ಸಿಬ್ಬಂದಿ ಕೊರತೆ ನೀಗಿಸಲು ನಿವೃತ್ತರ ಮೊರೆ
ಹೈ.ಕ ಅಭಿವೃದ್ಧಿಗೆ ಶಿಕ್ಷಣ-ಆರೋಗ್ಯವೇ ಮದ್ದು•ವಿಭಾಗ ವ್ಯಾಪ್ತಿಯಲ್ಲಿ ಶೇ.60 ಹುದ್ದೆ ಖಾಲಿ
Team Udayavani, Jul 31, 2019, 1:00 PM IST
ಕಲಬುರಗಿ: ಪತ್ರಿಕಾ ಭವನದಲ್ಲಿ ಮಂಗಳವಾರ ಜಿಲ್ಲಾ ಮತ್ತು ಮಧ್ಯಮ ಪತ್ರಿಕೆಗಳ ಸಂಪಾದಕರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಎಚ್ಕೆಆರ್‌ಡಿಬಿ ಕಾರ್ಯದರ್ಶಿ ಸುಬೋಧ ಯಾದವ ಮಾತನಾಡಿದರು.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಭಾಗದಲ್ಲಿ ಮಂಜೂರಾದ ಹುದ್ದೆಗಳಲ್ಲಿ ಅರ್ಧಕ್ಕೂ ಅಧಿಕ ಹುದ್ದೆಗಳು ಖಾಲಿ ಇದ್ದು, ಸಿಬ್ಬಂದಿ ಕೊರತೆ ನೀಗಿಸಲು ನಿವೃತ್ತ ಅಧಿಕಾರಿಗಳನ್ನು ಸೇವೆಗೆ ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಮತ್ತು ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಸುಬೋಧ ಯಾದವ ತಿಳಿಸಿದರು.
ಪತ್ರಿಕಾ ಭವನದಲ್ಲಿ ಮಂಗಳವಾರ ಜಿಲ್ಲಾ ಮತ್ತು ಮಧ್ಯಮ ಪತ್ರಿಕೆಗಳ ಸಂಪಾದಕರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸರ್ಕಾರದ ಕಾರ್ಯಕ್ರಮಗಳ ಅನುಷ್ಠಾನ, ಮೇಲುಸ್ತುವಾರಿ ವಹಿಸಿ ನಿಗಾ ಇಡಲು ಅಧಿಕಾರಿಗಳು ಮತ್ತು ಸಿಬ್ಬಂದಿ ಬೇಕಾಗುತ್ತದೆ. ಆದರೆ, ರಾಜ್ಯದ ಇತರ ಕಂದಾಯ ವಲಯಗಳಿಗೆ ಹೋಲಿಕೆ ಮಾಡಿದರೆ, ಕಲಬುರಗಿ ವಿಭಾಗದ ಜಿಲ್ಲೆಗಳಲ್ಲಿ ಒಟ್ಟಾರೆ ಮಂಜೂರಾದ ಹುದ್ದೆಗಳ ಪೈಕಿ ಶೇ.40ರಿಂದ 60ರಷ್ಟು ಹುದ್ದೆಗಳು ಖಾಲಿ ಇವೆ. ಅದರಲ್ಲೂ, ಪ್ರಥಮ, ದ್ವಿತೀಯ ಹುದ್ದೆಗಳಿಂತ ಹೆಚ್ಚಾಗಿ ಉನ್ನತ ಮಟ್ಟದ ಹುದ್ದೆಗಳೇ ಖಾಲಿ ಇವೆ ಎಂದರು.
