ರಾಮರಾವ್ ಮಹಾರಾಜರ ದರ್ಶನ ಪಡೆದ ಅಭ್ಯರ್ಥಿಗಳು
ಇಬ್ಬರೂ ನೆಚ್ಚಿಕೊಂಡಿದ್ದಾರೆ ಬಂಜಾರ ಮತ •ತಮ್ಮನ್ನೇ ಬೆಂಬಲಿಸುವಂತೆ ಗುರುಗಳಲ್ಲಿ ಮನವಿ
Team Udayavani, May 2, 2019, 11:27 AM IST
ಚಿಂಚೋಳಿ: ಬಿಜೆಪಿ ಅಭ್ಯರ್ಥಿ ಡಾ| ಅವಿನಾಶ ಜಾಧವ ಮಹಾರಾಷ್ಟ್ರದ ಪೌರಾದೇವಿ ಶಕ್ತಿಪೀಠದ ಪೂಜ್ಯ ಡಾ|ರಾಮರಾವ್ ಮಹಾರಾಜರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಕಲಬುರಗಿ/ಚಿಂಚೋಳಿ: ಚಿಂಚೋಳಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಗೆಲ್ಲುವ ಜಿದ್ದಿನಲ್ಲಿರುವ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಬಂಜಾರ ಸಮುದಾಯದ ಮತಬೇಟೆಗೆ ಇಳಿದಿದ್ದು. ಪೌರಾದೇವಿ ಪೀಠದ ಪೀಠಾಧಿಪತಿಗಳಾದ ಡಾ| ರಾಮರಾವ್ ಮಹಾರಾಜರ ಮೊರೆ ಹೋಗಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಸುಭಾಷ ರಾಠೊಡ ಮಹಾರಾಷ್ಟ್ರಕ್ಕೆ ತೆರಳಿ ರಾಮರಾವ್ ಮಹಾರಾಜರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಬೆನ್ನಲ್ಲೇ ಬಿಜೆಪಿ ಅಭ್ಯರ್ಥಿ ಡಾ| ಅವಿನಾಶ ಜಾಧವ ಕೂಡ ಆಶೀರ್ವಾದ ಪಡೆದಿದ್ದಾರೆ. ಬುಧವಾರ ಬೆಳಗ್ಗೆ ಸುಭಾಷ ರಾಠೊಡ ರಾಮರಾವ್ ಮಹಾರಾಜರನ್ನು ಭೇಟಿಯಾಗಿ ತಮ್ಮನ್ನು ಬೆಂಬಲಿಸುವಂತೆ ಗುರುಗಳಲ್ಲಿ ಮನವಿ ಮಾಡಿಕೊಂಡಿದ್ದರು ಎಂದು ಹೇಳಲಾಗಿತ್ತು.
ಇದಾದ ನಂತರ ಬುಧವಾರ ಸಂಜೆ ಬಿಜೆಪಿ ಅಭ್ಯರ್ಥಿ ಡಾ| ಅವಿನಾಶ ಜಾಧವ ಅವರು ಡಾ| ರಾಮರಾವ್ ಮಹಾರಾಜರನ್ನು ಭೇಟಿ ಮಾಡಿ ತಮ್ಮನ್ನು ಬೆಂಬಲಿಸುವಂತೆ ಕೋರಿದ್ದಾರೆ ಎನ್ನಲಾಗಿದೆ. ಚಿಂಚೋಳಿ ಕ್ಷೇತ್ರದಲ್ಲಿ ಬಂಜಾರಾ ಸಮುದಾಯದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅಲ್ಲದೇ, ಇಬ್ಬರೂ ಅಭ್ಯರ್ಥಿಗಳು ಬಂಜಾರಾ ಸಮುದಾಯಕ್ಕೆ ಸೇರಿದ್ದರಿಂದ ಸಮುದಾಯದ ಮತಗಳನ್ನು ಹೆಚ್ಚಾಗಿ ನೆಚ್ಚಿಕೊಂಡಿದ್ದಾರೆ.
• ರಾಠೊಡಗೆ ಶುಭ ಹಾರೈಕೆ: ಮೀಸಲು ಚಿಂಚೋಳಿ ಮತಕ್ಷೇತ್ರಕ್ಕೆ ಸ್ಪರ್ಧಿಸಿದ ಕಾಂಗ್ರೆಸ್ ಅಭ್ಯರ್ಥಿ ಸುಭಾಶ ರಾಠೊಡ ನಾಮಪತ್ರ ಸಲ್ಲಿಸಿದ ಮರುದಿನವೇ ಮಹಾರಾಷ್ಟ್ರದ ಪೌರಾದೇವಿ ಬಳಿ ಸಮಾಜದ ಮುಖಂಡರೊಂದಿಗೆ ಭೇಟಿ ನೀಡಿ ಪೌರಾದೇವಿ ಶಕ್ತಿಪೀಠದ ಬಂಜಾರಾ ಧರ್ಮಗುರು ಪೂಜ್ಯ ಡಾ| ರಾಮರಾವ ಮಹಾರಾಜರ ಆಶೀರ್ವಾದ ಪಡೆದುಕೊಂಡಿದ್ದಾರೆ.
ಪೂಜ್ಯರು ಈ ಸಂದರ್ಭದಲ್ಲಿ ಮಾತನಾಡಿ, ಬಂಜಾರಾ ಸಮಾಜದ ಏಳ್ಗೆ, ಪ್ರಗತಿ ಹಾಗೂ ಅಭಿವೃದ್ದಿಗಾಗಿ ಕಳೆದ 25 ವರ್ಷಗಳಿಂದ ಸುಭಾಶ ರಾಠೊಡ ಹೋರಾಟ ನಡೆಸುತ್ತಲೇ ಬರುತ್ತಿದ್ದಾರೆ. ಒಳ್ಳೆಯ ಸಮಾಜದ ಕಾಳಜಿಯುಳ್ಳ ಸುಭಾಶ ರಾಠೊಡ ಅವರಿಗೆ ಯಶಸ್ಸು ಸಿಗಲಿ ಎಂದು ಹಾರೈಸಿದ್ದಾರೆ ಎಂದು ಸಮಾಜದ ಮುಖಂಡ ತುಕಾರಾಮ ಪವಾರ ತಿಳಿಸಿದ್ದಾರೆ. ತಾಲೂಕು ಬಂಜಾರಾ ಸಮಾಜದ ಮುಖಂಡರಾದ ಜಗನ್ನಾಥ ರಾಠೊಡ, ಮೇಘರಾಜ ರಾಠೊಡ, ಚಂದರ ಕಾರಬಾರಿ, ತಾಲೂಕು ಬಂಜಾರಾ ಸಮಾಜದ ಅಧ್ಯಕ್ಷ ರಾಮಶೆಟ್ಟಿ ಪವಾರ, ಸುನೀಲ ರಾಠೊಡ, ಅಶೋಕ ಚವ್ಹಾಣ, ಪ್ರೇಮಸಿಂಗ ಜಾಧವ ಹಾಗೂ ಇನ್ನಿತರರು ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Mangaluru: ಪಂಪ್‌ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Kundapura: ಅಕಾಲಿಕ ಮಳೆ; ಭತ್ತ ಕಟಾವಿಗೆ ಅಡ್ಡಿ; ಬೆಳೆ ನಾಶದ ಭೀತಿಯಲ್ಲಿ ರೈತರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.