ರೂಲ್ಸ್ ಬ್ರೇಕ್‌: 6 ತಿಂಗಳಲ್ಲಿ 54 ಸಾವಿರ ಕೇಸ್‌

68.58 ಲಕ್ಷ ರೂ. ದಂಡ ವಸೂಲಿ •ವಾಹನ ಸವಾರರಿಗೆ ಸಂಚಾರಿ ಪೊಲೀಸರ ಎಚ್ಚರಿಕೆ ಗಂಟೆ

Team Udayavani, Aug 1, 2019, 10:06 AM IST

1-Agust-3

ಕಲಬುರಗಿ: ಚೌಕ್‌ ಸರ್ಕಲ್ನಲ್ಲಿರುವ ಸಂಚಾರಿ ನಿಯಂತ್ರಣ ಕೊಠಡಿಯಲ್ಲಿ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿರುವುದು.

ರಂಗಪ್ಪ ಗಧಾರ
ಕಲಬುರಗಿ:
ದಶ ದಿಕ್ಕುಗಳಿಂದ ಕಲಬುರಗಿ ಮಹಾನಗರ ಬೆಳೆಯುತ್ತಿದ್ದು, ವಾಹನಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಜತೆಗೆ ಸಂಚಾರ ನಿಯಮ ಉಲ್ಲಂಘಿಸುವವರ ಸಂಖ್ಯೆಯೂ ದಿನೇ-ದಿನೇ ಅಧಿಕವಾಗುತ್ತಿದ್ದು, ಕಳೆದ ಆರೇ ತಿಂಗಳಲ್ಲಿ 54,695 ಪ್ರಕರಣಗಳು ದಾಖಲಾಗಿವೆ. ಬರೋಬ್ಬರಿ 68,58,700 ರೂ. ದಂಡವನ್ನು ಸಂಚಾರಿ ಪೊಲೀಸರು ವಿಧಿಸಿದ್ದಾರೆ.

ನಗರದಲ್ಲಿ ದ್ವಿಚಕ್ರ ವಾಹನ, ಆಟೋ ರಿಕ್ಷಾ, ನಾಲ್ಕು ಚಕ್ರದ ವಾಹನ, ಬಸ್‌ಗಳ ಓಡಾಟ ಹೆಚ್ಚುತ್ತಿದೆ. ಹೀಗಾಗಿ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗುತ್ತಿರುವ ಜತೆಗೆ ಸಂಚಾರಿ ನಿಯಮ ಉಲ್ಲಂಘಿಸುವರಿಗೇನೂ ಕೊರತೆ ಇಲ್ಲ. ಅತೀ ವೇಗದ ಚಾಲನೆ, ಟ್ರಾಫಿಕ್‌ ಸಿಗ್ನಲ್ನಲ್ಲಿ ಎರ್ರಾಬಿರ್ರಿ ನುಗ್ಗುವುದು, ಕುಡಿದು ವಾಹನ ಚಲಾಯಿಸುವುದು, ಮೊಬೈಲ್ನಲ್ಲಿ ಮಾತನಾಡುತ್ತಾ ವಾಹನ ಚಾಲನೆ ಮಾಡುವುದು, ರಸ್ತೆಯಲ್ಲಿ ಎಲ್ಲೆಂದರಲ್ಲಿ ವಾಹನ ನಿಲ್ಲಿಸುವುದು, ವಾಹನದ ದಾಖಲೆ ಇಲ್ಲದೇ ಇರುವುದು, ಚಾಲನೆ ಪರವಾನಿಗೆ ಇಲ್ಲದೇ ವಾಹನ ಚಲಾಯಿಸುವುದು.. ಹೀಗೆ ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಟ್ರಾಫಿಕ್‌ ರೂಲ್ಸ್ಗಳನ್ನು ಬ್ರೇಕ್‌ ಮಾಡುವವರು ಅಧಿಕ ಸಂಖ್ಯೆಯಲ್ಲಿ ಇದ್ದಾರೆ.

