ಪರ್ಯಾಯ ಜಲಮೂಲ ಪತ್ತೆ ಮಾಡಿ
ನೀರಿನ ಯೋಜನೆ ಮಿಷನ್ ಮೋಡ್‌ನಲ್ಲಿ ಜಾರಿಗೆ ತನ್ನಿ•ಸಮೀಪದ ಕೆರೆ-ಬಾವಿಗಳಿಂದ ಪೈಪ್‌ಲೈನ್ ಒದಗಿಸಿ
Team Udayavani, May 5, 2019, 11:25 AM IST
ಕಲಬುರಗಿ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬರ ಪರಿಹಾರ ಕಾಮಗಾರಿಗಳ ಪ್ರಗತಿ ಪರಿಶೀಲನೆ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಅಧ್ಯಕ್ಷತೆಯಲ್ಲಿ ನಡೆಯಿತು.
ಕಲಬುರಗಿ: ಜಿಲ್ಲೆಯಲ್ಲಿ ನೀರಿನ ಸಮಸ್ಯೆಯಿರುವ 133 ಗ್ರಾಮಗಳಿಗೆ 140 ಟ್ಯಾಂಕರ್ ಮೂಲಕ ಪ್ರತಿನಿತ್ಯ ಸುಮಾರು 435 ಟ್ರಿಪ್ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದ್ದು, ಇದು ತಾತ್ಕಾಲಿಕ ವ್ಯವಸ್ಥೆ ಮಾತ್ರವಾಗಿದೆ. ಇಂತಹ ಕ್ಲಿಷ್ಟಕರ ಗ್ರಾಮಗಳಲ್ಲಿ ಜನರಿಗೆ ಕುಡಿಯುವ ನೀರು ಒದಗಿಸಲು ಟ್ಯಾಂಕರ್ ಬದಲಾಗಿ ಪರ್ಯಾಯವಾಗಿ ಜಲಮೂಲ ಪತ್ತೆ ಹಚ್ಚಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ ಸೂಚನೆ ನೀಡಿದರು.
ಶನಿವಾರ ರಾತ್ರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬರ ಪರಿಹಾರ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಕಳೆದ ಎರಡ್ಮೂರು ತಿಂಗಳಿಂದ ಜಿಲ್ಲೆಯ ಹಲವು ಸಮಸ್ಯಾತ್ಮಕ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಟ್ಯಾಂಕರ್ ನೀರು ಪೂರೈಸುವ ಗ್ರಾಮದಲ್ಲಿ ಜಲಮೂಲ ಪತ್ತೆ ಹಚ್ಚಿ ಹೊಸದಾಗಿ ಕೊಳವೆ ಬಾವಿ, ಬೋರವೆಲ್ ಕೊರೆಯಿರಿ. ರಾಷ್ಟ್ರೀಯ ವಿಪತ್ತು ಕಾಯ್ದೆಯಡಿ ಗ್ರಾಮದ ಅಕ್ಕಪಕ್ಕದ ಖಾಸಗಿ ಜಮೀನಿನಲ್ಲಿರುವ ತೆರೆದ ಬಾವಿ, ಬೋರವೆಲ್ ಜಲಮೂಲಗಳಿದ್ದಲ್ಲಿ ಅದನ್ನು ಸರ್ಕಾರಕ್ಕೆ ವಶಕ್ಕೆ ಪಡೆದು ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಸಬೇಕು ಎಂದರು.
ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತಿರುವ ಬಗ್ಗೆ ತಾಪಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಹಾಗೂ ಗ್ರಾಪಂ ಪಿ.ಡಿ.ಒ.ಗಳು ನಿಗಾ ವಹಿಸಬೇಕು. ಜಿ.ಪಿ.ಎಸ್. ತಂತ್ರಾಂಶ ಪರಿಶೀಲಿಸಿಯೆ ಹಣ ಪಾವತಿಸಬೇಕು ಎಂದು ತಿಳಿಸಿದರು.
