ಮತದಾರ ಪಟ್ಟಿ ಪರಿಶೀಲನೆ ಯಶಸ್ವಿಗೊಳಿಸಿ
ಶಾಲಾ-ಕಾಲೇಜಿನಲ್ಲಿ ಅರಿವು ಮೂಡಿಸಿಕುಟುಂಬ ಸದಸ್ಯರ ಪಟ್ಟಿ ಪರಿಷ್ಕರಿಸಲು ತಿಳಿಸಿ
Team Udayavani, Sep 29, 2019, 10:57 AM IST
ಕಲಬುರಗಿ: ಜಿಲ್ಲೆಯಲ್ಲಿ ವೋಟರ್ ಹೆಲ್ಫ್ಫ್ ಲೈನ್ ಆ್ಯಪ್ ಬಳಸಿ ಮೊಬೈಲ್ ಮೂಲಕ ದಾಖಲೆ ಪ್ರಮಾಣದಲ್ಲಿ ಮತದಾರರ ಪಟ್ಟಿ ಪರಿಶೀಲನೆ ಮಾಡಿ, ಯಶಸ್ವಿಗೊಳಿಸಬೇಕು ಎಂದು ವಿವಿಧ ಇಲಾಖೆ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಶರಣಪ್ಪ ಸತ್ಯಂಪೇಟ್ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮತದಾರರ ಪಟ್ಟಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಶಿಕ್ಷಣ, ಪೊಲೀಸ್, ಆರೋಗ್ಯ, ಎನ್‌ಇಕೆಆರ್ ಟಿಸಿ ಮುಂತಾದ ಇಲಾಖೆಗಳ ಸಿಬ್ಬಂದಿ, ಅಧಿಕಾರಿಗಳು, ಅವರ ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಸ್ವಯಂ ಆಗಿ ಮತದಾರರ ಪಟ್ಟಿ ಪರಿಶೀಲನೆ ಮಾಡಿಕೊಳ್ಳಬೇಕು ಎಂದರು.
ಶಾಲಾ-ಕಾಲೇಜುಗಳ ಪ್ರಾಂಶುಪಾಲರು ಮುತುವರ್ಜಿ
ವಹಿಸಿ, ಶಾಲಾ-ಕಾಲೇಜು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳ ಮತದಾರರ ಪಟ್ಟಿ ಪರಿಶೀಲನೆ ಮಾಡಿಸಬೇಕು. ನಂತರ ಅವರ ಕುಟುಂಬ ಸದಸ್ಯರ ಪಟ್ಟಿಯನ್ನು ಪರಿಷ್ಕರಿಸಲು ತಿಳಿಹೇಳಬೇಕು ಎಂದರು.
ವಿಶೇಷ ಪರಿಷ್ಕರಣೆ ಸಂದರ್ಭದಲ್ಲಿ ಮತದಾರರ ಪಟ್ಟಿಯಲ್ಲಿನ ವಿವರಗಳನ್ನು ಮತದಾರರಿಗೆ ತೋರಿಸಿ, ಅಗತ್ಯವಿದ್ದಲ್ಲಿ ಸಾರ್ವಜನಿಕರಿಂದ ತಿದ್ದುಪಡಿಗೆ ಪಾಸ್ ಪೋರ್ಟ್, ಚಾಲನಾ ಪರವಾನಗಿ, ಆಧಾರ್, ಪಡಿತರ ಚೀಟಿ, ಚುನಾವಣಾ ಆಯೋಗ ತಿಳಿಸಿರುವ ಇನ್ನಿತರ ಯಾವುದೇ ದಾಖಲೆಗಳ ಪೈಕಿ ಒಂದನ್ನು ಪಡೆದು ಮತದಾರರಿಂದ ದೃಢೀಕರಿಸಿಕೊಳ್ಳಬೇಕು ಎಂದು ಹೇಳಿದರು.
