ಶಿಕ್ಷಕರ ಪ್ರತಿಭಟನೆ: ಶಾಲೆಗಳಿಗೆ ಅಘೋಷಿತ ಬಂದ್‌

Team Udayavani, Jul 10, 2019, 12:49 PM IST

1–July-22

ಕಲಬುರಗಿ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರಾಥಮಿಕ ಶಾಲೆ ಶಿಕ್ಷಕರು ಪ್ರತಿಭಟನೆ ನಡೆಸಿದರು.

ಕಲಬುರಗಿ: ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಾಲಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನು ‘ಪದವೀಧರ ಶಿಕ್ಷಕ’ ಎಂದು ಪರಿಗಣಿಸಿ ವೇತನ ಶ್ರೇಣಿ ನಿಗದಿ ಮಾಡುವುದು ಸೇರಿದಂತೆ ವಿವಿಧ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿ ಮಂಗಳವಾರ ಶಿಕ್ಷಕರು ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಜಿಲ್ಲೆಯ ಏಳು ಕ್ಷೇತ್ರ ಶಿಕ್ಷಣ ವಲಯಗಳ ಪ್ರಾಥಮಿಕ ಶಾಲೆಗಳ ಶಿಕ್ಷಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಶಿಕ್ಷಕರೆಲ್ಲರೂ ‘ಆಕಸ್ಮಿಕ ರಜೆ’ ಹಾಕಿ ಪ್ರತಿಭಟನಾ ಪ್ರದರ್ಶನದಲ್ಲಿ ಭಾಗವಹಿಸಿದ್ದರಿಂದ ಬಹುಪಾಲು ಶಾಲೆಗಳ ಬಾಗಿಲುಗಳು ಬಂದಾಗಿದ್ದವು. ಶಾಲಾ ಮಕ್ಕಳಿಗೆ ಅಘೋಷಿತ ರಜೆ ಘೋಷಿಸಲಾಗಿತ್ತು. ಕೆಲ ಶಾಲೆಗಳ ಶಿಕ್ಷಕರು ಮಂಗಳವಾರ ಶಾಲೆಗೆ ರಜೆ ಇರುತ್ತದೆ ಎಂದು ಒಂದು ದಿನ ಮುನ್ನವೇ ತಿಳಿಸಿ ಬಂದಿದ್ದರು.

ನಗರ ಪ್ರದೇಶ ಮತ್ತು ವಿವಿಧ ತಾಲೂಕುಗಳಿಂದ ಶಿಕ್ಷಕರು ಬೆಳಗ್ಗೆ 9:00ಕ್ಕೆ ನಗರಕ್ಕೆ ಆಗಮಿಸಿದ್ದರು. ಎಲ್ಲರೂ ಸಾರ್ವಜನಿಕ ಉದ್ಯಾನವನದಲ್ಲಿ ಜಮಾವಣೆಗೊಂಡು ಅಲ್ಲೇ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಹೋರಾಟದಲ್ಲಿ ಎಲ್ಲ ಶಿಕ್ಷಕರು ಒಟ್ಟಾಗಿರಬೇಕು ಎಂದು ಜೈಕಾರ ಕೂಗಿದರು.

ಪ್ರತಿಭಟನಾ ಪ್ರದರ್ಶನದುದ್ದಕ್ಕೂ ‘ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಿಕ್ಷಕರು ಎಂದು ಪರಿಗಣಿಸಿ’, ಪದವೀಧರ ಶಿಕ್ಷಕರಿಗೆ ನ್ಯಾಯ ಒದಗಿಸಿ’, ‘ಹೆಚ್ಚುವರಿ ಶಿಕ್ಷಕರ ವರ್ಗಾವಣೆ ನ್ಯೂನತೆ ಸರಿಪಡಿಸಿ’ ಎಂದು ಘೋಷಣೆ ಮೊಳಗಿಸಿದರು. ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಪ್ರತಿಭಟನೆ ನೇತೃತ್ವ ವಹಿಸಿದ್ದರು.

ಶಿಕ್ಷಕರ ಬೇಡಿಕೆಗಳೇನು?: ರಾಜ್ಯ ಸರ್ಕಾರದ ಮುಂದೆ ಇಡೀ ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರು ಪ್ರಮುಖ ಏಳು ಬೇಡಿಕೆಗಳನ್ನಿಟ್ಟುಕೊಂಡು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದರು.

ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಾಲಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ ವೇತನ ಶ್ರೇಣಿ ನಿಗದಿಗೊಳಿಸಬೇಕು. ಚುನಾವಣೆಗೆ ಮುನ್ನ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ನೂತನ ಪಿಂಚಣಿ ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆ ಮರುಜಾರಿಗೊಳಿಸುವುದಾಗಿ ಭರವಸೆ ನೀಡಿದ್ದರು. ಅದರಂತೆ ಕೂಡಲೇ ಹಳೆಯ ಪಿಂಚಣಿ ಯೋಜನೆ ಜಾರಿಗೆ ತರಬೇಕೆಂದು ಪ್ರತಿಭಟನಾ ನಿತರ ಶಿಕ್ಷಕರು ಒತ್ತಾಯಿಸಿದರು.

ಕಳೆದ ಮೂರು ವರ್ಷಗಳಿಂದ ಶಿಕ್ಷಕರ ವರ್ಗಾವಣೆ ಆಗದೇ ಈಗ ವರ್ಗಾವಣೆ ಪ್ರಕ್ರಿಯೆ ಆರಂಭವಾಗಿದೆ. ಈ ಪ್ರಕ್ರಿಯೆ ಮುಗಿದ ತಕ್ಷಣ ಅಕ್ಟೋಬರ್‌ನಲ್ಲಿ ಮತ್ತೂಮ್ಮೆ ಕೇವಲ ಕೋರಿಕೆ ವರ್ಗಾವಣೆ ನಡೆಸುವಂತೆ ಆಗ್ರಹಿಸಿದರು.

ರಾಜ್ಯದ ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಬೇಕು. ಶಿಕ್ಷಕರ ಹೆಚ್ಚುವರಿ ಪ್ರಕ್ರಿಯೆಯಲ್ಲಿರುವ ನ್ಯೂನತೆ ಸರಿಪಡಿಸಿ ಪ್ರತಿ ವಿಷಯಕ್ಕೆ ಒಬ್ಬ ಶಿಕ್ಷಕರನ್ನು ಪರಿಗಣಿಸಬೇಕು. ಶಿಕ್ಷಕ, ವಿದ್ಯಾರ್ಥಿ ಅನುಪಾತ ಗುರುತಿಸುವಾಗ ಮುಖ್ಯೋಪಾಧ್ಯಾಯ, ದೈಹಿಕ ಶಿಕ್ಷಕರನ್ನು ಹೊರತುಪಡಿಸಿ ಹೆಚ್ಚುವರಿ ಪ್ರಕ್ರಿಯೆಯನ್ನು ಆರಂಭಿಸಬೇಕು ಎಂದು ಹಕ್ಕೊತ್ತಾಯ ಮಂಡಿಸಿದರು.

6ನೇ ವೇತನ ಆಯೋಗದ ಅಂತಿಮ ವರದಿ ಶಿಫಾರಸಿನ ಪ್ರಕಾರ ಮುಖ್ಯ ಶಿಕ್ಷಕರಿಗೆ 10, 15, 20, 25 ಹಾಗೂ 30 ವರ್ಷಗಳ ಬಡ್ತಿ ನೀಡಬೇಕು. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಉಪ ನಿರ್ದೇಶಕರ ಹುದ್ದೆಯವರೆಗೂ ಬಡ್ತಿ ನೀಡುವಂತೆ ಆಗ್ರಹಿಸಿದ ಪ್ರತಿಭಟನಾಕಾರರು, ಗ್ರಾಮೀಣ ಕೃಪಾಂಕ ಶಿಕ್ಷಕರ ಸಮಸ್ಯೆ ನಿವಾರಿಸುವಂತೆ ಒತ್ತಾಯಿಸಿದರು. ನಂತರದ ಜಿಲ್ಲಾಧಿಕಾರಿಗಳು ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ಸಂಘದ ಜಿಲ್ಲಾಧ್ಯಕ್ಷ ಮಲ್ಲಯ್ಯ ಗುತ್ತೇದಾರ, ಉಪಾಧ್ಯಕ್ಷ ಪರಮೇಶ್ವರ ದೇಸಾಯಿ, ಪ್ರಧಾನ ಕಾರ್ಯದರ್ಶಿ ಸಿದ್ದರಾಮ, ಶಿವಕುಮಾರ ಬಿರಾದಾರ, ಬಾಬು ಪೊನ್ನ ನಾಯಕ, ಅಂಬುಬಾಯಿ ಕಲಶೆಟ್ಟಿ, ಮಲ್ಲಣ್ಣ ಮೇತ್ರಿ, ಚನ್ನಮ್ಮ ಗೊಬ್ಬೂರಕರ, ಮರೆಪ್ಪ ಮೂಲಿಮನಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.