ಜಿಲ್ಲೆಯ ಎಲ್ಲಾ ತಾಲೂಕುಗಳು ಬರಗಾಲ ಪೀಡಿತ ಪ್ರದೇಶವೆಂದು ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ತುರ್ತಾಗಿ ಕಾಮಗಾರಿ ಕೈಗೊಳ್ಳಲು ಟಾಸ್ಕ್ ಫೋರ್ಸ್ ಸಮಿತಿ ಅನುಮೋದನೆ ನೀಡಿದೆ. ಕುಡಿಯುವ ನೀರಿನ ಯೋಜನೆಗಳನ್ನು ಮಿಷನ್ ಮೋಡ್‌ನಲ್ಲಿ ತ್ವರಿತವಾಗಿ ಅನುಷ್ಠಾನಕ್ಕೆ ತರಬೇಕು ಎಂದು ಸೂಚಿಸಿದರು.
ಜಿಲ್ಲೆಯ ಆಳಂದ, ಅಫಜಲಪುರ ಮತ್ತು ಜೇವರ್ಗಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಿದ್ದು, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ತಹಶೀಲ್ದಾರರು ಖುದ್ದಾಗಿ ನೀರಿನ ಅಭಾವವಿರುವ ಗ್ರಾಮಗಳಿಗೆ ತೆರಳಿ ವಾಸ್ಥವ ಸ್ಥಿತಿ ಅರಿತು ಪರಿಹಾರ ಕಾರ್ಯಕ್ಕೆ ಚರುಕು ಮೂಡಿಸಬೇಕು. ಆಳಂದ ತಾಲೂಕಿನ ಮಾದನಹಿಪ್ಪರಗಾ ಗ್ರಾಮಕ್ಕೆ ಕಳೆದೆರಡು ತಿಂಗಳಿನಿಂದ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದ್ದು, ಗ್ರಾಮದ ಆಸುಪಾಸು ತೆರೆದ ಬಾವಿಗಳಲ್ಲಿ ನೀರು ಲಭ್ಯವಿದ್ದಲ್ಲಿ ಪೈಪ್‌ಲೈನ್ ಅಳವಡಿಸಿ ಗ್ರಾಮಕ್ಕೆ ನೀರು ಸರಬರಾಜು ಮಾಡುವತ್ತ ಅಧಿಕಾರಿಗಳು ಯೋಚಿಸಬೇಕು ಎಂದರು.
ನೀರಿನ ಸಮಸ್ಯೆಯಿರುವ ಅಫಜಲಪುರ ತಾಲೂಕಿನ ಅತನೂರ, ಮಾಶಾಳ ಸೇರಿದಂತೆ ಇನ್ನೀತರ ಗ್ರಾಮಗಳಲ್ಲಿ ಭೂವಿಜ್ಞಾನಿಯ ಸಲಹೆ ಪಡೆದು ಕೂಡಲೆ ಕೊಳವೆ ಬೋರವೆಲ್ ಕೊರೆಯಬೇಕು. ಚಿತ್ತಾಪುರ ತಾಲೂಕಿನ ದಿಗ್ಗಾಂವ ಗ್ರಾಮಕ್ಕೆ ಓರಿಯೆಂಟ್ ಸಿಮೆಂಟ್ ಕಂಪನಿಯಿಂದಲೆ ನೀರು ಸರಬರಾಜು ಮಾಡುವಂತೆ ನಿರ್ದೇಶನ ನೀಡಬೇಕು. ಬೆಣ್ಣೂರ, ಪೇಠಶಿರೂರನಲ್ಲಿಯೂ ಕೊಳವೆ ಬೋರವೆಲ್ ಕೊರೆಯಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ತಹಶೀಲ್ದಾರರಿಗೆ ಸೂಚನೆ ನೀಡಿದರು.
ಸ್ವಚ್ಛತೆ ಕಾಪಾಡಿ: ನಗರ-ಪಟ್ಟಣ ವಾಸಿಗಳಿಗೆ ನೀರು ಸರಬರಾಜು ಮಾಡಲು ಯಾವುದೇ ತೊಂದರೆಯಿಲ್ಲ, ಆದರೆ ಜಲಮಂಡಳಿಯವರು ಸ್ವಚ್ಛ ಕುಡಿಯುವ ನೀರು ಸರಬರಾಜಿಗೆ ಗಮನಹರಿಸಬೇಕು ಎಂದರು.
