ಸುಗಮ ಮತ ಎಣಿಕೆ ನಡೆಸಿ
23ರಂದು ಗುಲ್ಬರ್ಗಾ ವಿವಿಯಲ್ಲಿ ಮತ ಎಣಿಕೆ •ಸಿಬ್ಬಂದಿ-ಅಧಿಕಾರಿಗಳಿಗೆ ತರಬೇತಿ
Team Udayavani, May 17, 2019, 1:02 PM IST
ಕಲಬುರಗಿ: ನಗರದಲ್ಲಿ ನಡೆದ ಗುಲಬರ್ಗಾ ಲೋಕಸಭೆ ಹಾಗೂ ಚಿಂಚೋಳಿ ವಿಧಾನಸಭಾ ಉಪಚುನಾವಣೆ ಮತ ಎಣಿಕೆ ಸಿಬ್ಬಂದಿ ತರಬೇತಿಯಲ್ಲಿ ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ ಮಾತನಾಡಿದರು.
ಕಲಬುರಗಿ: ಗುಲಬರ್ಗಾ ಮೀಸಲು (ಎಸ್.ಸಿ) ಲೋಕಸಭಾ ಕ್ಷೇತ್ರ ಮತ್ತು ಚಿಂಚೋಳಿ ಮೀಸಲು (ಎಸ್.ಸಿ) ವಿಧಾನಸಭಾ ಉಪಚುನಾವಣೆಯ ಮತಎಣಿಕೆ ಮೇ 23ರಂದು ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ನಡೆಯಲಿದ್ದು, ಮತಎಣಿಕೆ ಕಾರ್ಯವನ್ನು ಸುಗಮವಾಗಿ ನಡೆಸಬೇಕು. ಈ ನಿಟ್ಟಿನಲ್ಲಿ ಅಂದು ಸರಿಯಾದ ಸಮಯಕ್ಕೆ ತಮ್ಮನ್ನು ನಿಯೋಜಿಸಿರುವ ಆಯಾ ವಿಧಾನಸಭಾವಾರು ಮತ ಎಣಿಕೆ ಕೇಂದ್ರಕ್ಕೆ ಹಾಜರಾಗಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ವೆಂಕಟೇಶ್ ಕುಮಾರ ಮತ ಎಣಿಕೆ ಸಿಬ್ಬಂದಿಗಳಿಗೆ ಸೂಚಿಸಿದ್ದಾರೆ.
ನಗರದ ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ಮತ ಎಣಿಕೆ ದಿನದಂದು ನಿರ್ವಹಿಸಬೇಕಾದ ಕರ್ತವ್ಯಗಳ ಕುರಿತು ಮತ ಎಣಿಕೆ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮತ ಎಣಿಕೆಯ ದಿನದಂದು ವಿವಿಯ ಮುಖ್ಯದ್ವಾರದಲ್ಲಿ ರ್‍ಯಾಂಡಮೈಸೇಷನ್ (ಯಾದೃಚ್ಛೀಕರಣ) ಮಾಡಲ್ಪಟ್ಟಿರುವ ಚುನಾವಣಾ ಸಿಬ್ಬಂದಿಯ ಪಟ್ಟಿಯನ್ನು ಮುಂಜಾನೆ 5:30ಕ್ಕೆ ಫಲಕದಲ್ಲಿ ಪ್ರದರ್ಶಿಸಲಾಗುವುದು. ಈ ಸಂಬಂಧ ಅಂದು ಬೆಳಿಗ್ಗೆ ಎಲ್ಲರ ಮೊಬೈಲ್ಗಳಿಗೆ ಸಂದೇಶಗಳು ಕೂಡ ಬರಲಿವೆ. ಸಿಬ್ಬಂದಿ ಮುಂಜಾನೆ ವಿವಿ ಮುಖ್ಯದ್ವಾರದ ಬಳಿ 6 ಗಂಟೆಗೆ ಆಗಮಿಸಿ, ತಮ್ಮನ್ನು ಯಾವ ಮತ ಎಣಿಕೆ ಕೇಂದ್ರಕ್ಕೆ ನಿಯೋಜಿಸಲಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು.
ಬಳಿಕ ಮುಖ್ಯದ್ವಾರದಿಂದ ಆಯಾ ಮತ ಎಣಿಕೆ ಕೇಂದ್ರಕ್ಕೆ ಸರ್ಕಾರಿ ಬಸ್ ವ್ಯವಸ್ಥೆ ಮಾಡಲಾಗಿದ್ದು, ಅದರಲ್ಲಿ ತೆರಳಬೇಕು. ನಂತರ ಆಯಾ ಮತ ಎಣಿಕೆ ಕೇಂದ್ರ (ವಿಧಾನಸಭಾವಾರು)ದ ಸಹಾಯಕ ಚುನಾವಣಾಧಿಕಾರಿಗಳ ಬಳಿ ವರದಿ ಮಾಡಿಕೊಂಡು, ರ್‍ಯಾಂಡಮೈಸೇಷನ್ ಮಾಡಲ್ಪಟ್ಟ ಟೇಬಲ್ಗಳಿಗೆ ಹೋಗಿ ಆಸಿನರಾಗಬೇಕು ಎಂದರು.