ಹುದ್ದೆಗಳು ಖಾಲಿ ಇರುವ ಬಗ್ಗೆ ಅನೇಕ ಬಾರಿ ಸರ್ಕಾರದ ಗಮನಕ್ಕೆ ತರಲಾಗಿದೆ. ಕನಿಷ್ಠ ಶೇ.20ರಷ್ಟು ಹುದ್ದೆಗಳು ಖಾಲಿ ಇದ್ದರೆ ಹೇಗಾದರೂ ನಿಭಾಯಿಸಬಹುದು. ಈ ನಿಟ್ಟನಲ್ಲಿ ಸಿಬ್ಬಂದಿ ಕೊರತೆ ನೀಗಿಸಲು ಮೂರು ವಿಧ ಅನುಸರಿಸಲು ತೀರ್ಮಾನಿಸಲಾಗಿದೆ. ಖಾಲಿ ಹುದ್ದೆಗಳ ಭರ್ತಿ, ಹೊರಗುತ್ತಿಗೆಯಲ್ಲಿ ನೇಮಕಾತಿ ಮತ್ತು ನಿವೃತ್ತ ಸಿಬ್ಬಂದಿಯಿಂದ ಸೇವೆ ಪಡೆಯಲು ಸರ್ಕಾರಕ್ಕೆ ಮನವಿ ಮಾಡಲಾಗಿದೆ. ನಿವೃತ್ತ ಸಿಬ್ಬಂದಿ ಸೇವೆಗೆ ಸರ್ಕಾರ ಅನುಮತಿ ನೀಡುವ ವಿಶ್ವಾಸ ಇದೆ ಎಂದರು.
ಶಿಕ್ಷಣ-ಆರೋಗ್ಯಕ್ಕೆ ಒತ್ತು: ಹೈಕ ಭಾಗದ ಐತಿಹಾಸಿಕ ಹಿನ್ನೆಲೆಯನ್ನು ಎಚ್ಕೆಆರ್‌ಡಿಬಿ ಅರಿತುಕೊಳ್ಳುವ ಕೆಲಸ ಮಾಡಿದೆ. ಇಲ್ಲಿನ ಸಮಸ್ಯೆಗಳು ತುಂಬಾ ಭಿನ್ನವಾಗಿದ್ದು, ಆರು ಜಿಲ್ಲೆಗಳಲ್ಲಿ ಬೇರೆ-ಬೇರೆಯಾದ ಸಮಸ್ಯೆಗಳನ್ನು ಎದುರಿಸುತ್ತೇವೆ. ಇದನ್ನು ಪರಿಹರಿಸಲು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದ ಪ್ರಗತಿಯಿಂದ ಮಾತ್ರ ಸಾಧ್ಯ ಎಂದು ಹೇಳಿದರು.
ಕಲಬುರಗಿ, ರಾಯಚೂರು, ಬೀದರ್, ಯಾದಗಿರಿ, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳ ಸಮಸ್ಯೆಗಳು ಒಂದೊಂದು ರೀತಿಯಲ್ಲಿವೆ. ಎಲ್ಲ ಜಿಲ್ಲೆಗಳಲ್ಲಿ ಒಂದೇ ನೀತಿ ಅನುಸರಿಸಿದರೆ, ಅದು ಅನುಷ್ಠಾನಗೊಳ್ಳುವುದು ಕಷ್ಟ ಸಾಧ್ಯವಾಗಲಿದೆ. ಇಲ್ಲಿನ ಜನತೆ ಮೊದಲು ಶಿಕ್ಷಿತರಾಗಬೇಕಿದೆ. ಅಭಿವೃದ್ಧಿ ಎಂದರೆ ಕೇವಲ ರಸ್ತೆ, ಚರಂಡಿ, ಕಟ್ಟಡ ನಿರ್ಮಾಣವಲ್ಲ. ಆದರೆ, ಇಲ್ಲಿನ ಜನಪ್ರತಿನಿಧಿಗಳು ಅಭಿವೃದ್ಧಿಯೆಂದು ಜನತೆಗೆ ತೋರಿಸಲು ರಸ್ತೆ, ಚರಂಡಿ, ಕಟ್ಟಡ ನಿರ್ಮಾಣಕ್ಕೆ ಮುತುವರ್ಜಿ ತೋರಿಸುತ್ತಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಅಭಿವೃದ್ಧಿಗೆ ಬುನಾದಿಯೇ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರ. ಈ ನಿಟ್ಟಿನಲ್ಲಿ ಎಚ್ಕೆಆರ್‌ಡಿಬಿ ಕಾರ್ಯ ಯೋಜನೆಗಳನ್ನು ಹಾಕಿಕೊಂಡು ಹೈ.