7,335 ನೌಕರರಿಗೆ 14.5 ಕೋಟಿ ವೇತನ


Team Udayavani, Apr 14, 2021, 2:32 PM IST

7,335 ನೌಕರರಿಗೆ 14.5 ಕೋಟಿ ವೇತನ

ಕಲಬುರಗಿ: ಈ ಬಾರಿಯ ಯುಗಾದಿ ಹಬ್ಬ ಸಾರಿಗೆ ನೌಕರರ ಪಾಲಿಗೆ ಅಕ್ಷರಶಃ ಬೇವು-ಬೆಲ್ಲವಾಗಿ ಪರಿಣಮಿಸಿದೆ. ಕರ್ತವ್ಯ ನಿರ್ವಹಿಸಿದ ನೌಕರರು ಸಂಬಳದ”ಸಿಹಿ’ ಕಂಡದಿದ್ದರೆ, ಮುಷ್ಕರದ ಭಾಗವಾಗಿ ಕರ್ತವ್ಯದಿಂದ ದೂರು ಉಳಿದ ನೌಕರರು “ಕಹಿ’ ಅನುಭವಿಸುವಂತಾಗಿದೆ. ಮತ್ತೆ ಕೆಲ ನೌಕರರು ಕೆಲಸವನ್ನೇ ಕಳೆದುಕೊಂಡು ನೋವು ಪಡುವಂತೆ ಆಗಿದೆ.

ಆರನೇ ವೇತನ ಆಯೋಗದ ಅನ್ವಯ ಸಂಬಳ ಜಾರಿಮಾಡಬೇಕೆಂದು ಆಗ್ರಹಿಸಿ ಕಳೆದ ಆರು ದಿನಗಳಿಂದರಾಜ್ಯಾದ್ಯಂತ ಮುಷ್ಕರ ಮುಂದುವರಿದಿದೆ. ಮುಷ್ಕರದನಡುವೆಯೂ ಕರ್ತವ್ಯ ನಿರ್ವಹಿಸಿದ ನೌಕರರಿಗೆ ಸೋಮವಾರ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಮಾರ್ಚ್‌ ತಿಂಗಳ ವೇತನ ಪಾವತಿಸಿದೆ. ಈಶಾನ್ಯ  ಸಾರಿಗೆಸಂಸ್ಥೆಯ ಕೇಂದ್ರ ಕಚೇರಿ ಮತ್ತು ಕಲ್ಯಾಣ ಕರ್ನಾಟಕದಏಳು ಜಿಲ್ಲೆಗಳು ಮತ್ತು ಪಕ್ಕದ ವಿಜಯಪುರ ಸೇರಿ ಒಟ್ಟು 8 ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸಿದ ಒಟ್ಟು 7,335 ಸಿಬ್ಬಂದಿಗೆ 14.5 ಕೋಟಿ ರೂ.ಗೂ ಅಧಿಕ ಸಂಬಳ ಪಾವತಿಸಲಾಗಿದೆ.

ನೌಕರರ ಮನವೊಲಿಸುವ ಮೂಲಕ ಸೋಮವಾರಸಂಜೆಯವರೆಗೆ ಒಟ್ಟು 506 ಸಾರಿಗೆ ಬಸ್‌ಗಳುಕಾರ್ಯಾಚರಣೆ ಮಾಡಲಾಗಿದೆ. ಈಶಾನ್ಯ ಸಾರಿಗೆಸಂಸ್ಥೆಯ ಎಲ್ಲ ಜಿಲ್ಲೆಗಳಲ್ಲಿ ಬೇರೆ-ಬೇರೆ ಮಾರ್ಗಗಳಲ್ಲಿಸಾರಿಗೆ ಬಸ್‌ಗಳನ್ನು ಓಡಿಸಲಾಗಿದೆ. ಮುಷ್ಕರದ ಮೊದಲದಿನ ಎಂದರೆ ಏ.7ರಂದು ಕೇವಲ 101 ಬಸ್‌ಗಳು, ನಂತರಏ.8ರಂದು 144 ಬಸ್‌ಗಳು, ಏ.9ರಂದು 221 ಬಸ್‌ಗಳು,ಏ.10ರಂದು 339 ಬಸ್‌ಗಳು ಸಂಚರಿಸಿದ್ದವು. ಸಾರ್ವಜನಿಕ ಪ್ರಯಾಣಿಕರಿಗೆ ಅನಾನುಕೂಲವಾಗದಂತೆ ಸಾರಿಗೆ ಬಸ್‌ ನಿಲ್ದಾಣಗಳ ಮೂಲಕವೇ ಖಾಸಗಿ ಬಸ್‌ಗಳನ್ನು ಸಂಚರಿಸಲಾಗುತ್ತಿದ್ದು, ಸೋಮವಾರ 421 ಖಾಸಗಿ ಬಸ್‌ಗಳು ಕಾರ್ಯಾಚರಣೆ ನಡೆಸಿವೆ.

