ಉತ್ತರ ಕ್ಷೇತ್ರದಲ್ಲಿ ಸಂಸದ ಜಾಧವ ಸಂಚಾರ
ಬಡಾವಣೆಗಳ ನಾಗರಿಕರ ಸಮಸ್ಯೆ ಆಲಿಕೆ•ನನೆಗುದಿಗೆ ಬಿದ್ದ ಕಾಮಗಾರಿ ಪೂರ್ಣಕ್ಕೆ ತಾಕೀತು
Team Udayavani, Jun 14, 2019, 9:50 AM IST
ಕಲಬುರಗಿ: ಸಂಸದ ಡಾ| ಉಮೇಶ ಜಾಧವ ಉತ್ತರ ಮತಕ್ಷೇತ್ರಕ್ಕೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆ ಆಲಿಸಿದರು.
ಕಲಬುರಗಿ: ಸಂಸದ ಡಾ| ಉಮೇಶ ಜಾಧವ ಗುರುವಾರ ಕಲಬುರಗಿ ಮಹಾನಗರದ ಉತ್ತರ ಮತಕ್ಷೇತ್ರದಲ್ಲಿ ಮಿಂಚಿನ ಸಂಚಾರ ಕೈಗೊಂಡು ಪರಿಸ್ಥಿತಿ ಅವಲೋಕಿಸಿದರು.
ಪ್ರಸಿದ್ಧ ಖಾಜಾ ಬಂದೇನವಾಜ್ ದರ್ಗಾ ದರ್ಶನ ಕೈಗೊಳ್ಳುವ ಮೂಲಕ ಕಲಬುರಗಿ ಉತ್ತರ ಮತಕ್ಷೇತ್ರದ ವಿವಿಧ ಬಡಾವಣೆಗಳಿಗೆ ಭೇಟಿ ನೀಡಿದ ಸಂಸದರು, ನಾಗರಿಕರ ಸಮಸ್ಯೆಗಳನ್ನು ಆಲಿಸಿದರು.
ಕುಡಿಯುವ ನೀರು ಹಾಗೂ ಚರಂಡಿ ಸಮಸ್ಯೆ ಕುರಿತು ಸಾರ್ವಜನಿಕರು ಸಂಸದರ ಎದುರು ಅಳಲು ತೋಡಿಕೊಂಡು. ತುರ್ತಾಗಿ ಸಮಸ್ಯೆಗಳಿಗೆ ಸ್ಪಂದಿಸಲು ಮುಂದಾಗುವುದರ ಜತೆಗೆ ನನೆಗುದಿಗೆ ಬಿದ್ದ ಕಾಮಗಾರಿಗಳನ್ನು ಹದಿನೈದು ದಿನಗಳೊಳಗೆ ಪೂರ್ತಿಗೊಳಿಳಿಸುವಂತೆ ಪಾಲಿಕೆ ಆಯುಕ್ತರಿಗೆ ಸಂಸದರು ತಾಕೀತು ಮಾಡಿದರು.
ಈಗಾಗಲೇ ಇಎಸ್‌ಐ ಆಸ್ಪತ್ರೆ, ಕೇಂದ್ರೀಯ ವಿವಿಗೆ ಭೇಟಿ ನೀಡಿದ್ದಲ್ಲದೇ ಯಾದಗಿರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡಿರುವ ಸಂಸದ ಡಾ| ಉಮೇಶ ಜಾಧವ, ಕೇಂದ್ರ ಸಂಪುಟ ರಚನೆ ಮರುದಿನವೇ ರೈಲ್ವೆ ಹಾಗೂ ವಿಮಾನಯಾನ ಸಚಿವರಿಗೆ ಮನವಿ ಸಲ್ಲಿಸಿ, ಬೇಡಿಕೆ ಈಡೇರುವಂತೆ ಆಗ್ರಹಿಸಿದ್ದರು.
ಸಂಸತ್ ಸದಸ್ಯರಾಗಿ ಕೇಂದ್ರ ಸಂಪುಟ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಜಿಲ್ಲೆಯ ಕಾಳಗಿ ತಾಲೂಕಿನ ಮಂಗಲಗಿ ಗ್ರಾಮದಲ್ಲಿ ಸಿಡಿಲು ಬಡಿದು ಮೃತಪಟ್ಟ ಕುಟುಂಬಕ್ಕೆ ಸಾಂತ್ವನ ಹೇಳುವ ಮುಖಾಂತರ ಸೇವೆ ಆರಂಭಿಸಿರುವ ಸಂಸದ ಜಾಧವ ಅವರು, ದಿನನಿತ್ಯ ಪ್ರವಾಸ ಕೈಗೊಳ್ಳುತ್ತಲೇ ಇದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಕಲಬುರಗಿ ಉತ್ತರ ಮತಕ್ಷೇತ್ರದಲ್ಲಿ ಕಡಿಮೆ ಮತಗಳು ಬಂದಿದ್ದರೂ, ಕ್ಷೇತ್ರದ ಅಭಿವೃದ್ಧಿ ಕಾರ್ಯದ ಬಗ್ಗೆ ಸಂಸದರು ಆಸಕ್ತಿ ಹೊಂದಿರುವುದು ಬಡಾವಣೆ ನಾಗರಿಕರ ಮೆಚ್ಚುಗೆಗೆ ಪಾತ್ರವಾಯಿತು.
ಬಿಜೆಪಿ ಯುವ ಮುಖಂಡ ಚಂದು ಪಾಟೀಲ ಕಲಬುರಗಿ ಉತ್ತರ ಕ್ಷೇತ್ರದಲ್ಲಿನ ಸಮಸ್ಯೆಗಳ ಬಗ್ಗೆ ಸಂಸದರಿಗೆ ವಿವರಿಸಿದರು. ಬಿಜೆಪಿ ಮುಖಂಡ ಜಬ್ಟಾರಸಾಬ್ ಕಾಳಗಿ, ವಾಹಬ್ ಚಿಂಚೋಳಿ, ಪಾಲಿಕೆ ಆಯುಕ್ತೆ ಫೌಜಿಯಾ ತರನ್ನುಮ್ ಹಾಗೂ ಇತರ ಅಧಿಕಾರಿಗಳು ಈ ಸಂದರ್ಭದಲ್ಲಿದ್ದರು.
ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಹೇಳಿರುವಂತೆ ಮತದಾರ ಪ್ರಭುಗಳ ಬಳಿ ಬಂದು ಸಮಸ್ಯೆಗಳನ್ನು ಆಲಿಸುತ್ತಿರುವೆ. ಅದೇ ರೀತಿ ಜನತಾ ದರ್ಶನ ಆಯೋಜಿಸಲು ಉದ್ದೇಶಿಸಲಾಗಿದೆ. ಒಟ್ಟಾರೆ ಮುಂದಿನ ದಿನಗಳಲ್ಲಿ ಸಮಸ್ಯೆಗಳನ್ನು ಬಗೆಹರಿಸಲು ಸಮಗ್ರ ಕ್ರಿಯಾಯೋಜನೆ ರೂಪಿಸಲು ಮುಂದಾಗಲಾಗುವುದು. ಒಟ್ಟಾರೆ ತಮ್ಮ ಕಾರ್ಯಗಳ ಆದ್ಯತೆ ಜನಸಾಮಾನ್ಯರದ್ದಾಗಿದೆ.
•ಡಾ| ಉಮೇಶ ಜಾಧವ,
ಸಂಸದರು, ಕಲಬುರಗಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.