ಸಂಚಾರಿ ನಿಯಮಗಳ ಉಲ್ಲಂಘನೆಗೆ ಕಡಿವಾಣ ಹಾಕಲು, ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆಂದು ಪೊಲೀಸ್‌ ಇಲಾಖೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತಿದೆ. ಅಲ್ಲದೇ, ಚಾಲಕರಿಗೆ ಅರಿವು ಮೂಡಿಸುವ ಕೆಲಸವನ್ನೂ ಮಾಡಲಾಗುತ್ತದೆ. ಕೆಲ ಚಾಲಕರು ಉದಾಸೀನ ಮನೋಭಾವನೆಯಿಂದ ಮೇಲಿಂದ ಮೇಲೆ ಸಂಚಾರಿ ನಿಯಮಗಳನ್ನು ಉಲ್ಲಂಘಿಸುತ್ತಲೇ ಇದ್ದಾರೆ. ಆದ್ದರಿಂದ ಪೊಲೀಸ್‌ ಸಿಬ್ಬಂದಿ ತಂಡ-ತಂಡವಾಗಿ ಪ್ರತಿ ದಿನ ಕಾರ್ಯಾಚರಣೆ ನಡೆಸುತ್ತಿದೆ.

ನಗರದ ಕೇಂದ್ರ ಬಸ್‌ ನಿಲ್ದಾಣ, ರಾಷ್ಟ್ರಪತಿ ವೃತ್ತ, ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತ, ಇಂದಿರಾ ಸ್ಮಾರಕ ಭವನದ ಎದುರು, ಜಗತ್‌ ವೃತ್ತ, ಸೂಪರ್‌ ಮಾರ್ಕೆಟ್, ಹುಮನಾಬಾದ್‌ ರಿಂಗ್‌ ರೋಡ್‌, ಲಾಲಗೇರಿ ಕ್ರಾಸ್‌, ಮುಸ್ಲಿಂ ಚೌಕ್‌, ಆಳಂದ ಚೆಕ್‌ಪೋಸ್ಟ್‌, ರಾಮ ಮಂದಿರ ಸರ್ಕಲ್, ಸೇಡಂ ರಿಂಗ್‌ ರೋಡ್‌, ಹಾಗರಗಾ ಕ್ರಾಸ್‌ ಹಾಗೂ ಹಲವು ಪ್ರಮುಖ ರಸ್ತೆ, ವೃತ್ತಗಳಲ್ಲಿ ಟ್ರಾಫಿಕ್‌ ಪೊಲೀಸರು ವಾಹನ ಸವಾರರಿಗೆ ದಂಡ ವಿಧಿಸಿ ಎಚ್ಚರಿಕೆ ನೀಡುತ್ತಿದ್ದಾರೆ.

ಕೆಲ ವಾಹನ ಸವಾರರು ದಂಡ ಕಟ್ಟಿ ಸಂಚಾರಿ ನಿಯಮ ಪಾಲಿಸಲು ಮುಂದಾದರೆ, ಇನ್ನು ಕೆಲವರು ಪೊಲೀಸರು ಹಿಡಿದರೆ ನೋಡೋಣ ಎನ್ನುವ ಅಸಡ್ಡೆಯೊಂದಿಗೆ ಸಂಚಾರಿ ನಿಮಯ ಉಲ್ಲಂಘಿಸುತ್ತಿದ್ದಾರೆ. ಇನ್ನು ಕೆಲವರಂತೂ ಸಂಚಾರಿ ಪೊಲೀಸರನ್ನು ಕಂಡು ಕಳ್ಳರಂತೆ ಗಾಡಿ ತಿರುಗಿಸಿಕೊಂಡು ಓಡಿ ಹೋಗುತ್ತಾರೆ. ಸಂಚಾರಿ ನಿಯಮ ಉಲ್ಲಂಘನೆ ತಡೆಯಲು ವಾಹನಗಳನ್ನು ನಿಲ್ಲಿಸಿ ದಾಖಲೆ ಪರಿಶೀಲಿಸಲಾಗುತ್ತಿದೆ. ಡಿಎಲ್, ಆರ್‌ಸಿ ಬುಕ್‌, ಇನ್ಸೂರೆನ್ಸ್‌ ಬಗ್ಗೆ ಸರಿಯಾದ ದಾಖಲೆಗಳಿಲ್ಲದಿದ್ದರೆ ಹಾಗೂ ಹೆಲ್ಮೆಟ್ ಧರಿಸದೇ ಇದ್ದರೆ, ಅಂತಹ ಚಾಲಕರನ್ನು ಹಿಡಿದು ದಂಡ ವಿಧಿಸಲಾಗುತ್ತಿದೆ ಎನ್ನುತ್ತಾರೆ ಹೆಚ್ಚುವರಿ ಉಪ ಪೊಲೀಸ್‌ ಆಯುಕ್ತ (ಸಂಚಾರ ಮತ್ತು ಅಪರಾಧ ವಿಭಾಗ) ವೀರೇಶ ಕರಡಿಗುಡ್ಡ.