ಅಲ್ಲದೇ, ನೆರೆ ರಾಜ್ಯದ ತೆಲಂಗಾಣ ಮತ್ತು ಆಂಧ್ರಪ್ರದೇಶದ 242 ಸಾರಿಗೆ ಬಸ್‌ಗಳು ಹಾಗೂ ಜೀಪ್‌, ಕ್ರೂಸರ್‌ ಸೇರಿದಂತೆ 2,776 ಇತರ ವಾಹನಗಳ ಕಾರ್ಯಾಚರಣೆ ಮಾಡಿಸಲಾಗಿದೆ.

ಮತ್ತಷ್ಟು ನೌಕರರ ವಜಾ: ಮುಷ್ಕರದಲ್ಲಿ ಪಾಲ್ಗೊಂಡುಕರ್ತವ್ಯಕ್ಕೆ ಗೈರಾದ ಮತ್ತಷ್ಟು ನೌಕರರನ್ನೂ ಸೇವೆಯಿಂದ ವಜಾಗೊಳಿಸಲಾಗಿದ್ದು, ಸೋಮವಾರ ಒಟ್ಟು ವಜಾಗೊಂಡವರ ಸಂಖ್ಯೆ 45ಕ್ಕೆ ಏರಿಕೆಯಾಗಿದೆ. ಇದರಲ್ಲಿ13 ಚಾಲಕರು, 6 ನಿರ್ವಾಹಕರು, 22 ಚಾಲಕರು ಕಂನಿರ್ವಾಹಕರು, ಇಬ್ಬರು ತಾಂತ್ರಿಕ ಸಹ ಸೇರಿದ್ದಾರೆ.ಮುಷ್ಕರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆಕೊಪ್ಪಳ ವಿಭಾಗದಲ್ಲಿ ಇಬ್ಬರು ನೌಕರರ ಹಾಗೂ ಕರ್ತವ್ಯಕ್ಕೆಹಾಜರಾಗಿ ಬಸ್‌ ಕಾರ್ಯಾಚರಣೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ವಿಜಯಪುರ ವಿಭಾಗದಲ್ಲಿ ಇಬ್ಬರುನೌಕರರ ಮೇಲೆ ಪೊಲೀಸ್‌ ಪ್ರಕರಣ ದಾಖಲಿಸಲಾಗಿದೆ.ಮುಷ್ಕರದ ಹಿನ್ನೆಲೆಯಲ್ಲಿ ಈಶಾನ್ಯ ಸಾರಿಗೆ ಸಂಸ್ಥೆಗೆಏ.7ರಿಂದ ಸೋಮವಾರದರವರೆಗೆ ಒಟ್ಟು 27 ಕೋಟಿ ರೂ.ಗಳಷ್ಟು ಆದಾಯ ಖೋತಾ ಆಗಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ಎಂ.ಕೂರ್ಮಾರಾವ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

Wadi-Pro

Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್‌ ಪ್ರತಿಭಟನೆ, ವಾಡಿ ಬಂದ್

Sharana-Patil

Covid Scam: ಕೋವಿಡ್‌ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌

All set for the Indian Cultural Festival

Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.