ನಮೂನೆ 6,7,8,8ಎ ಜೊತೆಗೆ ಈ ಬಾರಿ ವಿದೇಶದಲ್ಲಿರುವ ಭಾರತೀಯರನ್ನು ಮತದಾರರ ಪಟ್ಟಿಗೆ ಸೇರಿಸಲು 6ಎ ಮತ್ತು ಚುನಾವಣಾ ಗುರುತನ್ನು ಪುನಃ ವಿತರಿಸಲು 001 ನಮೂನೆಯಲ್ಲಿ ಮತದಾರರಿಂದ ಬಿ.ಎಲ್.ಒಗಳು ಮಾಹಿತಿ ಕಲೆ ಹಾಕಬೇಕು ಎಂದರು.
ಸಹಾಯಕ ಆಯುಕ್ತ ಡಾ| ಗೋಪಾಲಕೃಷ್ಣ ರಾಘವೇಂದ್ರ ಮಾತನಾಡಿ, ತುಮಕೂರು ಜಿಲ್ಲೆಯಲ್ಲಿ ಎಲ್ಲ ಅಧಿಕಾರಿಗಳು ಪ್ರಮುಖವಾಗಿ ಶಾಲಾ-ಕಾಲೇಜುಗಳು ಕೈಜೋಡಿಸುವ ಮೂಲಕ 22 ಲಕ್ಷ ಜನಸಂಖ್ಯೆಯಲ್ಲಿ ಈಗಾಗಲೇ ಮೊಬೈಲ್ ಮೂಲಕ 50 ಸಾವಿರ ಜನರ ಮತದಾರರ ಪಟ್ಟಿ ಪರಿಶೀಲನೆ ಮುಗಿದಿದೆ. ಕಲಬುರಗಿ ಜಿಲ್ಲೆಯಲ್ಲೂ ಅಷ್ಟೆ ಜನಸಂಖ್ಯೆ ಇದ್ದು, ಕಡಿಮೆ ಮತದಾರರು ತಮ್ಮ ಮತದಾರರ ಪಟ್ಟಿ ಪರಿಶೀಲನೆ ಮಾಡಿಕೊಂಡಿದ್ದಾರೆ.
ನಾವು ಕೂಡ ತುಮಕೂರಿನಂತೆ ಕೆಲಸ ಮಾಡುವ ಮೂಲಕ ಯಶಸ್ವಿಯಾಗಬೇಕು ಎಂದರು. ಶಿಷ್ಟಾಚಾರ ತಹಶೀಲ್ದಾರ್ ಪ್ರಕಾಶ ಚಿಂಚೋಳಿಕರ್ ಮಾತನಾಡಿ, ಅ. 15ರೊಳಗೆ ಮತದಾರರ ಪಟ್ಟಿ ಪರಿಶೀಲನೆ ಸಂಪೂರ್ಣ ಮುಗಿಯಬೇಕು. ನಂತರ ಮನೆಮನೆಗೆ ತೆರಳಿ ಬಿಎಲ್‌ಒ ಪರಿಶೀಲನೆ ನಡೆಸಲಿದ್ದಾರೆ ಎಂದರು.
ಜಿಲ್ಲಾ ಮಾಸ್ಟರ್ ಟ್ರೆ„ನರ್ ಡಾ| ಶಶಿಶೇಖರ್ ರೆಡ್ಡಿ, ಅಂಗವಿಕಲರು 1950ಗೆ ಕರೆ ಮಾಡುವ ಮೂಲಕ ತಮ್ಮ ಮತದಾರರ ಪಟ್ಟಿ ಪರಿಷ್ಕರಿಸಬಹುದಾಗಿದೆ ಎಂದು ತಿಳಿಸಿದರು.
ಎಲ್ಲ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿ ಕಾರಿಗಳು, ಜಿಲ್ಲಾ ಮತ್ತು ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು, ಪಿಯುಸಿ ಹಾಗೂ ಪದವಿ ಕಾಲೇಜುಗಳ ಪ್ರಾಂಶುಪಾಲರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
WPL 2025: ವನಿತಾ ಪ್ರೀಮಿಯರ್ ಲೀಗ್ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ
PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.