ಜಿಪಂ ಸಿಇಒ ಡಾ| ರಾಜಾ ಪಿ. ಮಾತನಾಡಿ, ಬರ ಪರಿಹಾರ ಕಾಮಗಾರಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಪಿ.ಡಿ.ಒ., ತಾಪಂ, ತಹಶೀಲ್ದಾರರು, ಜಲ ಮಂಡಳಿ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಆಳಂದ ತಾಲೂಕಿನ ರುದ್ರವಾಡಿ ಗ್ರಾಮದಲ್ಲಿ ಖಾಸಗಿ ಬೋರವೆಲ್ ಮೂಲಕ ನೀರು ಪಡೆಯಲು ಒಪ್ಪಂದ ಮಾಡಿಕೊಂಡರೂ ನೀರು ಸರಬರಾಜಿಗೆ ಕ್ರಮ ವಹಿಸದ ಅಲ್ಲಿನ ಪಿ.ಡಿ.ಒ ಹಾಗೂ ನೀರು ಸರಬರಾಜು ಕಿರಿಯ ಅಭಿಯಂತರರಿಗೆ ನೋಟಿಸ್ ಜಾರಿ ಮಾಡಬೇಕು ಎಂದು ಹೇಳಿದರು.
ವಿ.ಕೆ. ಸಲಗರ್ ಗ್ರಾಮದಲ್ಲಿ ಈಗಾಗಲೆ ಖಾಸಗಿ ಜಮೀನಿನಲ್ಲಿ ಬಾವಿ ಕೊರೆದಿದ್ದು, ಕೊರೆದ ಬಾವಿಯ ಮಣ್ಣು ನೀರಿನಲ್ಲಿ ಬೀಳುತ್ತಿದೆ. ಇದನ್ನು ತಪ್ಪಿಸಲು ತಡೆಗೋಡೆ ನಿರ್ಮಿಸಿ ಅಲ್ಲಿಂದ ನೀರು ಪಡೆಯಲು ಜಮೀನು ಮಾಲೀಕರೊಂದಿಗೆ ಗ್ರಾಮ ಪಂಚಾಯತಿಯೂ ಒಪ್ಪಂದ ಮಾಡಿಕೊಳ್ಳಬೇಕು ಎಂದರು.
ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕರು ಮಾತನಾಡಿ, ಜಿಲ್ಲೆಯಲ್ಲಿ 14 ಮೇವು ಬ್ಯಾಂಕ್ ಸ್ಥಾಪಿಸಲಾಗಿದ್ದು, ರೈತರು ಇಲ್ಲಿಂದ ಹಸುಗಳಿಗೆ ಮೇವು ಪಡೆಯುತ್ತಿದ್ದಾರೆ. 10 ವಾರಗಳಿಗೆ ಬೇಕಾಗುವಷ್ಟು 44 ಮೆಟ್ರಿಕ್ ಟನ್ ಮೇವು ಲಭ್ಯವಿದೆ ಎಂದರು. ಪಾಲಿಕೆ ಆಯುಕ್ತೆ ಬಿ.ಫೌಜಿಯ ತರನ್ನುಮ, ರಾಹುಲ್ ಪಾಂಡ್ವೆ, ಜಿಲ್ಲೆಯ ತಹಶೀಲ್ದಾರರು, ಇದ್ದರು.
ಗ್ರಾಮಕ್ಕೆ ಸಮರ್ಪಕವಾಗಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತಿದ್ದರೂ ತಪ್ಪು ಮಾಹಿತಿ ನೀಡಿ ಅನಾವಶ್ಯಕವಾಗಿ ಗೊಂದಲ ಸೃಷ್ಟಿಸುತ್ತಿರುವ ಆಳಂದ ತಾಲೂಕಿನ ಬೋಳನಿ ಪಿ.ಡಿ.ಒ.ಗೆ ಶೋಕಾಸ ನೋಟಿಸ್ ಜಾರಿ ಮಾಡುವಂತೆ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಬರ ಪರಿಹಾರ ಕಾಮಗಾರಿಗಳಲ್ಲಿ ಯಾವುದೇ ಅಧಿಕಾರಿ-ಸಿಬ್ಬಂದಿ ರಾಜಕೀಯ ಮಾಡುತ್ತಿರುವವರ ಮಾಹಿತಿ ನೀಡಿದಲ್ಲಿ, ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು.
•ಆರ್. ವೆಂಕಟೇಶಕುಮಾರ, ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.