![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 31, 2022, 5:33 PM IST
ಕಲಬುರಗಿ: ದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಕಾಲದಲ್ಲಿ ದೇಶಕ್ಕಾಗಿ ಪಕ್ಷ ನೀಡಿರುವ ನೀಡಿರುವ ಕೊಡುಗೆಗಳನ್ನು ಜನತೆಗೆ ತಿಳಿಸಲು ಕಲಬುರಗಿ ದಕ್ಷಿಣದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರ 2ನೇ ಹಂತದ ಜನಜಾಗೃತಿ ಪಾದಯಾತ್ರೆ ಮುಂದುವರಿದಿದ್ದು, ನಗರದ ಕೊಟನೂರ ಡಿ ಗ್ರಾಮದಲ್ಲಿ ಹಲವಾರು ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಮಾಜಿ ಎಂಎಲ್‌ಸಿ ಅಲ್ಲಂಪ್ರಭು ಪಾಟೀಲ ನೇತೃತ್ವದಲ್ಲಿನ ಕಾಂಗ್ರೆಸ್ ಪಕ್ಷದ ಪಾದಯಾತ್ರೆಯಲ್ಲಿ ಬ್ಲಾಕ್ ಕಾಂಗ್ರೆಸ್ ಮುಖಂಡರಾದ ನೀಲಕಂಠರಾವ್ ಮೂಲಗೆ, ಚೇತನ ಗೋನಾಯಕ, ಲಿಂಗರಾಜ ಕಣ್ಣಿ, ಲಿಂಗರಾಜ ತಾರಫೈಲ್ ಹಾಗೂ ಇನ್ನಿತರರು ಪಾಲ್ಗೊಂಡು, ಕಾಂಗ್ರೆಸ್ ಪಕ್ಷದ ಕೊಡುಗೆಗಳನ್ನು ವಿವರಿಸಿದರು.
ಕೊಟನೂರ ಡಿ ಗ್ರಾಮದ ಪಾದಯಾತ್ರೆಯಲ್ಲಿ ಮುಖಂಡರಾದ ಮಹಾದೇವಪ್ಪ ಪಟೀಲ್, ಸಂತೋಷ ಪಾಟೀಲ, ಜಗ್ಗು ಸಿರಸಗಿ, ಸುನೀಲ ಗೌನಳ್ಳಿ, ಶ್ರೀಶೈಲ ಹೂಗಾರ, ಚೇತನ ಸಾವಳಗಿ, ಅಂಬರೀಶ ಜಾನಿ, ಮಲ್ಲಿಕಾರ್ಜುನ ಗುಡೂರ್ ಹಾಗೂ ಇತರರು ವಿವಿಧ ಪಕ್ಷಗಳನ್ನು ತೆರೆದು ಕಾಂಗ್ರೆಸ್ ಸೇರಿದರು. ಕಾಂಗ್ರೆಸ್ ಪಕ್ಷದ ಮುಖಂಡ, ಮಾಜಿ ಎಂಎಲ್‌ಸಿ ಅಲ್ಲಂಪ್ರಭು ಪಾಟೀಲರು ಕಾಂಗ್ರೆಸ್ ಧ್ವಜ ನೀಡಿ ಸ್ವಾಗತಿಸಿಕೊಂಡರು. ಪಕ್ಷದ ಮುಖಂಡರಾದ ಗುಂಡಪ್ಪಾ ಲಂಡನಕರ್, ಲತಾ ರವಿ ರಾಠೊಡ್ ವಾಣಿಶ್ರೀ ಸಗರಕರ್, ಶೋಭಾ ಕಾಳೆ, ಅವಿನಾಶ ಭಾಸ್ಕರ ಹಾಗೂ ಪಕ್ಷದ ಹಿರಿಯ-ಕಿರಿಯ ಮುಖಂಡರು, ಗ್ರಾಮಸ್ಥರು ಪಾಲ್ಗೊಂಡಿದ್ದರು. ಮಂಗಳವಾರ ಪಾದಯಾತ್ರೆಯು ಪಾಣೆಗಾಂವ, ನಾಗನಳ್ಳಿ, ಕೋಟನೂರ್, ಉದನೂರ್, ಹುಣಸಿಹಡಗಿಲ್, ಸುಲ್ತಾನಪುರ್, ನಾಗನಹಳ್ಳಿ ಗ್ರಾಮಗಳ ಮೂಲಕ ಸಾಗಿ ಬಂತು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.