ಕ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ. ಜತೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಅಪೌಷ್ಟಿಕತೆ ನಿವಾರಣೆಗೂ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಕಾಮಗಾರಿಗಳಿಗೆ ಕಾಲಮಿತಿ: ಎಚ್ಕೆಆರ್‌ಡಿಬಿಯಿಂದ ಕೈಗೊಳ್ಳುತ್ತಿರುವ ಎಲ್ಲ ಕಾಮಗಾರಿಗಳಿಗೆ ನಿರ್ದಿಷ್ಟ ಕಾಲಮಿತಿ ಹಾಕಿಕೊಳ್ಳಲಾಗಿದೆ. ವ್ಯವಸ್ಥಿತ ರೀತಿಯಲ್ಲಿ ಅನುಷ್ಠಾನ ಮಾಡಲು ಕ್ರಮ ಜರುಗಿಸಲಾಗುತ್ತಿದೆ. 30 ಲಕ್ಷ ರೂ. ಮೊತ್ತದೊಳಗಿನ ಕಾಮಗಾರಿ ಆರಂಭಕ್ಕೆ ಮೂರು ತಿಂಗಳು, 30ಲಕ್ಷದಿಂದ ಒಂದು ಕೋಟಿ ರೂ. ವೆಚ್ಚದ ಕಾಮಗಾರಿಗೆ ಐದು ತಿಂಗಳು ಮತ್ತು ಒಂದು ಕೋಟಿ ರೂ.ಗೂ ಅಧಿಕ ವೆಚ್ಚದ ಕಾಮಗಾರಿ ಆರಂಭಕ್ಕೆ ಆರು ತಿಂಗಳ ಕಾಲಮಿತಿ ವಿಧಿಸಲಾಗಿದೆ ಎಂದು ಹೇಳಿದರು.
ಕಾಲಮಿತಿ ವಿಧಿಸಿದ್ದರಿಂದ ಪ್ರತಿದಿನವೂ ಕಾಮಗಾರಿ ಸ್ಥಿತಿ, ಅಂದು ಖರ್ಚಾದ ಅನುದಾನ ಬಗ್ಗೆ ಮಾಹಿತಿ ಅಂದೇ ಸಿಗುವ ರೀತಿಯಲ್ಲಿ ಕಾರ್ಯ ವೈಖರಿಯನ್ನು ಬದಲಾವಣೆ ಮಾಡಿಕೊಳ್ಳಲಾಗಿದೆ. ಅಲ್ಲದೇ, ಸರ್ಕಾರದಿಂದ ನೀಡಿದ ಅನೇಕ ಸೌಕರ್ಯ, ಸಲಕರಣೆಗಳು ಉಪಯೋಗವಾಗುತ್ತಿರುವ ಬಗ್ಗೆ ನಿರಂತರವಾಗಿ ನಿಗಾ ವಹಿಸಲಾಗುತ್ತಿದೆ ಎಂದು ವಿವರಿಸಿದರು.
ಕಲಬುರಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕ ಸಿದ್ಧೇಶ್ವರಪ್ಪ, ಸಂಪಾದಕರ ಸಂಘದ ಅಧ್ಯಕ್ಷ ಶರಣಬಸಪ್ಪ ಕೆ.ಎಚ್., ಪತ್ರಕರ್ತರಾದ ಪಿ.ಎಂ. ಮಣ್ಣೂರು, ಶಂಕರಕೋಡ್ಲಾ, ವೆಂಕಟರಾವ್ ಖಮಿತಕರ್, ಆಜೀಮುಲ್ಲಾ ಸರಮಸ್ತ, ವಿ.ಎನ್.ಮಲ್ಲಿಕಾರ್ಜುನ, ಮಲ್ಲಿಕಾರ್ಜುನ ನಾಯ್ಕೋಡಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Udupi: ಜ.15ಕ್ಕೆ ಗಡುವು; ಕಾಮಗಾರಿ ಇನ್ನೂ ಮುಗಿದಿಲ್ಲ
ಗದಗ: ಸರ್ಕಾರಿ ಶಾಲೆ ಗೋಡೆಗೆ ಚಂದದ ಚಿತ್ತಾರ – ಬಂದಿದೆ ಜಿಲ್ಲಾಮಟ್ಟದ ಪ್ರಶಸ್ತಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.