ಲೋಕಸಭೆಯ ಪ್ರತಿ ವಿಧಾನಸಭಾ ಮತ ಎಣಿಕೆ ಕೇಂದ್ರಕ್ಕೆ 5 ರಿಂದ 10 ಮಂದಿ ಕಾಯ್ದಿರಿಸಿದ (ಹೆಚ್ಚುವರಿ) ಸಿಬ್ಬಂದಿ ನಿಯೋಜಿಸಲಾಗುತ್ತಿದ್ದು, ಮತ ಎಣಿಕೆ ಪ್ರಕ್ರಿಯೆ ಮುಗಿಯುವವರೆಗೂ ಕಡ್ಡಾಯವಾಗಿ ಕೇಂದ್ರದಲ್ಲೇ ಇರಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಪ್ರತಿ ಸುತ್ತು ಮತ ಎಣಿಕೆ ಕುರಿತ ಪತ್ರಗಳಿಗೆ ಆಯಾ ಟೇಬಲ್ ಏಜೆಂಟರ ಸಹಿ ಕಡ್ಡಾಯವಾಗಿ ಮಾಡಿಸಬೇಕು. ಇಲ್ಲದಿದ್ದರೆ ಮುಂದೆ ಅಭ್ಯರ್ಥಿ ಅಥವಾ ರಾಜಕೀಯ ಪಕ್ಷಗಳು ಆಕ್ಷೇಪಣೆ ಸಲ್ಲಿಸಬಹುದು. ಹಾಗಾಗಿ ತಪ್ಪದೇ ಸಹಿ ಮಾಡಿಸಿಕೊಳ್ಳಬೇಕು ಎಂದು ಸಿಬ್ಬಂದಿಗೆ ಸೂಚಿಸಿದರು.
ಈ ಬಾರಿ ಪ್ರತಿ ವಿಧಾನಸಭಾ ಕ್ಷೇತ್ರದ 5 ವಿವಿಪ್ಯಾಟ್‌ಗಳ ಸ್ಲಿಪ್ ಎಣಿಕೆ ಸಹ ಮಾಡಬೇಕಾಗಿರುವುದರಿಂದ ಯಾವುದೇ ಗೊಂದಲವಾಗದಂತೆ ಎಣಿಸಬೇಕು. ಪ್ರತಿಬಾರಿ 12:30ರ ವರೆಗೆ ಫಲಿತಾಂಶ ಹೊರಬೀಳುತ್ತಿತ್ತು. ಈ ಬಾರಿ ವಿವಿಪ್ಯಾಟ್‌ಗಳ ಸ್ಲಿಪ್ ಮತ ಎಣಿಕೆಯಿಂದಾಗಿ ಮಧ್ಯಾಹ್ನ 3 ಅಥವಾ 4 ಗಂಟೆಗೆ ಫಲಿತಾಂಶ ಬರಬಹುದು ಎಂದು ಅವರು ತಿಳಿಸಿದರು. ಸೇಡಂ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಡಾ| ಶಶಿಶೇಖರ್ ರೆಡ್ಡಿ ಮಾತನಾಡಿದರು. ಚಿಂಚೋಳಿ ಮೀಸಲು (ಎಸ್.ಸಿ) ವಿಧಾನಸಭಾ ಉಪಚುನಾವಣೆಗೆ ನೇಮಕವಾಗಿರುವ ಸಾಮಾನ್ಯ ವೀಕ್ಷಕ ಬಿ.ರಾಮರಾವ್, ಉಪ ಚುನಾವಣೆಯ ಚುನಾವಣಾಧಿಕಾರಿ ಸೋಮಶೇಖರ್ ಎಸ್.ಜಿ, ಪಾಲಿಕೆ ಆಯುಕ್ತೆ ಫೌಜಿಯಾ ಬಿ. ತರನ್ನುಮ, ಜಿಪಂ ಉಪ ಕಾರ್ಯದರ್ಶಿ ಅಶೋಕ್ ದುಡಗುಂಟಿ, ಕೆ. ರಾಮೇಶ್ವರಪ್ಪ, ಸುಧೀಂದ್ರ ಅವಧಾನಿ, ಎಲ್ಲಾ ಸಹಾಯಕ ಚುನಾವಣಾಧಿಕಾರಿ ಹಾಗೂ ತಹಶೀಲ್ದಾರರು ಹಾಜರಿದ್ದರು.
ವಿವಿಯ ಪರೀಕ್ಷಾ ವಿಭಾಗದ ಹಾಲ್ನಲ್ಲಿ ಚಿತ್ತಾಪುರ, ಗುಲ್ಬರ್ಗಾ ಗ್ರಾಮೀಣ ಹಾಗೂ ಜೇವರ್ಗಿ ವಿಧಾನಸಭಾ ಕ್ಷೇತ್ರ, ಒಳಾಂಗಣ ಕ್ರೀಡಾಂಗಣದಲ್ಲಿ ಗುಲ್ಬರ್ಗಾ ಉತ್ತರ ಮತ್ತು ಗುರುಮಠಕಲ್ ಮತಕ್ಷೇತ್ರ, ಗಣಿತಶಾಸ್ತ್ರ ವಿಭಾಗದಲ್ಲಿ ಅಫಜಲಪುರ ಹಾಗೂ ಸಸ್ಯಶಾಸ್ತ್ರ ವಿಭಾಗದಲ್ಲಿ ಗುಲ್ಬರ್ಗಾ ದಕ್ಷಿಣ ಮತಕ್ಷೇತ್ರ, ಕನ್ನಡ ಅಧ್ಯಯನ ಕೇಂದ್ರ ಸಭಾಂಗಣ (ನೆಲಮಹಡಿ) ಸೇಡಂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯಲಿವೆ. ಹಾಗೆಯೇ ಕನ್ನಡ ಅಧ್ಯಯನ ಕೇಂದ್ರ ಸಭಾಂಗಣದ ಮೊದಲ ಮಹಡಿಯಲ್ಲಿ ಚಿಂಚೋಳಿ ವಿಧಾನಸಭಾ ಉಪಚುನಾವಣೆ ಮತ ಎಣಿಕೆ ನಡೆಯಲಿದೆಂದು ಅಪರ ಜಿಲ್ಲಾಧಿಕಾರಿ ಟಿ. ಯೋಗೇಶ್ ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.