13 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನಕ್ಕೆ ಆಯ್ಕೆ
Team Udayavani, Dec 2, 2018, 11:09 AM IST
ಕಲಬುರಗಿ: ಸಾಫ್ಟವೇರ್ ಕ್ಷೇತ್ರದ ಪ್ರಮುಖ ಕಂಪನಿ ಎಂಫ್ ಸಿಸ್ ಶರಣಬಸವ ವಿವಿ ಆವರಣದಲ್ಲಿ ನಡೆಸಿದ ಕ್ಯಾಂಪಸ್
ಸಂದರ್ಶನದಲ್ಲಿ ನಗರದ ಅಪ್ಪಾ ಇನ್ಸಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಹಾಗೂ ಗೋದುತಾಯಿ ಮಹಿಳಾ ಇಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ 13 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಅಸೋಷಿಯೇಟ್ ಸಾಫ್ಟವೇರ್ ಇಂಜಿನಿಯರ್ ಹುದ್ದೆಗೆ ಆಯ್ಕೆಯಾಗಿದ್ದಾರೆ. ಇದರಲ್ಲಿ ಒಂಭತ್ತು ಬಾಲಕಿಯರು ಹಾಗೂ ನಾಲ್ವರು ಬಾಲಕರು ಸೇರಿದ್ದಾರೆ.
ಆಯ್ಕೆಯಾದ ವಿದ್ಯಾರ್ಥಿಗಳು ಪ್ರತಿ ವರ್ಷ ಆರಂಭಿಕ 2.80 ಲಕ್ಷ ರೂ. ವೇತನ ಪಡೆಯಲಿದ್ದಾರೆ. ಬೆಂಗಳೂರಿನ ಎಂಫ್‌ಸಿಸ್ ಕಂಪನಿ ತಂಡವು ನಡೆಸಿದ ಕ್ಯಾಂಪಸ್ ಸಂದರ್ಶನದಲ್ಲಿ ಅಪ್ಪಾ ಇನ್ಸಿಟ್ಯೂಟ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ, ಗೋದುತಾಯಿ ಮಹಿಳಾ ಇಂಜಿನಿಯರಿಂಗ್ ಕಾಲೇಜು, ಬೀದರನ ಲಿಂಗರಾಜಪ್ಪ ಇಂಜಿನಿಯರಿಂಗ್ ಕಾಲೇಜು, ಯಾದಗಿರಿ ಜಿಲ್ಲೆಯ ಸುರಪುರದ ವೀರಪ್ಪ
ನಿಷ್ಟಿ ಇಂಜಿನಿಯರಿಂಗ್ ಕಾಲೇಜಿನ ಮತ್ತು ದೊಡ್ಡಪ್ಪ ಅಪ್ಪ ಇನ್ಸಟ್ಯೂಟ್ ಆಫ್ ಮಾಸ್ಟರ್ ಆಫ್ ಕಂಪ್ಯೂಟರ್ ಅಫ್ಲಿಕೇಷನ್‌ನ 324ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಭಾಗವಹಿಸಿದ್ದರು.
ಆಯ್ಕೆಯಾದ ವಿದ್ಯಾರ್ಥಿಗಳು ಬೆಂಗಳೂರಿನ ಎಂಫಸಿಸ್ ಕಚೇರಿಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಏಳನೇ ಸೆಮಿಸ್ಟರನ ವಿದ್ಯಾರ್ಥಿಗಳು ಯಶಸ್ವಿಯಾಗಿ ಕ್ಯಾಂಪನ್ ಸಂದರ್ಶನ ಎದುರಿಸಿದ್ದು ಅದರಲ್ಲಿ ಅಪ್ಪಾ ಇನ್ಸಿಟ್ಯೂಟ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ಮೇಘನಾ ಬಂಡಿ, ಮಹಿಮಾ ಚಿಲ್ಲಾಪುರ, ಪ್ರೇಮಸಾಗರ, ತೋಟೆಂದ್ರ ಮಠಪತಿ, ಶ್ರದ್ಧಾ ನೀಲಶೆಟ್ಟಿ, ಅಕ್ಷತಾ, ಅಂಜಲಿ ವಿಜಾಪುರೆ, ಸೌಮ್ಯ ರಾಜಗಿರಿ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದ ಸರ್ವೋತ್ತಮ ಕುಲಕರ್ಣಿ, ರಕ್ಷಿತ, ಸಭಾ, ಕೃಷ್ಣ ಮಹೇಂದ್ರಕರ್, ಗೋದುತಾಯಿ ಮಹಿಳಾ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಮೀನಾಕುಮಾರಿ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಹಾಗೂ ಕಾಲೇಜಿಗೆ ಕೀರ್ತಿ ತರಲು ಕಾರಣರಾದ
ಬೋಧಕ ಸಿಬ್ಬಂದಿಗಳನ್ನು ಶರಣಬಸವ ವಿಶ್ವವಿದ್ಯಾಲಯದ ಕುಲಾ ಧಿಪತಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಪರಮ ಪೂಜ್ಯ ಡಾ| ಶರಣಬಸವಪ್ಪ ಅಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ.
ಕುಲಪತಿ ಡಾ| ನಿರಂಜನ ನಿಷ್ಟಿ, ಸಮ ಕುಲಪತಿ ಡಾ| ವಿ.ಡಿ. ಮೈತ್ರಿ, ಕುಲಸಚಿವ ಡಾ| ಅನಿಲಕುಮಾರ ಬಿಡವೆ, ಡೀನ್ ಡಾ| ಲಿಂಗರಾಜ ಶಾಸ್ತ್ರೀ, ಗೋದುತಾಯಿ ಮಹಿಳಾ ಇಂಜಿನಿಯರಿಂಗ್ ಕಾಲೇಜಿನ ಡೀನ್ ಪ್ರೊ| ಲಕ್ಷ್ಮೀ ಮಾಕಾ, ಪ್ಲೇಸ್‌ಮೆಂಟ್ ಸೆಲನ ಶಿವುಕುಮಾರ ಕಾಗಿ ವಿದ್ಯಾರ್ಥಿಗಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.