ನಶೆಯಲ್ಲಿದ್ದವರಿಗೂ ಶಾಕ್‌: ಜನವರಿಯಿಂದ ಜೂನ್‌ವರೆಗೆ ನಗರಾದ್ಯಂತ ಸಂಚಾರಿ ನಿಮಯ ಉಲ್ಲಂಘನೆಗೆ ಸಂಬಂಧಪಟ್ಟ ಒಟ್ಟು 54,695 ಪ್ರಕರಣಗಳನ್ನು ದಾಖಲಿಸಲಾಗಿದ್ದು, 68,58,700 ರೂ. ದಂಡ ವಸೂಲಿ ಮಾಡಲಾಗಿದೆ. ಇದರಲ್ಲಿ ಪ್ರಮುಖವಾಗಿ ಅತಿ ವೇಗದ 503 ಪ್ರಕರಣಗಳು ದಾಖಲಾಗಿದ್ದು, 79,800 ದಂಡ ಹಾಕಲಾಗಿದೆ. ಕುಡಿದು ವಾಹನ ಚಾಲನೆ ಮಾಡಿದವರ ವಿರುದ್ಧ 406 ಪ್ರಕರಣಗಳನ್ನು ಹಾಕಿ 7,81,300ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮೊಬೈಲ್-ಸಿಸಿಟಿವಿ ಕಣ್ಣು: ಸಂಚಾರಿ ನಿಯಮ ಉಲ್ಲಂಘನೆ ತಡೆಯಲು ಟ್ರಾಫಿಕ್‌ ಪೊಲೀಸರ ಕಾರ್ಯಾಚರಣೆ ಮಾತ್ರವಲ್ಲದೇ, ಪ್ರಮುಖ 13 ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ಜತೆಗೆ ಕಣ್ತಪ್ಪಿಸಿ ಓಡಿ ಹೋಗುವವರನ್ನು ಸೆರೆ ಹಿಡಿಯಲು ಟ್ರಾಫಿಕ್‌ ಪೊಲೀಸರಿಗೆ ಸಂಚಾರಿ ನಿಯಮ ಸುಧಾರಿತ ಆ್ಯಪ್‌ವುಳ್ಳ 50 ಮೊಬೈಲ್ಗಳನ್ನು ನೀಡಲಾಗಿದೆ. ಇವು ವಾಹನ ಸವಾರರ ಮೇಲೆ ಮೂರನೇ ಕಣ್ಣಾಗಿ ಕಾರ್ಯ ನಿರ್ವಹಿಸುತ್ತಿವೆ.

ಕ್ಯಾಮರಾ ಮತ್ತು ಸಿಸಿಟಿವಿಯಲ್ಲಿ ಸೆರೆಯಾಗುವ ದೃಶ್ಯಗಳು ನೇರವಾಗಿ ನಗರದ ಚೌಕ್‌ ಸರ್ಕಲ್ನಲ್ಲಿರುವ ಸಂಚಾರಿ ನಿಯಂತ್ರಣ ಕೊಠಡಿಯಲ್ಲಿ ವೀಕ್ಷಿಸಲಾಗುತ್ತಿದೆ. ಅಲ್ಲಿಂದ ವಾಹನದ ಸಂಖ್ಯೆ ಆಧಾರದ ಮೇಲೆ ಮನೆಗೆ ನೋಟಿಸ್‌ ಜಾರಿ ಮಾಡುವ ವ್ಯವಸ್ಥೆ ಕಳೆದ ಒಂದು ತಿಂಗಳಿಂದ ಜಾರಿಯಲ್ಲಿದೆ. ಇದುವರೆಗೆ 1,100 ನೋಟಿಸ್‌ಗಳನ್ನು ಸಂಚಾರ ನಿಯಮ ಉಲ್ಲಂಘಿಸಿದವರ ಮನೆಗಳಿಗೆ ರವಾನಿಸಲಾಗಿದೆ.

