಯುಪಿಎ ಆಡಳಿತದಲ್ಲಾದ ಭ್ರಷ್ಟಾಚಾರದ ಹಗರಣಗಳನ್ನು ಮರೆಯಲು ಸಾಧ್ಯವಿಲ್ಲ. ಕಾಂಗ್ರೆಸ್ ನೈಜವಾಗಿ
ಜನತಾಂತ್ರಿಕ-ಉದಾರವಾದಿ ಧೋರಣೆ ಪಕ್ಷವಲ್ಲ. ದೇಶದಲ್ಲಿ ತುರ್ತು ಪರಸ್ಥಿತಿ ಜಾರಿಗೊಳಿಸಿದ್ದು ಇದೇ ಕಾಂಗ್ರೆಸ್ ಪಕ್ಷ.
ಜನರ ಹಕ್ಕನ್ನು ದಮನಗೊಳಿಸುವ ಅನೇಕ ಕಾಯ್ದೆಗಳನ್ನು ಕಾಂಗ್ರೆಸ್ ಜಾರಿಗೆ ಎಂದಿದೆ ಎಂದು ದೂರಿದರು.
ಅಚ್ಚೇ ದಿನ್ ತರುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದ ಮೋದಿ ನೇತೃತ್ವದ ಬಿಜೆಪಿ ಸರಕಾರ, ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸುವ ವಾಗ್ಧಾನ ಮಾಡಿತ್ತು. ನೋಟು ಅಮಾನ್ಯೀಕರಣ ಮತ್ತು ಜಿಎಸ್‌ಟಿಯಿಂದಾಗಿ ಮಿಲಿಯಾಂತರ ಉದ್ಯೋಗಗಳು ನಾಶವಾಗಿವೆ. ಸಣ್ಣ ಉದ್ಯಮಗಳು ದಿವಾಳಿಯಾಗಿವೆ. ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ತಾನೂ ತಿನ್ನಲ್ಲ, ತಿನ್ನೋದಕ್ಕೂ ಬಿಡಲ್ಲ ಎಂದ ಮೋದಿ ಪಕ್ಷ ಅಧಿಕಾರದಲ್ಲಿ ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ದೊಡ್ಡ ಅವ್ಯವಹಾರ ನಡೆಸಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ
ತೆರಿಗೆಯಿಂದ ಲಕ್ಷಾಂತರ ಕೋಟಿ ರೂ. ಲೂಟಿ ಹೊಡೆದಿದೆ. ಇಂತಹ ಭ್ರಷ್ಟ ಪಕ್ಷಗಳು ಮತ್ತೆ ಅಧಿಕಾರಕ್ಕೆ ಬರದಂತೆ ತಡೆಯಬೇಕು ಎಂದು ಹೇಳಿದರು.
ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷದ ಮುಖಂಡರಾದ ಮಲ್ಲಿನಾಥ ಹುಂಡೇಕಲ್, ರಾಘವೇಂದ್ರ ಅಲ್ಲಿಪುರ, ಶರಣು ವಿ.ಕೆ, ಗೌತಮ ಪರತೂರಕರ, ಶರಣು ಹೇರೂರ, ಗುಂಡಣ್ಣ ಎಂ.ಕೆ, ವಿಠ್ಠಲ ರಾಠೊಡ, ಮಲ್ಲಣ್ಣ ದಂಡಬಾ, ಯೇಶಪ್ಪ ಕೇದಾರ, ಶ್ರೀಶರಣ
ಹೊಸಮನಿ, ರಾಜು ಒಡೆಯರಾಜ, ನಂದೀಶ ಪೋದ್ದಾರ, ಅರುಣಕುಮಾರ ಹಿರೆಬೆಣ್ಣೂರ, ಅವಿನಾಶ ಒಡೆರಾಜ, ವೆಂಕಟೇಶ ಮತ್ತಿತರರು ಪಾಲ್ಗೊಂಡಿದ್ದರು.
ರಾಜ್ಯ ಸೇರಿದಂತೆ ದೇಶದ ಒಟ್ಟು 20 ರಾಜ್ಯಗಳ 119 ಸ್ಥಾನಗಳಲ್ಲಿ
ಎಸ್‌ಯುಸಿಐ ಪಕ್ಷದ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಲಬುರಗಿಯಿಂದ ಸ್ಪರ್ಧಿಸಿರುವ ನಮ್ಮ ಅಭ್ಯರ್ಥಿ ಎಸ್.ಎಂ.
ಶರ್ಮಾ ಗೆಲುವಿಗಾಗಿ ಕಾರ್ಯರ್ತರು ಪ್ರಚಾರ ಕಣಕ್ಕೆ ನುಗ್ಗಬೇಕು.
ಎಸ್‌ಯುಸಿಐ ಪಕ್ಷ ಜಿಲ್ಲೆಯಾದ್ಯಂತ ಕಟ್ಟಿರುವ ಜನಪರ ಹೋರಾಟಗಳನ್ನು ಜನತೆಗೆ ಮನವರಿಕೆ ಮಾಡಬೇಕು. .ವೀರಭದ್ರಪ್ಪ ಆರ್.ಕೆ.,
ಎಸ್‌ಯುಸಿಐ ಸದಸ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.