ಕ್ಷೇತ್ರಕ್ಕೆ ಮೋದಿ ಕೊಡುಗೆ ಏನು?
ಉದ್ಯಮಿಗಳ ಸಾಲ ಮನ್ನಾ ಮಾಡಿದ್ದೇ ಸಾಧನೆರಿಮೋಟ್ ಬಟನ್ ಒತ್ತಲು ಮಾತ್ರ ಆಗಮನ
Team Udayavani, Apr 5, 2019, 11:51 AM IST
ಕಲಬುರಗಿ: ಕಲಬುರಗಿ ಲೋಕಸಭೆ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸುವ ವೇಳೆ ಹಮ್ಮಿಕೊಳ್ಳಲಾಗಿದ್ದ ಬೃಹತ್ ಮೆರವಣಿಗೆಯಲ್ಲಿ ಅಭ್ಯರ್ಥಿ ಡಾ| ಮಲ್ಲಿಕಾರ್ಜುನ ಖರ್ಗೆ, ಬೀದರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಈಶ್ವರ ಖಂಡ್ರೆ ತೆರೆದ ಜೀಪಿನಲ್ಲಿ ತೆರಳಿದರು.
ಕಲಬುರಗಿ: ನಾನು ಕಲಬುರಗಿಯಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿ ಜನರಲ್ಲಿ ಮತ ಕೇಳುತ್ತೇನೆ. ಐದು ವರ್ಷಗಳ ಕಾಲ ನಿಮ್ಮ ಅಧಿಕಾರದಲ್ಲಿ ಕಲಬುರಗಿಗೆ ಯಾವುದೇ ಕೊಡುಗೆ ನೀಡದ ನೀವು, ನಿಮ್ಮ ಬಿಜೆಪಿ ಅಭ್ಯರ್ಥಿಗೆ ಯಾವ ಆಧಾರದ ಮೇಲೆ ಮತ ಕೇಳುತ್ತೀರಿ ಎಂದು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ, ಕಾಂಗ್ರೆಸ್ ಸಂಸದೀಯ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರಶ್ನಿಸಿದರು.
ಕಲಬುರಗಿ ಲೋಕಸಭೆ ಮೀಸಲು ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ಗೆಲುವು ಬಯಸಿ ಮಲ್ಲಿಕಾರ್ಜುನ ಖರ್ಗೆ ಗುರುವಾರ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ವೇಳೆ ಹಮ್ಮಿಕೊಳ್ಳಲಾಗಿದ್ದ ಬೃಹತ್ ಮೆರವಣಿಗೆಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಅವರು ಮಾತನಾಡಿದರು.
ಹಿಂದುಳಿದ ಹೈದ್ರಾಬಾದ ಕರ್ನಾಟಕ ಪ್ರದೇಶಕ್ಕೆ 371ನೇ (ಜೆ) ಕಲಂ ಜಾರಿ ಮಾಡಿ ಕಾಂಗ್ರೆಸ್ ಅಭಿವೃದ್ಧಿಗೆ ಮುನ್ನುಡಿ ಬರೆದಿದೆ. ಈ ಭಾಗದಲ್ಲಿ 371ನೇ (ಜೆ)ಕಲಂ ಅನುಷ್ಠಾನವಾದ ನಂತರ 31 ಸಾವಿರ ಯುವಕರಿಗೆ ನೌಕರಿ ಸಿಕ್ಕಿದೆ. ಕಲಬುರಗಿಗೆ ನಾನು ವಿಮಾನ ನಿಲ್ದಾಣ, ಕೇಂದ್ರೀಯ ವಿಶ್ವವಿದ್ಯಾಲಯ, ಇಎಸ್‌ಐ ಆಸ್ಪತ್ರೆ, ಜಯದೇವ ಹೃದ್ರೋಗ ಆಸ್ಪತ್ರೆ, ರಾಷ್ಟ್ರೀಯ ಹೆದ್ದಾರಿಗಳು, ಸ್ಕಿಲ್ ಟ್ರೈನಿಂಗ್ ಸಂಸ್ಥೆ ಹೀಗೆ ಹತ್ತು-ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಇದೇ ಕೆಲಸವನ್ನು ಮುಂದಿಟ್ಟುಕೊಂಡು ಜನತೆಯಿಂದ ಮತ ಕೇಳುತ್ತೇನೆ ಎಂದರು.
ನಾವು ಬೀದರ-ಕಲಬುರಗಿ ರೈಲ್ವೆ ಮಾರ್ಗವನ್ನು ಆರಂಭ ಮಾಡಿದ್ದೀವಿ. ನೀವು ಸ್ವಲ್ಪ ಕೆಲಸ ಮಾಡಿ ನಾವೇ ಮಾಡಿದ್ದು ಎಂದು ಹೇಳಿಕೊಳ್ಳುತ್ತಿದ್ದೀರಿ. ಕಲಬುರಗಿಗೆ ಬಂದು ಎನ್‌ವಿ ಗ್ರೌಂಡ್‌ನಲ್ಲಿ ನಿಂತು ಬೆಂಗಳೂರು, ಹುಬ್ಬಳ್ಳಿ, ರಾಯಚೂರು ಕೆಲಸಗಳಿಗೆ ಇಲ್ಲಿ ಬಟನ್ ಒತ್ತುತ್ತಿರಿ. ಇಲ್ಲಿ ಬಂದು ಬರೀ ಭಾಷಣ ಮಾಡುತ್ತೀರಿ. ಪ್ರಧಾನಿ ಮೋದಿ ಅವರೇ ನಿಮ್ಮ ಐದು ವರ್ಷ ಅಧಿಕಾರಾವಧಿಯಲ್ಲಿ ಕಲಬುರಗಿ ಮತ್ತು ಹೈದ್ರಾಬಾದ ಕರ್ನಾಟಕಕ್ಕೆ ಏನು ಕೊಡುಗೆ ಕೊಟ್ಟಿದ್ದೀರಿ? ಮೋದಿ, ಮೋದಿ ಪಕ್ಷದವರು ಏನು ಮಾಡಿದ್ದಾರೆಂದು ಮತ ಕೇಳುತ್ತಾರೆ ಎಂದು ಲೇವಡಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ
Mangaluru; ಟ್ಯಾಂಕರ್ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ
ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.