ಸೂಚಕ ಫಲಕ ಅಳವಡಿಸಿ: ರಸ್ತೆ ಸುರಕ್ಷತೆ ಸಂಬಂಧ ಪೊಲೀಸರು ಕೈಗೊಳ್ಳುತ್ತಿರುವ ಕ್ರಮಗಳನ್ನು ಸಾರ್ವಜನಿಕರು ಸ್ವಾಗತಿಸುತ್ತಿದ್ದಾರೆ. ಆದರೆ, ಪ್ರಮುಖ ಸ್ಥಳದಲ್ಲಿ ಸಂಚಾರ ನಿಯಮ ಫಲಕ, ನೋ ಪಾರ್ಕಿಂಗ್‌ ಫಲಕ, ರಸ್ತೆ ಗುರುತುಗಳ ಫಲಕಗಳು ಇಲ್ಲ. ಇವುಗಳನ್ನು ಅಳವಡಿಸುವ ಕೆಲಸವಾಗಬೇಕೆಂಬ ಒತ್ತಾಯ ನಾಗರಿಕರಿಂದ ಕೇಳಿ ಬಂದಿದೆ.

246 ದಾಖಲೆ ಅಮಾನತು
ಆಟೋಗಳಲ್ಲಿ ಮಿತಿ ಮೀರಿ ವಿದ್ಯಾರ್ಥಿಗಳು ಸಾಗಿಸುವುದು ಮತ್ತು ಸರಕು ವಾಹನಗಳಲ್ಲಿ ಜನರ ಸಾಗಾಟ ಕುರಿತ 246 ಪ್ರಕರಣಗಳು ದಾಖಲಾಗಿವೆ. ಸಂಚಾರ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ವಾಹನ ಪರವಾನಗಿ, ಚಾಲಕರ ಪರವಾನಗಿ ರದ್ದು ತೀರ್ಮಾನಿಸಲಾಗಿದ್ದು, ಈ ಸಂಬಂಧ ಆರ್‌ಟಿಒ ಅಧಿಕಾರಿಗಳಿಗೆ ಪೊಲೀಸರು ಶಿಫಾರಸು ಮಾಡಿದ್ದಾರೆ.

ಸಂಚಾರಿ ನಿಯಮ ಪಾಲಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಸಾರ್ವಜನಿಕರು, ವಾಹನ ಚಾಲಕರು, ಆಟೋ ಚಾಲಕರಿಗೆ ಜಾಗೃತಿ ಮೂಡಿಸಲಾಗುತ್ತಿದೆ. ಜತೆಗೆ ಒಂದು ದಿನ ವೇಗದ ಚಾಲನೆ, ಮತ್ತೂಂದು ದಿನ ಮೊಬೈಲ್ ಬಳಕೆ, ಇನ್ನೊಂದು ದಿನ ದಾಖಲೆ ಪರಿಶೀಲನೆ, ಹೀಗೆ ವೇಳಾಪಟ್ಟಿ ಹಾಕಿಕೊಂಡು ಕಾರ್ಯಾಚರಣೆ ನಡೆಸಲಾಗುತ್ತಿದೆ.
ಪ್ರಸನ್ನ ದೇಸಾಯಿ,
 ಹೆಚ್ಚುವರಿ ಎಸ್‌ಪಿ

ರಾಮ ಮಂದಿರ ವೃತ್ತದ ಸಮೀಪ ನೋ ಪಾರ್ಕಿಂಗ್‌ ಸ್ಥಳದಲ್ಲಿ ಕಾರು ನಿಲ್ಲಿಸಲಾಗಿದೆ ಎಂದು ಒಂದು ಸಾವಿರ ರೂ. ದಂಡದ ನೋಟಿಸ್‌ನ್ನು ಮನೆಗೆ ಕಳುಹಿಸಲಾಗಿತ್ತು. ದಂಡ ತುಂಬಿದ್ದೇನೆ. ಆದರೆ, ಅಲ್ಲಿ ವಾಹನ ನಿಲ್ಲಿಸಬೇಡಿ ಎನ್ನುವ ಯಾವ ಸೂಚಕ ಫಲಕವನ್ನು ಅಳವಡಿಸಿಲ್ಲ. ಹೀಗಾದರೆ ವಾಹನ ಎಲ್ಲಿ ನಿಲ್ಲಿಸಬೇಕೆಂದು ಸಾರ್ವಜನಿಕರಿಗೆ ಗೊತ್ತಾಗುವುದು ಹೇಗೆ?•ತಾತಾಗೌಡ ಪಾಟೀಲ,
ಕಾರು ಮಾಲೀಕ

ಟಾಪ್ ನ್ಯೂಸ್

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.