15 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ
Team Udayavani, Oct 19, 2021, 12:13 PM IST
ಜೇವರ್ಗಿ: ಪಟ್ಟಣದ ಆರಾಧ್ಯ ದೇವತೆ ಮಹಾಲಕ್ಷ್ಮೀ ದೇವಸ್ಥಾನದಿಂದ ಅಂಚೆ ಕಚೇರಿವರೆಗೆ 15 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಯಿತು.
ಪುರಸಭೆಯ 14ನೇ ಹಣಕಾಸು ಯೋಜನೆ ಅಡಿ ಸುಮಾರು 15 ಲಕ್ಷ ರೂ. ಅಂದಾಜು ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಸಿಸಿ ರಸ್ತೆ ಕಾಮಗಾರಿಗೆ ಪುರಸಭೆ ಉಪಾಧ್ಯಕ್ಷ ರಾಜು ರದ್ದೇವಾಡಗಿ ಚಾಲನೆ ನೀಡಿದರು.
ಕಳೆದ ಅನೇಕ ದಿನಗಳಿಂದ ದೇವಸ್ಥಾನದಿಂದ ಅಂಚೆ ಕಚೇರಿ ವರೆಗೆ ರಸ್ತೆ ಸಂಪೂರ್ಣ ಹದಗೆಟ್ಟಿತ್ತು. ಇದರಿಂದ ನಿತ್ಯ ದೇವಸ್ಥಾನಕ್ಕೆ ಬರುವ ಭಕ್ತಾದಿಗಳು ಪರದಾಡುವಂತೆ ಆಗಿತ್ತು. ಈ ಬಗ್ಗೆ ಹಲವಾರು ಬಾರಿ ಪುರಸಭೆ ಅಧಿಕಾರಿಗಳಿಗೆ ಸ್ಥಳೀಯರು ಮನವಿ ಮಾಡಿದ್ದರು. ಅಲ್ಲದೇ ಬರುವ ಅ.30ರಂದು ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಆಯೋಜಿಸಲಾಗಿದ್ದು, ಬುಧವಾರ ಸಿಸಿ ರಸ್ತೆ ಕಾಮಗಾರಿಗೆ ಅಧಿಕಾರಿಗಳು ಚಾಲನೆ ನೀಡಿರುವುದರಿಂದ ಸ್ಥಳೀಯರು ಹರ್ಷ ವ್ಯಕ್ತಪಡಿಸಿದ್ದಾರೆ.
ಪುರಸಭೆ ಮುಖ್ಯಾಧಿಕಾರಿ ಶರಣಯ್ನಾಸ್ವಾಮಿ ಹಿರೇಮಠ, ಕಿರಿಯ ಅಭಿಯಂತ ಮಲ್ಲಿಕಾರ್ಜುನ, ಶಿವಕುಮಾರ ಪಾಟೀಲ. ಪ್ರಮುಖರಾದ ಸಾಹೇಬಗೌಡ ಕಲ್ಲಾ, ಪುರಸಭೆ ಸದಸ್ಯ ದೇವಿಂದ್ರ ಸುಬೇದಾರ, ರಾಜು ತಳವಾರ, ರವಿ ಕೋಳಕೂರ, ವೆಂಕಯ್ಯ ಗುತ್ತೆದಾರ ಈ ಸಂದರ್ಭದಲ್ಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ
Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.